ಅಂದು ವಿಧಾನಸೌಧಕ್ಕೆ ಓಡೋಡಿ ಬಂದಿದ್ದ ಭೈರತಿಗೆ ಇಂದು ನಿರಾಯಾಸದ ಗೆಲುವು
ಬೆಂಗಳೂರು: ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್-ಜೆಡಿಎಸ್ನ ಮೈತ್ರಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಭೈರತಿ ಬಸವರಾಜ್ ರಾಜೀನಾಮೆ ನೀಡಿ, ಬಿಜೆಪಿಗೆ ಸೇರ್ಪಡೆಯಾಗಿದ್ದರು. ಸುಪ್ರೀಂಕೋರ್ಟ್ ಸೂಚನೆಯಂತೆ ವಿಧಾನಸೌಧಕ್ಕೆ ತೆರಳುವಾಗ ಭೈರತಿ ಬಸವರಾಜ್ ಓಡೋಡಿ ಬಂದಿದ್ದರು. ಇಂದು ಭೈರತಿ ಬಸವರಾಜ್ ನಿರಾಯಾಸದ ಗೆಲುವು ಪಡೆದಿದ್ದಾರೆ. ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್ 83,332 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಂ.ನಾರಾಯಣಸ್ವಾಮಿ 37,886 ಮತಗಳನ್ನು ಪಡೆದಿದ್ದಾರೆ.
ಬೆಂಗಳೂರು: ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್-ಜೆಡಿಎಸ್ನ ಮೈತ್ರಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಭೈರತಿ ಬಸವರಾಜ್ ರಾಜೀನಾಮೆ ನೀಡಿ, ಬಿಜೆಪಿಗೆ ಸೇರ್ಪಡೆಯಾಗಿದ್ದರು. ಸುಪ್ರೀಂಕೋರ್ಟ್ ಸೂಚನೆಯಂತೆ ವಿಧಾನಸೌಧಕ್ಕೆ ತೆರಳುವಾಗ ಭೈರತಿ ಬಸವರಾಜ್ ಓಡೋಡಿ ಬಂದಿದ್ದರು. ಇಂದು ಭೈರತಿ ಬಸವರಾಜ್ ನಿರಾಯಾಸದ ಗೆಲುವು ಪಡೆದಿದ್ದಾರೆ.
ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್ 83,332 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಂ.ನಾರಾಯಣಸ್ವಾಮಿ 37,886 ಮತಗಳನ್ನು ಪಡೆದಿದ್ದಾರೆ.
Published On - 12:53 pm, Mon, 9 December 19