ಬೆಳಗಾವಿ ಲೋಕಸಭಾ ಕ್ಷೇತ್ರದ ಬೈಎಲೆಕ್ಷನ್: ದಿ.ಸುರೇಶ್ ಅಂಗಡಿ ಪತ್ನಿಗೆ ಬಿಜೆಪಿ ಟಿಕೆಟ್
ಏ.17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬೈಎಲೆಕ್ಷನ್ಗೆ ಮಂಗಳಾ ಅಂಗಡಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಮಾಜಿ ಕೇಂದ್ರ ಸಚಿವ ದಿ.ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಅಂಗಡಿ ಅವರಿಗೆ ಪಕ್ಷದ ಟಿಕೆಟ್ ಸಿಕ್ಕಿದೆ.
ಬೆಂಗಳೂರು: ಏ.17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬೈಎಲೆಕ್ಷನ್ಗೆ ಮಂಗಳಾ ಅಂಗಡಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಮಾಜಿ ಕೇಂದ್ರ ಸಚಿವ ದಿ.ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಅಂಗಡಿ ಅವರಿಗೆ ಪಕ್ಷದ ಟಿಕೆಟ್ ಸಿಕ್ಕಿದೆ.
ಇದಲ್ಲದೆ, ಏ.17ರಂದು ನಡೆಯಲಿರುವ ಮಸ್ಕಿ ಮತ್ತು ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಗೆ ಮಸ್ಕಿ ಕ್ಷೇತ್ರದಿಂದ ಪ್ರತಾಪಗೌಡ ಪಾಟೀಲ್ ಹಾಗೂ ಬಸವಕಲ್ಯಾಣ ಕ್ಷೇತ್ರದಿಂದ ಶರಣು ಸಲಗರಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.
ಅನುಕಂಪದ ಮತಗಳ ಮೇಲೆ ವಿಶ್ವಾಸವಿಟ್ಟು ಮಂಗಳಾಗೆ ಟಿಕೆಟ್ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣಾ ಕಣಕ್ಕೆ ಕಾಂಗ್ರೆಸ್ನಿಂದ ಸತೀಶ್ ಜಾರಕಿಹೊಳಿ ಅಭ್ಯರ್ಥಿಯಾದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ತನ್ನ ಕಾರ್ಯತಂತ್ರ ಬದಲಿಸಿದೆ. ಅನುಕಂಪದ ಮತಗಳ ಮೇಲೆ ವಿಶ್ವಾಸವಿಟ್ಟು ದಿ.ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿಗೆ ಟಿಕೆಟ್ ನೀಡಿದೆ.
ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ರಿಲೀಸ್ ಹಿನ್ನೆಲೆಯಲ್ಲಿ ಮಹಿಳಾ ಅಭ್ಯರ್ಥಿ ಕಣಕ್ಕಿಳಿಸಿದರೆ ಯಾರೂ ಪ್ರಶ್ನಿಸುವುದಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪ್ರಬಲ ಅಭ್ಯರ್ಥಿ. ಬೆಳಗಾವಿ ಜಿಲ್ಲೆಯ ಪ್ರಭಾವಿ ರಾಜಕಾರಣಿಯಾಗಿರುವ ಹಿನ್ನೆಲೆಯಲ್ಲಿ ಅನುಕಂಪದ ಅಲೆ ವರ್ಕೌಟ್ ಆಗುತ್ತೆ ಎಂದು ದಿ.ಸುರೇಶ್ ಅಂಗಡಿ ಪತ್ನಿಗೆ ಬಿಜೆಪಿ ಟಿಕೆಟ್ ನೀಡಿದೆ. ಜೊತೆಗೆ, ಬೆಳಗಾವಿ ಕ್ಷೇತ್ರದಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕ. ಹೀಗಾಗಿ, ಲಿಂಗಾಯತ ಸಮುದಾಯದ ಮಂಗಳಾಗೆ ಟಿಕೆಟ್ ನೀಡಲಾಗಿದೆ.
ಅಂದ ಹಾಗೆ, ಬೆಳಗಾವಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳದ್ದೆಲ್ಲ ಒಂದೇ ಬೇಡಿಕೆ ಇತ್ತಂತೆ. ದಿ.ಸುರೇಶ್ ಅಂಗಡಿ ಕುಟುಂಬಕ್ಕೆ ಟಿಕೆಟ್ ನೀಡಿದ್ದರೆ ಉಪಚುನಾವಣೆ ಅಭ್ಯರ್ಥಿಯಾಗಿ ನಮ್ಮನ್ನು ಪರಿಗಣಿಸಬೇಕು ಎಂದು. ಸುಮಾರು 30ಕ್ಕೂ ಹೆಚ್ಚು ಆಕಾಂಕ್ಷಿಗಳು ಈ ರೀತಿ ಒತ್ತಾಯಿಸಿದ್ದರಂತೆ. ಒಂದು ವೇಳೆ, ಶ್ರದ್ಧಾ ಶೆಟ್ಟರ್ಗೆ ಬಿಜೆಪಿ ಟಿಕೆಟ್ ನೀಡಿದ್ರೆ 30ಕ್ಕೂ ಹೆಚ್ಚು ಟಿಕೆಟ್ ಆಕಾಂಕ್ಷಿಗಳಿಂದ ಬಂಡಾಯದ ಭೀತಿ ಎದುರಾಗಿತ್ತು. ಆದ್ದರಿಂದ, ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಕೊನೆ ಕ್ಷಣದಲ್ಲಿ ಬಿಜೆಪಿ ದಿ.ಸುರೇಶ್ ಅಂಗಡಿ ಪತ್ನಿ ಮಂಗಳಾಗೆ ಟಿಕೆಟ್ ಘೋಷಣೆ ಮಾಡಿದೆ.
ಈ ನಡುವೆ, ಬಸವಕಲ್ಯಾಣ ಕ್ಷೇತ್ರದಲ್ಲಿ ಪಕ್ಷದ ಟಿಕೆಟ್ ಆಕಾಂಕ್ಷಿ ಮಲ್ಲಿಕಾರ್ಜುಕ ಖೂಬಾಗೆ ನಿರಾಸೆಯಾಗಿದೆ. ಬೈಎಲೆಕ್ಷನ್ ಟಿಕೆಟ್ ನಿರೀಕ್ಷೆಯಲ್ಲಿದ್ದ ಮಲ್ಲಿಕಾರ್ಜುನ ಖೂಬಾಗೆ ನಿರಾಸೆಯಾಗಿದೆ.
ರಾಜ್ಯ ಬಿಜೆಪಿ ಕೋರ್ ಕಮಿಟಿ ಪುನಾರಚನೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಪುನಾರಚನೆ ಆಗಿದೆ. ಬಿಜೆಪಿ ಕೋರ್ ಕಮಿಟಿಗೆ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ, ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಬಿ.ಶ್ರೀರಾಮುಲು ಹಾಗೂ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಸೇರ್ಪಡೆ ಆಗಿದ್ದಾರೆ. ಕೋರ್ ಕಮಿಟಿ ಸದಸ್ಯರಾಗಿದ್ದ ಸಿ.ಟಿ.ರವಿ ವಿಶೇಷ ಆಹ್ವಾನಿತರಾಗಿ ನೇಮಕಗೊಂಡಿದ್ದಾರೆ.
13 ಸದಸ್ಯರ, 3 ವಿಶೇಷ ಆಹ್ವಾನಿತರ ಕಮಿಟಿ ಪುನಾರಚನೆ ಆಗಿದೆ. ಪಕ್ಷದ ವರಿಷ್ಠರು ರಾಜ್ಯದ ಕೋರ್ ಕಮಿಟಿ ಪುನರ್ ರಚಿಸಿದ್ದಾರೆ. ಈ ನಡುವೆ, ಸಚಿವ ಲಿಂಬಾವಳಿ ಮತ್ತು ಶಾಸಕ ಸಿ.ಎಂ.ಉದಾಸಿ ಅವರನ್ನು ಕಮಿಟಿಯಿಂದ ಕೈಬಿಡಲಾಗಿದೆ.
‘ಕೈ’ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್ ಏ.17ರಂದು ರಾಜ್ಯದ 3 ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆಯಲ್ಲಿ ‘ಕೈ’ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್ ಆಗಿದೆ. ಅಂತೆಯೇ, ಸತೀಶ್ ಜಾರಕಿಹೊಳಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸತೀಶ್ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇತ್ತ, ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಬಸವರಾಜ್ ತುರುವಿಹಾಳ್ ನಾಮಪತ್ರ ಸಲ್ಲಿಸಲಿದ್ದಾರೆ. ಬಸವರಾಜ್ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಜೊತೆಗೆ, ಬಸವಕಲ್ಯಾಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ. ಮಾ.30ರಂದು ಮಲ್ಲಮ್ಮ ನಾರಾಯಣರಾವ್ ನಾಮಪತ್ರ ಸಲ್ಲಿಸಲಿದ್ದಾರೆ.
ಇದನ್ನೂ ಓದಿ:ಪತಿಯಷ್ಟು ಕೆಲಸ ಮಾಡಲು ಆಗದಿದ್ರೂ ನನ್ನ ಕೈಲಾದಷ್ಟು ಮಾಡ್ತೇನೆ -ಮಂಗಳಾ ಅಂಗಡಿ ಕಣ್ಣೀರು
Published On - 9:21 pm, Thu, 25 March 21