AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಮಂಡ್ಯಕ್ಕೆ ಹೊಸ ಎಸ್​ಪಿ ನೇಮಕ; ಸುಮನ್ ಪನ್ನೇಕರ್ ಸೇರಿ 5 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಸುಮನ್ ಡಿ. ಪನ್ನೇಕರ್, ಇಷಾ ಪಂತ್, ಯತೀಶ್​ ಎನ್. ಸೇರಿದಂತೆ ಐವರು ಖಡಕ್ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೊನೆಗೂ ಮಂಡ್ಯಕ್ಕೆ ಹೊಸ ಎಸ್​ಪಿ ನೇಮಕ; ಸುಮನ್ ಪನ್ನೇಕರ್ ಸೇರಿ 5 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಮಂಡ್ಯ ಎಸ್​ಪಿ ಸುಮನ್ ಪನ್ನೇಕರ್
TV9 Web
| Edited By: |

Updated on: Oct 30, 2021 | 5:55 PM

Share

ಬೆಂಗಳೂರು: ಮಂಡ್ಯ ಜಿಲ್ಲೆಯ ಎಸ್​ಪಿಯಾಗಿ ನೇಮಕವಾಗಿದ್ದ ಐಪಿಎಸ್ ಅಧಿಕಾರಿ ಸುಮನ್ ಡಿ. ಪನ್ನೇಕರ್ ಅವರಿಗೆ ಅಧಿಕಾರ ವಹಿಸಿಕೊಳ್ಳದಂತೆ ಪೊಲೀಸ್ ಇಲಾಖೆಯಿಂದ ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸುಮಾರು 10 ದಿನಗಳಿಂದ ಮಂಡ್ಯ ಎಸ್​ಪಿ ಸ್ಥಾನ ಖಾಲಿಯಾಗಿಯೇ ಉಳಿದಿತ್ತು. ಇದೀಗ 5 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ ಮಂಡ್ಯಕ್ಕೆ ಹೊಸ ಎಸ್​ಪಿಯನ್ನು ನೇಮಕ ಮಾಡಿದೆ. ಸುಮನ್ ಡಿ. ಪನ್ನೇಕರ್, ಇಷಾ ಪಂತ್, ಯತೀಶ್​ ಎನ್. ಸೇರಿದಂತೆ ಐವರು ಖಡಕ್ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ತೀವ್ರ ವಿವಾದಕ್ಕೀಡಾಗಿದ್ದ ಮಂಡ್ಯ ಎಸ್​ಪಿ ಸ್ಥಾನಕ್ಕೆ ಸುಮನ್ ಡಿ. ಪನ್ನೇಕರ್ ಅವರ ಬದಲು ಯತೀಶ್ ಎನ್. ಅವರನ್ನು ನೇಮಕ ಮಾಡಲಾಗಿದೆ. ಮಂಡ್ಯ ಎಸ್​ಪಿಯಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲೇ ಸುಮನ್ ಡಿ. ಪನ್ನೇಕರ್ ಅವರನ್ನು ಉತ್ತರ ಕನ್ನಡದ ಎಸ್​ಪಿಯಾಗಿ ಎತ್ತಂಗಡಿ ಮಾಡಲಾಗಿದೆ. ಮಂಡ್ಯ ನೂತನ ಎಸ್‌ಪಿಯಾಗಿ ಎನ್. ಯತೀಶ್, ಉತ್ತರ ಕನ್ನಡ ಎಸ್‌ಪಿಯಾಗಿ ಸುಮನ್ ಡಿ. ಪನ್ನೇಕರ್, ಕಲಬುರ್ಗಿ ಎಸ್​ಪಿಯಾಗಿ ಇಷಾ ಪಂತ್, ಗದಗದ ಎಸ್​ಪಿಯಾಗಿ ಎಸ್.ಪಿ. ದೇವರಾಜ್, ಮೈಸೂರಿನ ಪೊಲೀಸ್ ಅಕಾಡೆಮಿ ಉಪ ನಿರ್ದೇಶಕಿಯಾಗಿ ಡಾ. ಸಿಮಿ ಮರಿಯಮ್ ಜಾರ್ಜ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ರಾಜಕೀಯ ಒತ್ತಡದಿಂದ ಮಂಡ್ಯದ ನೂತನ ಮಹಿಳಾ ಎಸ್​ಪಿ ಸುಮನ್ ಡಿ. ಪನ್ನೇಕರ್ ಅಧಿಕಾರ ವಹಿಸಿಕೊಳ್ಳದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ, ಮಂಡ್ಯ ಎಸ್​ಪಿ ನೇಮಕ ವಿಚಾರದಲ್ಲಿ ಯಾವುದೇ ಒತ್ತಡವಿಲ್ಲ. ಅನೇಕ ಪೊಲೀಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದೆ. ಅವರಿಗೆ ಡ್ಯೂಟಿಗೆ ರಿಪೋರ್ಟ್ ಮಾಡಿಕೊಳ್ಳುವುದಕ್ಕೆ ಸಮಯ ಇರುತ್ತದೆ. ಮಂಡ್ಯ ಎಸ್​ಪಿ ಸುಮನ್ ಪನ್ನೇಕರ್ ಅಧಿಕಾರ ಸ್ವೀಕರಿಸಲು ಯಾವುದೇ ತಡೆಯಿಲ್ಲ ಎಂದಿದ್ದರು. ಆದರೆ, ಇದೀಗ ಮತ್ತೆ ಸುಮನ್ ಪನ್ನೇಕರ್ ಅವರನ್ನು ಉತ್ತರ ಕನ್ನಡದ ಎಸ್​ಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಅ. 20ರಂದು ಮಂಡ್ಯ ಎಸ್​ಪಿ ಡಾ.ಎಂ. ಅಶ್ವಿನಿ ಅವರನ್ನು ವರ್ಗಾವಣೆಗೊಳಿಸಿದ್ದ ಸರ್ಕಾರ ಆ ಜಾಗಕ್ಕೆ ಸುಮನ್ ಡಿ. ಪನ್ನೇಕರ್​ ಅವರನ್ನು ನೇಮಕ ಮಾಡಿತ್ತು. ಆದರೆ, ಸುಮನ್ ಡಿ. ಪನ್ನೇಕರ್​ ಅವರಿಗೆ ಎಸ್​ಪಿ ಆಗಿ ಚಾರ್ಜ್​ ತೆಗೆದುಕೊಳ್ಳದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು ಮೌಖಿಕ ಆದೇಶ ನೀಡಿದ್ದರು. ಇದರಿಂದ ಸುಮಾರು 10 ದಿನಗಳಿಂದ ಮಂಡ್ಯ ಎಸ್​ಪಿ ಸ್ಥಾನ ಖಾಲಿಯಿತ್ತು. ಇದೀಗ ವರ್ಗಾವಣೆಗೊಂಡಿರುವ ಐವರು ಐಪಿಎಸ್ ಅಧಿಕಾರಿಗಳಿಗೂ ತುರ್ತಾಗಿ ಕೆಲಸಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Mandya: ಮಂಡ್ಯ ಎಸ್​ಪಿ ಹುದ್ದೆ ಹರಾಜಿಗಿದೆ; ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

9 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!