ಬೆಳಗಾವಿಯಲ್ಲಿ ಅಮೋಘ ‘ಗೆಲುವಿನ ಸಾಹುಕಾರ’ ಈ ರಮೇಶ್!
ಬೆಳಗಾವಿ: ಗೋಕಾಕ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಿಂದ ಬೇಸತ್ತು ರಾಜೀನಾಮೆ ನೀಡಿ ಕಾಂಗ್ರೆಸ್ನಿಂದ ಹೊರಬಂದಿದ್ದರು. ಬಳಿಕ ಬಿಜೆಪಿಗೆ ಸೇರ್ಪಡೆಯಾಗಿದ್ದ ರಮೇಶ್ ಸಹೋದರರ ವಿರುದ್ಧವೇ ತೊಡೆ ತಟ್ಟಿ ಇದೀಗ 27,324 ಮತಗಳ ಅಂತರದಲ್ಲಿ ಗೆದ್ದು ಬೀಗಿದ್ದಾರೆ. ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ 87,450 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿಗೆ 58,444 ಮತಗಳು ಬಂದಿವೆ. ಇನ್ನು ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿಗೆ 27,948 ಮತಗಳು ಬಿದ್ದಿವೆ.
ಬೆಳಗಾವಿ: ಗೋಕಾಕ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಿಂದ ಬೇಸತ್ತು ರಾಜೀನಾಮೆ ನೀಡಿ ಕಾಂಗ್ರೆಸ್ನಿಂದ ಹೊರಬಂದಿದ್ದರು. ಬಳಿಕ ಬಿಜೆಪಿಗೆ ಸೇರ್ಪಡೆಯಾಗಿದ್ದ ರಮೇಶ್ ಸಹೋದರರ ವಿರುದ್ಧವೇ ತೊಡೆ ತಟ್ಟಿ ಇದೀಗ 27,324 ಮತಗಳ ಅಂತರದಲ್ಲಿ ಗೆದ್ದು ಬೀಗಿದ್ದಾರೆ.
ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ 87,450 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿಗೆ 58,444 ಮತಗಳು ಬಂದಿವೆ. ಇನ್ನು ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿಗೆ 27,948 ಮತಗಳು ಬಿದ್ದಿವೆ.
Published On - 1:18 pm, Mon, 9 December 19