ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಗೋಪಾಲಯ್ಯ ಗೆಲುವಿನ ನಗೆ ಬೀರಿದ್ದಾರೆ. ಜೆಡಿಎಸ್ ಪಕ್ಷದಲ್ಲಿದ್ದ ಇವರು ಮೈತ್ರಿ ಸರ್ಕಾರದ ಆಡಳಿತಕ್ಕೆ ಬೇಸತ್ತು ರಾಜೀನಾಮೆ ನೀಡಿದ್ದರು. ಇದೀಗ ಬಿಜೆಪಿಯಿಂದ ಸ್ಪರ್ಧಿಸಿದ್ದ ಗೋಪಾಲಯ್ಯ 54,386 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಕೆ.ಗೋಪಾಲಯ್ಯ 85,889 ಮತಗಳು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಂ.ಶಿವರಾಜ್‌ಗೆ 31,503 ಮತಗಳು ಬಂದಿವೆ. ಜೆಡಿಎಸ್ ಅಭ್ಯರ್ಥಿ ಗಿರೀಶ್ ನಾಶಿ 23,516 ಮತಗಳಿಗೆ ತೃಪ್ತಿಪಟ್ಟುಕೊಂಡಿದ್ದಾರೆ.
Published On - 2:13 pm, Mon, 9 December 19