ಬೆಳಗಾವಿ: ಕಾಗವಾಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮಂತಗೌಡ ಪಾಟೀಲ್ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ನ ಮೈತ್ರಿ ಸರ್ಕಾರದ ಆಡಳಿತಕ್ಕೆ ಬೇಸತ್ತು ತಮ್ಮ ಸ್ವಪಕ್ಷ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಮೈತ್ರಿ ಸರ್ಕಾರ ಬಹುಮತ ಸಾಬೀತು ಪಡಿಸುವ ವೇಳೆ ಅನಾರೋಗ್ಯದ ನೆಪವಡ್ಡಿ ಶ್ರೀಮಂತ ಗೌಡ ಪಾಟೀಲ್ ಗೈರಾಗಿದ್ದರು.
ಕಾಗವಾಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮಂತಗೌಡ ಪಾಟೀಲ್ 76,952 ಮತಗಳನ್ನು ಗಳಿಸುವ ಮೂಲಕ ಜಯ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆ 58,395 ಮತಗಳನ್ನು ಪಡೆದಿದ್ದಾರೆ.
Published On - 1:32 pm, Mon, 9 December 19