ಮಂಗಳವಾರದಿಂದ‌ ಒಂದು ವಾರ ಕಾಲ ಬೆಂಗಳೂರು ಮತ್ತೆ ಲಾಕ್‌ ಡೌನ್?

ಬೆಂಗಳೂರು: ರಾಜ್ಯದಲ್ಲಿ ಕೊರನೊ ಹಾವಳಿ ದಿನೇ ದಿನೇ ಹೆಚ್ಚಾಗುತ್ತಲೆ ಇದೆ. ಏನೆಲ್ಲಾ ಪ್ರಯತ್ನ ಪಟ್ಟರೂ ಹತೋಟಿಯಲ್ಲಿಡಲು ಸಾಧ್ಯವಾಗುತ್ತಿಲ್ಲ. ಅದ್ರಲ್ಲೂ ಬೆಂಗಳೂರಿನಲ್ಲಿ ಪರಿಸ್ಥಿತಿ ಕೈಮೀರುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಮಂಗಳವಾರದಿಂದ ಒಂದು ವಾರ ಕಾಲ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಲಾಕ್‌ ಡೌನ್‌ ಮಾಡಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ರಾಜ್ಯದ ಹಿರಿಯ ಸಚಿವರೊಂದಿಗೆ ಮುಖ್ಯಮುಂತ್ರಿ ಬಿಎಸ್‌ ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಪರಿಸ್ಥಿತಿ ಉಲ್ಫಣಗೊಳ್ಳುತ್ತಿರುವ ಬಗ್ಗೆ ಭಾರೀ ಕಳವಳ ವ್ಯಕ್ತಪಡಿಸಿರುವ ಸಿಎಂ, […]

ಮಂಗಳವಾರದಿಂದ‌ ಒಂದು ವಾರ ಕಾಲ ಬೆಂಗಳೂರು ಮತ್ತೆ ಲಾಕ್‌ ಡೌನ್?
Edited By:

Updated on: Jul 11, 2020 | 8:49 PM

ಬೆಂಗಳೂರು: ರಾಜ್ಯದಲ್ಲಿ ಕೊರನೊ ಹಾವಳಿ ದಿನೇ ದಿನೇ ಹೆಚ್ಚಾಗುತ್ತಲೆ ಇದೆ. ಏನೆಲ್ಲಾ ಪ್ರಯತ್ನ ಪಟ್ಟರೂ ಹತೋಟಿಯಲ್ಲಿಡಲು ಸಾಧ್ಯವಾಗುತ್ತಿಲ್ಲ. ಅದ್ರಲ್ಲೂ ಬೆಂಗಳೂರಿನಲ್ಲಿ ಪರಿಸ್ಥಿತಿ ಕೈಮೀರುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಮಂಗಳವಾರದಿಂದ ಒಂದು ವಾರ ಕಾಲ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಲಾಕ್‌ ಡೌನ್‌ ಮಾಡಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ರಾಜ್ಯದ ಹಿರಿಯ ಸಚಿವರೊಂದಿಗೆ ಮುಖ್ಯಮುಂತ್ರಿ ಬಿಎಸ್‌ ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಪರಿಸ್ಥಿತಿ ಉಲ್ಫಣಗೊಳ್ಳುತ್ತಿರುವ ಬಗ್ಗೆ ಭಾರೀ ಕಳವಳ ವ್ಯಕ್ತಪಡಿಸಿರುವ ಸಿಎಂ, ಒಂದು ವಾರ ಕಾಲ ಬೆಂಗಳೂರನ್ನು ಲಾಕ್‌ ಡೌನ್‌ ಮಾಡೋಣ ಎಂದು ಸಚಿವರೆದುರು ಪ್ರಸ್ತಾಪಿಸಿದ್ದಾರೆ. ಆಗ ಬೆಂಗಳೂರು ಲಾಕ್ ಡೌನ್ ಮಾಡುವ ಬಗ್ಗೆ ವ್ಯಕ್ತವಾಗಿರುವ ವಿವಿಧ ಅಭಿಪ್ರಾಯಗಳನ್ನು ಹಿರಿಯ ಸಚಿವರು ಸಿಎಂ ಗಮನಕ್ಕೆ ತಂದಿದ್ದಾರೆನ್ನಲಾಗಿದೆ.

ಇದರ ಜೊತೆಗೆ ಮಂಗಳವಾರ ಬೆಂಗಳೂರಿನ‌ ಎಂಟು ವಲಯಗಳ ಉಸ್ತುವಾರಿ ಸಚಿವರ ಜೊತೆ ಕೂಡಾ ಸಿಎಂ ಕೊರೊನಾ ನಿಯಂತ್ರಣ ಕ್ರಮಗಳ ಬಗ್ಗೆ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸುವ ಸಾಧ್ಯತೆ ಇದೆ. ಇದಾದ ನಂತರ ಬೆಂಗಳೂರು ಲಾಕ್ ಡೌನ್ ಬಗ್ಗೆ ಅಧಿಕೃತ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Published On - 7:50 pm, Sat, 11 July 20