Karnataka Rain: ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ ಸಾಧ್ಯತೆ
ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೆ ಸುಳಿಗಾಳಿ ಹಿನ್ನೆಲೆ, ಇನ್ನು 5 ದಿನ ರಾಜ್ಯದಲ್ಲಿ ಭಾರಿಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೆ ಸುಳಿಗಾಳಿ ಹಿನ್ನೆಲೆ, ಇನ್ನು 5 ದಿನ ರಾಜ್ಯದಲ್ಲಿ ಭಾರಿಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹೇಳಲಾಗಿದೆ. ಕರ್ನಾಟಕದ ಕರಾವಳಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡುಭಾಗದಲ್ಲಿ ಹೆಚ್ಚುಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲೂ ಗುರುವಾರದಿಂದಲೇ ಮಳೆ ಶುರುವಾಗಿದ್ದು, ಇಂದು ಕೂಡ ಮೋಡಕವಿದ ವಾತಾವರಣವಿದ್ದು, ಮಳೆ ಸುರಿಯುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ 5.8 ಮಿಲಿ ಮೀ ಮಳೆಯಾಗಿದ್ದು , ಎಚ್ ಎ ಎಲ್ ನಲ್ಲಿ 5.6 ಮಿಲಿ ಮೀ ಮಳೆಯಾಗಿದೆ, ಇಂದು ಗುಡುಗು ಗಾಳಿತ ಮಳೆಯಾಗುವ ಸಾಧ್ಯತೆ ಇದ್ದು , ಮೋಡ ಕವಿದ ವಾತಾವರಣ ಮುಂದುವರಿಯಲಿದೆ.
ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆ ಇದೆ, ಈ ಹಿನ್ನೆಲೆ ಇಂದು ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜುಲೈ 2ರಿಂದ 4ರವರೆಗೆ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಅತಿಯಾಗಿ ಮಳೆ ಸುರಿಯಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಶಿರಾಲಿಯಲ್ಲಿ 20 ಸೆಂ.ಮೀ, ಪಣಂಬೂರಿನಲ್ಲಿ 18 ಸೆಂ.ಮೀ, ಮಂಗಳೂರು ವಿಮಾನ ನಿಲ್ದಾಣದಲ್ಲಿ 13 ಸೆಂ.ಮೀ, ಅಂಕೋಲಾದಲ್ಲಿ 12 ಸೆಂ.ಮೀ, ಕುಂದಾಪುರದಲ್ಲಿ ತಲಾ 12 ಸೆಂ.ಮೀ ಮಳೆಯಾಗಿದೆ.
ಇನ್ನು ಕೋಟ, ಹೊನ್ನಾವರ, ಮಂಕಿ, ಬಸಗೋಡು, ಮುಲ್ಕಿ, ಸಂಪಾಜೆ, ಕಾರವಾರ, ಸಿದ್ದಾಪುರ, ಗೋಕರ್ಣ, ಕೊಲ್ಲೂರು, ಸುಳ್ಯ, ಮಂಗಳೂರು, ಕುಮಟಾ, ಉಡುಪಿ, ತುಮ್ರಿ, ಗೇರುಸೊಪ್ಪ, ಬೇಲಿಕೇರಿಯಲ್ಲೂ ಮಳೆಯಾಗಿದೆ.
ಕಾರ್ಕಳ, ಶೃಂಗೇರಿ, ವಿರಾಜಪೇಟೆ, ಬೆಳ್ತಂಗಡಿ, ಧರ್ಮಸ್ಥಳ, ಯಲ್ಲಾಪುರ, ಲಿಂಗನಮಕ್ಕಿ, ಧರ್ಮಸ್ಥಳ, ನಾಪೋಕ್ಲು, ಕೋಣಂದೂರು, ಕೊಟ್ಟಿಗೆಹಾರ, ಬಾಳೆಹೊನ್ನೂರು, ಮಂಚಿಕೆರೆ, ಕಿರವತ್ತಿ, ಸೋಮವಾರಪೇಟೆ, ಭಾಲ್ಕಿ, ಸಕಲೇಶಪುರ, ತ್ಯಾಗರ್ತಿ, ಮಂಡಗದ್ದೆಯಲ್ಲಿ ಮಳೆಯಾಗಿದೆ.
ಎಚ್ಎಎಲ್ನಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Published On - 9:49 am, Fri, 1 July 22