ರೈತರಿಂದ ಕರ್ನಾಟಕ ಬಂದ್: ಹಾಸನದಲ್ಲಿ ಹೆದ್ದಾರಿ ತಡೆದು ಆಕ್ರೋಶ

ಹಾಸನ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಸನದಲ್ಲಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ರಸ್ತೆ ತಡೆದು ಪ್ರತಿಭಟನಾಕಾರರು ಕರ್ನಾಟಕ ಬಂದ್ ಬೆಂಬಲಿಸಿ ಆಕ್ರೋಶ ಹೊರ ಹಾಕಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಸ್ತೆ ತಡೆದು ರಸ್ತೆಯಲ್ಲೇ ಧರಣಿ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯಾದ್ಯಂತ ಮಣ್ಣಿನ ಮಕ್ಕಳ ಪ್ರತಿಭಟನೆಯ ಬಿಸಿ ಹೆಚ್ಚಾಗಿದೆ. ಕನ್ನಡ ಪರ ಸಂಘಟನೆಗಳು ಸೇರಿದಂತೆ ಅನೇಕ ಸಂಘಟನೆಗಳು […]

ರೈತರಿಂದ ಕರ್ನಾಟಕ ಬಂದ್: ಹಾಸನದಲ್ಲಿ ಹೆದ್ದಾರಿ ತಡೆದು ಆಕ್ರೋಶ
Updated By: ಸಾಧು ಶ್ರೀನಾಥ್​

Updated on: Sep 28, 2020 | 10:47 AM

ಹಾಸನ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಸನದಲ್ಲಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ರಸ್ತೆ ತಡೆದು ಪ್ರತಿಭಟನಾಕಾರರು ಕರ್ನಾಟಕ ಬಂದ್ ಬೆಂಬಲಿಸಿ ಆಕ್ರೋಶ ಹೊರ ಹಾಕಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಸ್ತೆ ತಡೆದು ರಸ್ತೆಯಲ್ಲೇ ಧರಣಿ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯಾದ್ಯಂತ ಮಣ್ಣಿನ ಮಕ್ಕಳ ಪ್ರತಿಭಟನೆಯ ಬಿಸಿ ಹೆಚ್ಚಾಗಿದೆ. ಕನ್ನಡ ಪರ ಸಂಘಟನೆಗಳು ಸೇರಿದಂತೆ ಅನೇಕ ಸಂಘಟನೆಗಳು ರೈತರ ಪರ ಹೋರಾಟ ನಡೆಸುತ್ತಿವೆ.