ಕರ್ನಾಟಕದಲ್ಲಿ ಇಂದು ಹೊಸದಾಗಿ 902 ಜನರಿಗೆ ಕೊರೊನಾ ದೃಢ

ರಾಜ್ಯದಲ್ಲಿಂದು ಹೊಸದಾಗಿ 902 ಜನರಿಗೆ ಕೊರೊನಾ ದೃಢವಾಗಿದೆ. ಇದೀಗ, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,35,478ಕ್ಕೇರಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಮೂವರು ಸಾವನ್ನಪ್ಪಿದ್ದು ಈವರೆಗೆ ಕೊರೊನಾದಿಂದ 12,193 ಜನರು ಮೃತಪಟ್ಟಿದ್ದಾರೆ.

  • TV9 Web Team
  • Published On - 21:35 PM, 23 Jan 2021
ಕರ್ನಾಟಕದಲ್ಲಿ ಇಂದು ಹೊಸದಾಗಿ 902 ಜನರಿಗೆ ಕೊರೊನಾ ದೃಢ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿಂದು ಹೊಸದಾಗಿ 902 ಜನರಿಗೆ ಕೊರೊನಾ ದೃಢವಾಗಿದೆ. ಇದೀಗ, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,35,478ಕ್ಕೇರಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಮೂವರು ಸಾವನ್ನಪ್ಪಿದ್ದು ಈವರೆಗೆ ಕೊರೊನಾದಿಂದ 12,193 ಜನರು ಮೃತಪಟ್ಟಿದ್ದಾರೆ.

ಜೊತೆಗೆ, ಸೋಂಕಿತರ ಪೈಕಿ 9,15,924 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು 7,342 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಸಿಕ್ಕಿದೆ.

ಇದಲ್ಲದೆ, ಬೆಂಗಳೂರಿನಲ್ಲಿ ಇಂದು ಒಂದೇ ದಿನ 527 ಜನರಿಗೆ ಸೋಂಕು ಪತ್ತೆಯಾಗಿದೆ. ಹೀಗಾಗಿ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 3,96,827ಕ್ಕೇರಿದೆ. ಜೊತೆಗೆ, ಇಂದು ಕೊರೊನಾ ಸೋಂಕಿಗೆ ನಗರದಲ್ಲಿ ಒಬ್ಬರು ಬಲಿಯಾಗಿದ್ದಾರೆ. ಹಾಗಾಗಿ, ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 4376 ಜನರು ಕೊನೆಯುಸಿರೆಳೆದಿದ್ದಾರೆ.

3,96,827 ಸೋಂಕಿತರ ಪೈಕಿ 3,87,600 ಜನರು ಗುಣಮುಖರಾಗಿದ್ದಾರೆ. ಇದಲ್ಲದೆ, 4,850 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ದೊರೆತಿದೆ.

ಶಶಿಕಲಾಗೆ ಕೊರೊನಾ ಹಿನ್ನೆಲೆ: ಗೆಳತಿ ಇಳವರಸಿ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್