ಚಪ್ಪಲಿ ಸೇವೆಗೆ ಸೇಡು ತೀರಿಸಿಕೊಂಡ KCN: ಸಿಎಂ ತವರೂರಲ್ಲಿ ಅರಳಿದ ಕಮಲ
ಮಂಡ್ಯ: ಕೆ.ಆರ್.ಪೇಟೆ ಕ್ಷೇತ್ರದ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ಜಯಭೇರಿ ಬಾರಿಸಿದ್ದಾರೆ. ಜೆಡಿಎಸ್ ತೊರೆದು ಬಿಜೆಪಿಗೆ ಸೇರಿದ್ದ ನಾರಾಯಣಗೌಡ 9731 ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತವರೂರಲ್ಲಿ ಕಮಲ ಅರಳಿದ ಹಿನ್ನೆಲೆಯಲ್ಲಿ ಸಿಹಿ ತಿನ್ನಿಸುವ ಮೂಲಕ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ 66,094 ಮತಗಳನ್ನು ಪಡೆದಿದ್ದು, ಜೆಡಿಎಸ್ ಅಭ್ಯರ್ಥಿ ಬಿ.ಎಲ್.ದೇವರಾಜ್‌ಗೆ 56,363 ಮತಗಳು ಬಂದಿವೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್‌ಗೆ 41,665 ಮತಗಳು ಬಿದ್ದಿವೆ.
ಮಂಡ್ಯ: ಕೆ.ಆರ್.ಪೇಟೆ ಕ್ಷೇತ್ರದ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ಜಯಭೇರಿ ಬಾರಿಸಿದ್ದಾರೆ. ಜೆಡಿಎಸ್ ತೊರೆದು ಬಿಜೆಪಿಗೆ ಸೇರಿದ್ದ ನಾರಾಯಣಗೌಡ 9731 ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತವರೂರಲ್ಲಿ ಕಮಲ ಅರಳಿದ ಹಿನ್ನೆಲೆಯಲ್ಲಿ ಸಿಹಿ ತಿನ್ನಿಸುವ ಮೂಲಕ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ.
ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ 66,094 ಮತಗಳನ್ನು ಪಡೆದಿದ್ದು, ಜೆಡಿಎಸ್ ಅಭ್ಯರ್ಥಿ ಬಿ.ಎಲ್.ದೇವರಾಜ್‌ಗೆ 56,363 ಮತಗಳು ಬಂದಿವೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್‌ಗೆ 41,665 ಮತಗಳು ಬಿದ್ದಿವೆ.
Published On - 12:09 pm, Mon, 9 December 19