Big News: ಸಾರ್ವಜನಿಕ ದೇಗುಲ ತೆರವು ತಡೆಯಲು ಪ್ರತ್ಯೇಕ ವಿಧೇಯಕ ಮಂಡನೆಗೆ ಸಂಪುಟ ಸಭೆ ನಿರ್ಧಾರ

ದೇಗುಲ ತೆರವು ಕಾರ್ಯಾಚರಣೆ ವಿರೋಧಿಸಿ ವ್ಯಾಪಕ ಜನಾಕ್ರೋಶ ಸೃಷ್ಟಿಯಾಗಿತ್ತು.

Big News: ಸಾರ್ವಜನಿಕ ದೇಗುಲ ತೆರವು ತಡೆಯಲು ಪ್ರತ್ಯೇಕ ವಿಧೇಯಕ ಮಂಡನೆಗೆ ಸಂಪುಟ ಸಭೆ ನಿರ್ಧಾರ
ದೇಗುಲ ತೆರವು ಕಾರ್ಯಾಚರಣೆ
Follow us
TV9 Web
| Updated By: guruganesh bhat

Updated on:Sep 20, 2021 | 11:41 AM

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿರುವ ದೇಗುಲ ತೆರವು ಮಾಡದಂತೆ ಪ್ರತ್ಯೇಕ ವಿಧೇಯಕ ಮಂಡಿಸಲು ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಜತೆಗೆ 3 ಪಾಲಿಕೆಗಳಿಗೆ ಮೇಯರ್ ಚುನಾವಣೆ ನಡೆಸಲು ಸಹ ಸಚಿವ ಸಂಪುಟದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಸುಪ್ರೀಂ ಕೋರ್ಟ್ ಆದೇಶ ಪಾಲಿಸುವ ತಕ್ಷಣದ ಅಗತ್ಯತೆಯಿಂದ ಪಾರಾಗಲು ವಿಧೇಯಕ ಮಂಡಿಸುವ ಮೂಲಕ ಕಾಯ್ದೆ ಜಾರಿಗೆ ಸಚಿವ ಸಂಪುಟದ ಅನುಮೋದನೆ ಪಡೆಯಲಾಗಿದೆ. ಬಹುತೇಕ ಇಂದೇ ವಿಧಾನಸಭೆಯಲ್ಲಿ ಸರ್ಕಾರ ವಿಧೇಯಕವನ್ನು ಮಂಡಿಸುವ ಸಾಧ್ಯತೆಯಿದೆ. ಈಮುನ್ನ ಸುದ್ದಿಗಾರರ ಜತೆ ಮಅತನಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯಾವುದೇ ದೇಗುಲ ತೆರವುಗೊಳಿಸದಂತೆ ಸೂಚನೆ ನಿಡಿದ್ದಾಗಿ ತಿಳಿಸಿದ್ದರು.

ನಂಜನಗೂಡು ಹುಚ್ಚಗಣಿ ಮಹದೇವಮ್ಮ ದೇಗುಲ ತೆರವು: ಗ್ರಾಮಸ್ಥರ ಪ್ರತಿಭಟನೆ, ಕಾಂಗ್ರೆಸ್ ಆಕ್ರೋಶ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ-ಹೊಮ್ಮರಗಳ್ಳಿ ರಸ್ತೆಯಲ್ಲಿರುವ ಹುಚ್ಚಗಣಿ ಮಹದೇವಮ್ಮ ದೇಗುಲ ತೆರವುಗೊಳಿಸುವಾಗ ಗ್ರಾಮಸ್ಥರಿಗೆ ಮಾಹಿತಿ ನೀಡಿರಲಿಲ್ಲ. ಸೂಕ್ತ ರೀತಿಯಲ್ಲಿ ಪರಾಮರ್ಶಿಸಿಲ್ಲ ಎಂಬ ವಿಚಾರ ಜಿಲ್ಲೆಯಲ್ಲಿ ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಬುಧವಾರ ಹುಲ್ಲಹಳ್ಳಿದಲ್ಲಿರುವ ದೇಗುಲಕ್ಕೆ ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತನಾಡಿದರು. ಗ್ರಾಮಸ್ಥರಿಗೆ ಮಾಹಿತಿ ನೀಡದೆ ದೇಗುಲ ಕೆಡವಲಾಗಿದೆ ಎಂದು ಆರೋಪಿಸಿದ ಅವರು, ಜನರನ್ನು ವಿಶ್ವಾಸಕ್ಕೆ‌ ತೆಗೆದುಕೊಂಡು ತೆರವು ಕಾರ್ಯಾಚರಣೆ ನಡೆಸಬೇಕಿತ್ತು ಎಂದರು.

ದೇವಾಲಯ ಕಟ್ಟುವುದರಲ್ಲಿ ಮಾತ್ರವಲ್ಲ ಕೆಡವುದರಲ್ಲಿಯೂ ಬಿಜೆಪಿ ರಾಜಕಾರಣ ಮಾಡುತ್ತಿದೆ. ಗ್ರಾಮಸ್ಥರ ಸಭೆ ಮಾಡಿ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತೆರವು ಮಾಡಬೇಕಿತ್ತು. ರಸ್ತೆ ಬದಿಯಲ್ಲಿರುವ ಹಲವು ದೇವಾಲಯಗಳನ್ನು ಈ ಹಿಂದೆಯೂ ತೆರವು ಮಾಡಲಾಗಿದೆ. ನಾನು ಸಂಸದನಾಗಿದ್ದಾಗಲೂ ದೇಗುಲಗಳನ್ನು ತೆರವು ಮಾಡಿಸಿದ್ದೇನೆ. ಆದರೆ ಈ ಬಾರಿ ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಸಮಸ್ಯೆಗೆ ಕಾರಣವಾಗಿದೆ. ಹಳೇ ದೇಗುಲ ಪಕ್ಕದಲ್ಲಿಯೇ ಮತ್ತೊಂದು ದೇಗುಲ ನಿರ್ಮಿಸಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ಜಮೀನು ನೀಡಲು ಭಕ್ತರ ಒಪ್ಪಿಗೆ ನೂತನ‌ ದೇಗುಲ ನಿರ್ಮಾಣಕ್ಕೆ ಜಾಗ ನೀಡಲು ಗ್ರಾಮಸ್ಥರಾದ ನಾಗಣ್ಣ ಮತ್ತು ಭಾಗ್ಯಮ್ಮ ಒಪ್ಪಿಗೆ ಸೂಚಿಸಿದ್ದಾರೆ. ಹಳೇ ದೇಗುಲದ ಹಿಂಭಾಗದಲ್ಲಿಯೇ ಇವರ ಜಮೀನು ಇದೆ. ಸದ್ಯಕ್ಕೆ 5 ಗುಂಟೆ ಜಮೀನು ಕೊಡುತ್ತೇವೆ. ಹೆಚ್ಚುವರಿ ಜಾಗ ಬೇಕಿದ್ದರೂ ನಾವು ಸಿದ್ಧ ಎಂದು ಭರವಸೆ ನೀಡಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಇದನ್ನೂ ಓದಿ: 

ನಂಜನಗೂಡು ಹುಚ್ಚಗಣಿ ಮಹದೇವಮ್ಮ ದೇಗುಲ ತೆರವು: ಗ್ರಾಮಸ್ಥರ ಪ್ರತಿಭಟನೆ, ಕಾಂಗ್ರೆಸ್ ಆಕ್ರೋಶ

ಇನ್ನೂ 92 ದೇಗುಲಗಳು ಇವೆ; ಅವುಗಳನ್ನು ಮುಟ್ಟಲು ಬಿಡಲ್ಲ- ನಂಜನಗೂಡು ದೇಗುಲ ತೆರವು ಬಳಿಕ ಪ್ರತಾಪ್ ಸಿಂಹ ವಾಗ್ದಾಳಿ

(Karnataka Cabinet Decides form a bill to stop public temple demolish)

Published On - 10:20 am, Mon, 20 September 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ