ಬಳ್ಳಾರಿ: ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಭಾರಿ ಅಂತರಗಳ ಮತಗಳಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ವಿಜಯನಗರ ಪ್ರತ್ಯೇಕ ಜಿಲ್ಲೆಗೆ ಬೇಡಿಕೆಯಿಟ್ಟು ಕಾಂಗ್ರೆಸ್ ಶಾಸಕರಾಗಿದ್ದ ಆನಂದ್ ಸಿಂಗ್ ಮೊದಲಿಗೆ ರಾಜೀನಾಮೆ ನೀಡಿದ್ದರು. ಬಳಿಕ ಉಳಿದವರೂ ರಾಜೀನಾಮೆ ನೀಡಿ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದರು.
ಇದೀಗ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ 30,125 ಮತಗಳ ಅಂತರದಿಂದ ಅಮೋಘ ಗೆಲುವು ಸಾಧಿಸಿದ್ದಾರೆ. ಆನಂದ್ ಸಿಂಗ್ ಒಟ್ಟು 85,477 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ 55,352 ಮತಗಳಿಗೆ ತೃಪ್ತಿಯಾಗಿದ್ದಾರೆ. ಜೆಡಿಎಸ್ ಅಭ್ಯರ್ಥಿ ಎನ್.ಎಂ.ನಬಿಗೆ ಕೇವಲ 3,885 ಮತಗಳು ಬಿದ್ದಿವೆ.
Published On - 1:36 pm, Mon, 9 December 19