ರಾಜ್ಯಾದ್ಯಂತ ಹೆಚ್ಚಿದ ಪೌರತ್ವದ ಜ್ವಾಲೆ: ಶಾಂತಿ ಕಾಪಾಡುವಂತೆ ಸಿಎಂ ಮನವಿ
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಯ ಕಿಚ್ಚು ಹೆಚ್ಚಾಗಿದೆ. ಈ ಸಂಬಂಧ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ ರಾಜ್ಯದಲ್ಲಿ ಶಾಂತಿ ಕದಡಲು ಬಿಡಬೇಡಿ, ಶಾಂತಿ ಕಾಪಾಡುವಂತೆ ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ. ಪ್ರತಿಭಟನಾಕಾರರ ಮೇಲೆ ಟೌನ್‌ಹಾಲ್‌ನಲ್ಲಿ ಪೊಲೀಸರಿಂದ ಲಾಠಿಚಾರ್ಜ್ ಹಿನ್ನೆಲೆ ಯಾವ ಅಧಿಕಾರಿಯೂ ಕಾನೂನು ಕೈಗೆತ್ತಿಕೊಳ್ಳಬಾರದು. ಪೊಲೀಸರು ಯಾರ ಮೇಲೂ ಲಾಠಿಚಾರ್ಜ್ ಮಾಡಬಾರದು. ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಮಾಡದಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ಒಂದು ವೇಳೆ ಲಾಠಿಚಾರ್ಜ್ ಮಾಡಿದ್ದು ಕಂಡರೆ ಅವರ […]
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಯ ಕಿಚ್ಚು ಹೆಚ್ಚಾಗಿದೆ. ಈ ಸಂಬಂಧ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ ರಾಜ್ಯದಲ್ಲಿ ಶಾಂತಿ ಕದಡಲು ಬಿಡಬೇಡಿ, ಶಾಂತಿ ಕಾಪಾಡುವಂತೆ ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ.
ಪ್ರತಿಭಟನಾಕಾರರ ಮೇಲೆ ಟೌನ್‌ಹಾಲ್‌ನಲ್ಲಿ ಪೊಲೀಸರಿಂದ ಲಾಠಿಚಾರ್ಜ್ ಹಿನ್ನೆಲೆ ಯಾವ ಅಧಿಕಾರಿಯೂ ಕಾನೂನು ಕೈಗೆತ್ತಿಕೊಳ್ಳಬಾರದು. ಪೊಲೀಸರು ಯಾರ ಮೇಲೂ ಲಾಠಿಚಾರ್ಜ್ ಮಾಡಬಾರದು. ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಮಾಡದಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ಒಂದು ವೇಳೆ ಲಾಠಿಚಾರ್ಜ್ ಮಾಡಿದ್ದು ಕಂಡರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.