Parking Policy 2.0: ಇದು ಕಾರು ಮಾಲೀಕರ ಗಮನಕ್ಕೆ! ರಾಜಧಾನಿ ಬೆಂಗಳೂರಿನಲ್ಲಿ ಹೊಸ ಪಾರ್ಕಿಂಗ್ ನೀತಿಗೆ ಅನುಮೋದನೆ..

| Updated By: ಸಾಧು ಶ್ರೀನಾಥ್​

Updated on: Feb 11, 2021 | 1:11 PM

Parking Policy 2.O: ನೀತಿ 2.O ಅನುಷ್ಠಾನಕ್ಕೆ ಅನುಮೋದನೆ ನೀಡಿದ ಹಿನ್ನೆಲೆ ಎಲ್ಲೆಂದರಲ್ಲಿ ಉಚಿತವಾಗಿ ವಾಹನಗಳನ್ನು ನಿಲ್ಲಿಸುವಂತಿಲ್ಲ. ಮನೆ ಮುಂದೆ ವಾಹನ ಪಾರ್ಕಿಂಗ್​ಗೆ ಅನುಮತಿ ಕಡ್ಡಾಯವಾಗಿದೆ. ವಾಹನಗಳ ಗಾತ್ರಕ್ಕೆ ತಕ್ಕಂತೆ ಅನುಮತಿಗೆ ಏರಿಯಾವೈಸ್ ಪಾರ್ಕಿಂಗ್ ಶುಲ್ಕವನ್ನು ನಿಗದಿ ಪಡಿಸಲಾಗಿದೆ.

Parking Policy 2.0: ಇದು ಕಾರು ಮಾಲೀಕರ ಗಮನಕ್ಕೆ! ರಾಜಧಾನಿ ಬೆಂಗಳೂರಿನಲ್ಲಿ ಹೊಸ ಪಾರ್ಕಿಂಗ್ ನೀತಿಗೆ ಅನುಮೋದನೆ..
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ನಗರ ಭೂಸಾರಿಗೆ ನಿರ್ದೇಶನಾಲಯ (ಡಲ್ಟ್) ಸಿದ್ಧಪಡಿಸಿರುವ ಪರಿಸ್ಕೃತ ಪಾರ್ಕಿಂಗ್ ನೀತಿ 2.Oರ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಪಾರ್ಕಿಂಗ್ ನೀತಿ 2.O ಜಾರಿಗೊಳಿಸಲು ಬಿಬಿಎಂಪಿಗೆ ನಿರ್ದೇಶನ ನೀಡಲಾಗಿದೆ. ನೀತಿ 2.O ಅನುಷ್ಠಾನಕ್ಕೆ ಅನುಮೋದನೆ ನೀಡಿದ ಹಿನ್ನೆಲೆ ಎಲ್ಲೆಂದರಲ್ಲಿ ಉಚಿತವಾಗಿ ವಾಹನಗಳನ್ನು ನಿಲ್ಲಿಸುವಂತಿಲ್ಲ. ಮನೆ ಮುಂದೆ ವಾಹನ ಪಾರ್ಕಿಂಗ್​ಗೆ ಅನುಮತಿ ಕಡ್ಡಾಯವಾಗಿದೆ. ವಾಹನಗಳ ಗಾತ್ರಕ್ಕೆ ತಕ್ಕಂತೆ ಅನುಮತಿಗೆ ಏರಿಯಾವೈಸ್ ಪಾರ್ಕಿಂಗ್ ಶುಲ್ಕವನ್ನು ನಿಗದಿ ಪಡಿಸಲಾಗಿದೆ. ಅಲ್ಲದೇ ವಾಹನ ಪಾರ್ಕಿಂಗ್​ಗೆ ವಾರ್ಷಿಕ ದರ ನಿಗದಿ ಮಾಡುವ ಬಗ್ಗೆ ಯೋಜನೆ ರೂಪಿತವಾಗಿದೆ.

ದರ ನಿಗದಿ
ಚಿಕ್ಕ ವಾಹನಗಳಿಗೆ ವಾರ್ಷಿಕ 1 ಸಾವಿರ ರೂಪಾಯಿ, ಮಧ್ಯಮ ಗಾತ್ರದ ಕಾರಿಗೆ ವಾರ್ಷಿಕ 3ರಿಂದ 4 ಸಾವಿರ ರೂಪಾಯಿ, MUV, SUV ಕಾರುಗಳಿಗೆ 5 ಸಾವಿರ ರೂ. ದರವನ್ನು ನಿಗದಿ ಮಾಡಲಾಗಿದೆ. ಪರ್ಮಿಟ್ ಪಡೆಯುವಾಗ ದರ ಪಾವತಿ ಮಾಡಬೇಕು. ವಾಹನ ಪಾರ್ಕ್ ಮಾಡುವುದಕ್ಕೆ ಆಯಾ ಸ್ಥಳಕ್ಕೆ ಹಾಗೂ ಸಮಯಕ್ಕೆ ತಕ್ಕಂತೆ ದರ ನಿಗದಿ ಬಗ್ಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ.

ಟ್ರಾಫಿಕ್ ಸಮಸ್ಯೆಗೆ ಪರಿಹಾರ
ನಗರದಲ್ಲಿ ಮೇ 2020 ವೇಳೆಗೆ ವಾಹನಗಳ ಸಂಖ್ಯೆ 94 ಲಕ್ಷ ದಾಟಿದ್ದು, ವಾಹನ ನೋಂದಣಿಯ ವಾರ್ಷಿಕ ಏರಿಕೆ ದರ ಶೇ. 10 ಕ್ಕಿಂತ ಹೆಚ್ಚಾಗಿದೆ. ಇದರ ನಿಯಂತ್ರಣಕ್ಕಾಗಿ ಮೆಟ್ರೋ ರೈಲು ಕಾರ್ಯಚರಣೆ ಆರಂಭ ಮತ್ತು ಫ್ಲೈ ಓವರ್​ಗಳ ನಿರ್ಮಾಣ ಮಾಡಿದರೂ ಟ್ರಾಫಿಕ್ ಸಮಸ್ಯೆಯನ್ನು ತಡೆಗಟ್ಟಲು ಸಾಧ್ಯವಾಗಿಲ್ಲ. ಹೀಗಾಗಿ ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮತ್ತು ವಾಹನಗಳ ನಿಲುಗಡೆ ಸಮಸ್ಯೆಗೆ ಪರಿಹಾರ ನೀಡಲು ಪಾರ್ಕಿಂಗ್ ನೀತಿ 2.O ರೂಪಿಸಲಾಗಿದೆ.

ಇದನ್ನೂ ಓದಿ: ಪಾರ್ಕಿಂಗ್ ಸ್ಥಳದ ಬಗ್ಗೆ ಪುರಾವೆ ನೀಡಿದ್ರೆ ಮಾತ್ರ ಹೊಸ ವಾಹನ ನೋಂದಣಿ