ಯಶವಂತಪುರದಲ್ಲಿ ಸೋಮಶೇಖರ್‌ ಅಮೋಘ ಗೆಲುವು

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್‌ ಗೆಲುವಿನ ನಗೆ ಬೀರಿದ್ದಾರೆ. ಮೈತ್ರಿ ಸರ್ಕಾರದ ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದರು. ನಂತರ ಬಿಜೆಪಿಯಿಂದ ಅಖಾಡಕ್ಕಿಳಿದಿದ್ದ ಸೋಮಶೇಖರ್ 27,686 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸೋಮಶೇಖರ್‌ 1,44,676 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್​ ಅಭ್ಯರ್ಥಿ ಜವರಾಯಿಗೌಡಗೆ 1,16,990 ಮತಗಳು ಬಂದಿವೆ. ಕಾಂಗ್ರೆಸ್ ಅಭ್ಯರ್ಥಿ ಪಿ.ನಾಗರಾಜ್‌ಗೆ ಕೇವಲ 15,707 ಮತಗಳು ಬಿದ್ದಿವೆ.

ಯಶವಂತಪುರದಲ್ಲಿ ಸೋಮಶೇಖರ್‌ ಅಮೋಘ ಗೆಲುವು
ಸಚಿವ ಎಸ್​.ಟಿ ​ಸೋಮಶೇಖರ್ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​

Updated on: Dec 09, 2019 | 4:17 PM

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್‌ ಗೆಲುವಿನ ನಗೆ ಬೀರಿದ್ದಾರೆ. ಮೈತ್ರಿ ಸರ್ಕಾರದ ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದರು. ನಂತರ ಬಿಜೆಪಿಯಿಂದ ಅಖಾಡಕ್ಕಿಳಿದಿದ್ದ ಸೋಮಶೇಖರ್ 27,686 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಸೋಮಶೇಖರ್‌ 1,44,676 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್​ ಅಭ್ಯರ್ಥಿ ಜವರಾಯಿಗೌಡಗೆ 1,16,990 ಮತಗಳು ಬಂದಿವೆ. ಕಾಂಗ್ರೆಸ್ ಅಭ್ಯರ್ಥಿ ಪಿ.ನಾಗರಾಜ್‌ಗೆ ಕೇವಲ 15,707 ಮತಗಳು ಬಿದ್ದಿವೆ.

Published On - 1:58 pm, Mon, 9 December 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us