ಕೊನೆ ಕ್ಷಣದ ಅಭ್ಯರ್ಥಿ ಆದರೂ ರಾಣೆಬೆನ್ನೂರಿನಲ್ಲಿ ಗೆಲುವಿನ ಅರುಣೋದಯ!

ಹಾವೇರಿ: ರಾಣೆಬೆನ್ನೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ್‌ ಕುಮಾರ್‌ ಪೂಜಾರ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡಗೆ ಭಾರಿ ಮುಖಭಂಗವಾಗಿದೆ. 2013ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಅರುಣ್ ಕುಮಾರ್ ಪರಾಭವಗೊಂಡಿದ್ದರು. ಈ ಬಾರಿ ಕೊನೆ ಕ್ಷಣದಲ್ಲಿ ಅರುಣ್ ಕುಮಾರ್ ಪೂಜಾರಗೆ ಬಿಜೆಪಿ ಟಿಕೆಟ್ ನೀಡಿತ್ತು.ಇದೀಗ 23,222 ಮತಗಳ ಅಂತರದಿಂದ ಅರುಣ್‌ ಕುಮಾರ್‌ ಜಯಶೀಲರಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಅರುಣ್‌ ಕುಮಾರ್‌ 95,438 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡಗೆ 72,216 ಮತಗಳು ಬಂದಿದ್ದು, ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಹಲಗೇರಿಗೆ […]

ಕೊನೆ ಕ್ಷಣದ ಅಭ್ಯರ್ಥಿ ಆದರೂ ರಾಣೆಬೆನ್ನೂರಿನಲ್ಲಿ ಗೆಲುವಿನ ಅರುಣೋದಯ!
ಸಾಧು ಶ್ರೀನಾಥ್​

Updated on: Dec 09, 2019 | 3:49 PM

ಹಾವೇರಿ: ರಾಣೆಬೆನ್ನೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ್‌ ಕುಮಾರ್‌ ಪೂಜಾರ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡಗೆ ಭಾರಿ ಮುಖಭಂಗವಾಗಿದೆ. 2013ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಅರುಣ್ ಕುಮಾರ್ ಪರಾಭವಗೊಂಡಿದ್ದರು. ಈ ಬಾರಿ ಕೊನೆ ಕ್ಷಣದಲ್ಲಿ ಅರುಣ್ ಕುಮಾರ್ ಪೂಜಾರಗೆ ಬಿಜೆಪಿ ಟಿಕೆಟ್ ನೀಡಿತ್ತು.ಇದೀಗ 23,222 ಮತಗಳ ಅಂತರದಿಂದ ಅರುಣ್‌ ಕುಮಾರ್‌ ಜಯಶೀಲರಾಗಿದ್ದಾರೆ.

ಬಿಜೆಪಿ ಅಭ್ಯರ್ಥಿ ಅರುಣ್‌ ಕುಮಾರ್‌ 95,438 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡಗೆ 72,216 ಮತಗಳು ಬಂದಿದ್ದು, ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಹಲಗೇರಿಗೆ ಕೇವಲ 979 ಮತಗಳು ಬಿದ್ದಿವೆ.

Published On - 12:44 pm, Mon, 9 December 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us