ಕಸ ನಿರ್ವಹಣೆಗೆ ಸರ್ಕಾರದಿಂದ ಹೊಸ ಪ್ಲಾನ್.. ಏನದು?
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಸ ನಿರ್ವಹಣೆಯೇ ಬಿಬಿಎಂಪಿಗೆ ದೊಡ್ಡ ಸವಾಲಾಗಿದೆ. ಹೀಗಾಗಿ ಕಸ ನಿರ್ವಹಣೆಗೆ ಈಗ ಸರ್ಕಾರ ಹೊಸ ಪ್ಲಾನ್ ಮಾಡಿದೆ. ಬೆಂಗಳೂರಿನ ಕಸ ನಿರ್ವಹಣೆ ದೊಡ್ಡ ಸವಾಲಾಗಿರುವ ಹಿನ್ನೆಲೆಯಲ್ಲಿ ಕಸ ನಿರ್ವಹಣೆಗೆ ಪ್ರತ್ಯೇಕ ನಿಗಮ ರಚನೆಗೆ ಸರ್ಕಾರ ಚಿಂತನೆ ನಡೆಸಿದೆ. ತ್ಯಾಜ್ಯ ಸಂಸ್ಕರಣಾ ಘಟಕ ನಿರ್ವಹಣೆಗೆ ಪ್ರತ್ಯೇಕ ಮಂಡಳಿ ಅಥವಾ ನಿಗಮ ರಚನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ತ್ಯಾಜ್ಯ ಸಂಸ್ಕರಣಾ ಘಟಕದ ಜತೆ ಕಸ ನಿರ್ವಹಣೆಯ ಜವಾಬ್ದಾರಿಯನ್ನು ನಿಗಮ ಅಥವಾ ಮಂಡಳಿ ರಚಿಸಿ ಹೊಣೆ ನೀಡುವ […]

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಸ ನಿರ್ವಹಣೆಯೇ ಬಿಬಿಎಂಪಿಗೆ ದೊಡ್ಡ ಸವಾಲಾಗಿದೆ. ಹೀಗಾಗಿ ಕಸ ನಿರ್ವಹಣೆಗೆ ಈಗ ಸರ್ಕಾರ ಹೊಸ ಪ್ಲಾನ್ ಮಾಡಿದೆ.
ಬೆಂಗಳೂರಿನ ಕಸ ನಿರ್ವಹಣೆ ದೊಡ್ಡ ಸವಾಲಾಗಿರುವ ಹಿನ್ನೆಲೆಯಲ್ಲಿ ಕಸ ನಿರ್ವಹಣೆಗೆ ಪ್ರತ್ಯೇಕ ನಿಗಮ ರಚನೆಗೆ ಸರ್ಕಾರ ಚಿಂತನೆ ನಡೆಸಿದೆ. ತ್ಯಾಜ್ಯ ಸಂಸ್ಕರಣಾ ಘಟಕ ನಿರ್ವಹಣೆಗೆ ಪ್ರತ್ಯೇಕ ಮಂಡಳಿ ಅಥವಾ ನಿಗಮ ರಚನೆಗೆ ರಾಜ್ಯ ಸರ್ಕಾರ ಮುಂದಾಗಿದೆ.
ತ್ಯಾಜ್ಯ ಸಂಸ್ಕರಣಾ ಘಟಕದ ಜತೆ ಕಸ ನಿರ್ವಹಣೆಯ ಜವಾಬ್ದಾರಿಯನ್ನು ನಿಗಮ ಅಥವಾ ಮಂಡಳಿ ರಚಿಸಿ ಹೊಣೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಸದ್ಯ ಬಿಬಿಎಂಪಿಯಿಂದ ಕಸ ನಿರ್ವಹಣೆ ನಡೆಯುತ್ತಿದೆ. ಬಿಬಿಎಂಪಿಯಿಂದ ಪ್ರಸ್ತಾವನೆ ಸಲ್ಲಿಸಲು ರಾಜ್ಯ ಸರ್ಕಾರ ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದೆ.