ಬೆಳಗಾವಿ ಲೋಕಸಭಾ ಕ್ಷೇತ್ರದ ಬೈಎಲೆಕ್ಷನ್​: ದಿ.ಸುರೇಶ್ ಅಂಗಡಿ ಪತ್ನಿಗೆ ಬಿಜೆಪಿ ಟಿಕೆಟ್​

|

Updated on: Mar 25, 2021 | 11:35 PM

ಏ.17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬೈಎಲೆಕ್ಷನ್​ಗೆ ಮಂಗಳಾ ಅಂಗಡಿಗೆ ಬಿಜೆಪಿ ಟಿಕೆಟ್​ ನೀಡಲಾಗಿದೆ. ಮಾಜಿ ಕೇಂದ್ರ ಸಚಿವ ದಿ.ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಅಂಗಡಿ ಅವರಿಗೆ ಪಕ್ಷದ ಟಿಕೆಟ್​ ಸಿಕ್ಕಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ಬೈಎಲೆಕ್ಷನ್​: ದಿ.ಸುರೇಶ್ ಅಂಗಡಿ ಪತ್ನಿಗೆ ಬಿಜೆಪಿ ಟಿಕೆಟ್​
ಮಂಗಳಾ ಅಂಗಡಿ
Follow us on

ಬೆಂಗಳೂರು: ಏ.17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬೈಎಲೆಕ್ಷನ್​ಗೆ ಮಂಗಳಾ ಅಂಗಡಿಗೆ ಬಿಜೆಪಿ ಟಿಕೆಟ್​ ನೀಡಲಾಗಿದೆ. ಮಾಜಿ ಕೇಂದ್ರ ಸಚಿವ ದಿ.ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಅಂಗಡಿ ಅವರಿಗೆ ಪಕ್ಷದ ಟಿಕೆಟ್​ ಸಿಕ್ಕಿದೆ.

ಇದಲ್ಲದೆ, ಏ.17ರಂದು ನಡೆಯಲಿರುವ ಮಸ್ಕಿ ಮತ್ತು ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಗೆ ಮಸ್ಕಿ ಕ್ಷೇತ್ರದಿಂದ ಪ್ರತಾಪಗೌಡ ಪಾಟೀಲ್​ ಹಾಗೂ ಬಸವಕಲ್ಯಾಣ ಕ್ಷೇತ್ರದಿಂದ ಶರಣು ಸಲಗರಗೆ ಬಿಜೆಪಿ ಟಿಕೆಟ್​ ನೀಡಲಾಗಿದೆ.

ಅನುಕಂಪದ ಮತಗಳ ಮೇಲೆ ವಿಶ್ವಾಸವಿಟ್ಟು ಮಂಗಳಾಗೆ ಟಿಕೆಟ್​
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣಾ ಕಣಕ್ಕೆ ಕಾಂಗ್ರೆಸ್​ನಿಂದ ಸತೀಶ್ ಜಾರಕಿಹೊಳಿ ಅಭ್ಯರ್ಥಿಯಾದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ತನ್ನ ಕಾರ್ಯತಂತ್ರ ಬದಲಿಸಿದೆ. ಅನುಕಂಪದ ಮತಗಳ ಮೇಲೆ ವಿಶ್ವಾಸವಿಟ್ಟು ದಿ.ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿಗೆ ಟಿಕೆಟ್​ ನೀಡಿದೆ.

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ರಿಲೀಸ್ ಹಿನ್ನೆಲೆಯಲ್ಲಿ ಮಹಿಳಾ ಅಭ್ಯರ್ಥಿ ಕಣಕ್ಕಿಳಿಸಿದರೆ ಯಾರೂ ಪ್ರಶ್ನಿಸುವುದಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪ್ರಬಲ ಅಭ್ಯರ್ಥಿ. ಬೆಳಗಾವಿ ಜಿಲ್ಲೆಯ ಪ್ರಭಾವಿ ರಾಜಕಾರಣಿಯಾಗಿರುವ ಹಿನ್ನೆಲೆಯಲ್ಲಿ ಅನುಕಂಪದ ಅಲೆ ವರ್ಕೌಟ್ ಆಗುತ್ತೆ ಎಂದು ದಿ.ಸುರೇಶ್​ ಅಂಗಡಿ ಪತ್ನಿಗೆ  ಬಿಜೆಪಿ ಟಿಕೆಟ್​ ನೀಡಿದೆ. ಜೊತೆಗೆ, ಬೆಳಗಾವಿ ಕ್ಷೇತ್ರದಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕ. ಹೀಗಾಗಿ, ಲಿಂಗಾಯತ ಸಮುದಾಯದ ಮಂಗಳಾಗೆ ಟಿಕೆಟ್​ ನೀಡಲಾಗಿದೆ.

ಅಂದ ಹಾಗೆ, ಬೆಳಗಾವಿ ಬಿಜೆಪಿ ಟಿಕೆಟ್​ ಆಕಾಂಕ್ಷಿಗಳದ್ದೆಲ್ಲ ಒಂದೇ ಬೇಡಿಕೆ ಇತ್ತಂತೆ. ದಿ.ಸುರೇಶ್ ಅಂಗಡಿ ಕುಟುಂಬಕ್ಕೆ ಟಿಕೆಟ್​ ನೀಡಿದ್ದರೆ ಉಪಚುನಾವಣೆ ಅಭ್ಯರ್ಥಿಯಾಗಿ ನಮ್ಮನ್ನು ಪರಿಗಣಿಸಬೇಕು ಎಂದು. ಸುಮಾರು 30ಕ್ಕೂ ಹೆಚ್ಚು ಆಕಾಂಕ್ಷಿಗಳು ಈ ರೀತಿ ಒತ್ತಾಯಿಸಿದ್ದರಂತೆ. ಒಂದು ವೇಳೆ, ಶ್ರದ್ಧಾ ಶೆಟ್ಟರ್​ಗೆ ಬಿಜೆಪಿ ಟಿಕೆಟ್ ನೀಡಿದ್ರೆ 30ಕ್ಕೂ ಹೆಚ್ಚು ಟಿಕೆಟ್ ಆಕಾಂಕ್ಷಿಗಳಿಂದ ಬಂಡಾಯದ ಭೀತಿ ಎದುರಾಗಿತ್ತು. ಆದ್ದರಿಂದ, ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಕೊನೆ ಕ್ಷಣದಲ್ಲಿ ಬಿಜೆಪಿ ದಿ.ಸುರೇಶ್ ಅಂಗಡಿ ಪತ್ನಿ ಮಂಗಳಾಗೆ ಟಿಕೆಟ್​ ಘೋಷಣೆ ಮಾಡಿದೆ.

ಈ ನಡುವೆ,  ಬಸವಕಲ್ಯಾಣ ಕ್ಷೇತ್ರದಲ್ಲಿ ಪಕ್ಷದ ಟಿಕೆಟ್​ ಆಕಾಂಕ್ಷಿ ಮಲ್ಲಿಕಾರ್ಜುಕ ಖೂಬಾಗೆ ನಿರಾಸೆಯಾಗಿದೆ. ಬೈಎಲೆಕ್ಷನ್​ ಟಿಕೆಟ್ ನಿರೀಕ್ಷೆಯಲ್ಲಿದ್ದ ಮಲ್ಲಿಕಾರ್ಜುನ ಖೂಬಾಗೆ ನಿರಾಸೆಯಾಗಿದೆ.

ರಾಜ್ಯ ಬಿಜೆಪಿ ಕೋರ್ ಕಮಿಟಿ ಪುನಾರಚನೆ
ರಾಜ್ಯ ಬಿಜೆಪಿ ಕೋರ್ ಕಮಿಟಿ ಪುನಾರಚನೆ ಆಗಿದೆ. ಬಿಜೆಪಿ ಕೋರ್ ಕಮಿಟಿಗೆ ಡಿಸಿಎಂ ಡಾ.ಅಶ್ವತ್ಥ್​ ನಾರಾಯಣ, ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಬಿ.ಶ್ರೀರಾಮುಲು ಹಾಗೂ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಸೇರ್ಪಡೆ ಆಗಿದ್ದಾರೆ. ಕೋರ್ ಕಮಿಟಿ ಸದಸ್ಯರಾಗಿದ್ದ ಸಿ.ಟಿ.ರವಿ ವಿಶೇಷ ಆಹ್ವಾನಿತರಾಗಿ ನೇಮಕಗೊಂಡಿದ್ದಾರೆ.

13 ಸದಸ್ಯರ, 3 ವಿಶೇಷ ಆಹ್ವಾನಿತರ ಕಮಿಟಿ ಪುನಾರಚನೆ ಆಗಿದೆ. ಪಕ್ಷದ ವರಿಷ್ಠರು ರಾಜ್ಯದ ಕೋರ್ ಕಮಿಟಿ ಪುನರ್ ರಚಿಸಿದ್ದಾರೆ. ಈ ನಡುವೆ,
ಸಚಿವ ಲಿಂಬಾವಳಿ ಮತ್ತು ಶಾಸಕ ಸಿ.ಎಂ.ಉದಾಸಿ ಅವರನ್ನು ಕಮಿಟಿಯಿಂದ ಕೈಬಿಡಲಾಗಿದೆ.

‘ಕೈ’ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್
ಏ.17ರಂದು ರಾಜ್ಯದ 3 ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆಯಲ್ಲಿ ‘ಕೈ’ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್ ಆಗಿದೆ. ಅಂತೆಯೇ, ಸತೀಶ್ ಜಾರಕಿಹೊಳಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸತೀಶ್​ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇತ್ತ, ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಬಸವರಾಜ್ ತುರುವಿಹಾಳ್‌ ನಾಮಪತ್ರ ಸಲ್ಲಿಸಲಿದ್ದಾರೆ. ಬಸವರಾಜ್ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಜೊತೆಗೆ, ಬಸವಕಲ್ಯಾಣ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ. ಮಾ.30ರಂದು ಮಲ್ಲಮ್ಮ ನಾರಾಯಣರಾವ್ ನಾಮಪತ್ರ ಸಲ್ಲಿಸಲಿದ್ದಾರೆ.

ಇದನ್ನೂ ಓದಿ:ಪತಿಯಷ್ಟು ಕೆಲಸ ಮಾಡಲು ಆಗದಿದ್ರೂ ನನ್ನ ಕೈಲಾದಷ್ಟು ಮಾಡ್ತೇನೆ -ಮಂಗಳಾ ಅಂಗಡಿ ಕಣ್ಣೀರು

Published On - 9:21 pm, Thu, 25 March 21