Karnataka Ratna: ಪುನೀತ್ ರಾಜ್‌ಕುಮಾರ್ ಗೆ ನ. 1ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ -ಸಿಎಂ ಬೊಮ್ಮಾಯಿ‌ ಹೇಳಿಕೆ

Puneeth Rajkumar: ಅತಿ ಚಿಕ್ಕ ವಯಸ್ಸಿನಲ್ಲಿ ಈ ಪ್ರಶಸ್ತಿ ಪಡೆಯುತ್ತಿರುವ ರತ್ನ ಪುನೀತ್ ರಾಜ್‌ಕುಮಾರ್ ಅವರಿಗೆ ಸಲ್ಲುತ್ತದೆ. ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್​​ ರಜನಿಕಾಂತ್, ಜ್ಯೂನಿಯರ್ ಎನ್‌ಟಿ ಆರ್‌ ಅವ್ರಿಗೆ ಆಹ್ವಾನ ನೀಡಲಾಗಿದೆ.

Karnataka Ratna: ಪುನೀತ್ ರಾಜ್‌ಕುಮಾರ್ ಗೆ ನ. 1ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ -ಸಿಎಂ ಬೊಮ್ಮಾಯಿ‌ ಹೇಳಿಕೆ
ನವೆಂಬರ್ 1ರಂದು ಪುನೀತ್ ರಾಜ್‌ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಸಿಎಂ ಬೊಮ್ಮಾಯಿ‌ ಹೇಳಿಕೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Oct 28, 2022 | 2:20 PM

ಬೆಂಗಳೂರು: ಈಗಾಗಲೇ ಘೋಷಿಸಿದಂತೆ, ಪವರ್ ಸ್ಟಾರ್, ದಿವಂಗತ ಪುನೀತ್ ರಾಜ್‌ಕುಮಾರ್ ಗೆ (Puneeth Rajkumar) ಮರಣೋತ್ತರವಾಗಿ ನವೆಂಬರ್ 1 ರಂದು ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ (Karnataka Ratna) ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದ್ದಾರೆ.

ಅತಿ ಚಿಕ್ಕ ವಯಸ್ಸಿನಲ್ಲಿ ಈ ಪ್ರಶಸ್ತಿ ಪಡೆಯುತ್ತಿರುವ ರತ್ನ ಪುನೀತ್ ರಾಜ್‌ಕುಮಾರ್ ಅವರಿಗೆ ಸಲ್ಲುತ್ತದೆ. ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್​​ ರಜನಿಕಾಂತ್, ಜ್ಯೂನಿಯರ್ ಎನ್‌ಟಿ ಆರ್‌ ಅವ್ರಿಗೆ ಆಹ್ವಾನ ನೀಡಲಾಗಿದೆ. ಅವರು ಕೂಡ ಭಾಗಿಯಾಗ್ತಾರೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಕಂಬಾರರು, ರಾಜ್‌ಕುಮಾರ್ ಕುಟುಂಬದವರು ಭಾಗಿಯಾಗ್ತಾರೆ ಎಂದು ಅವರು ತಿಳಿಸಿದ್ದಾರೆ.

ಕಳೆದ ವರ್ಷ ಅಕ್ಟೋಬರ್ 29 ರಂದು ಪುನೀತ್ ರಾಜ್‌ಕುಮಾರ್ ಹೃದಯಾಘಾತಕ್ಕೆ ಬಲಿಯಾಗಿದ್ದರು. ಕನ್ನಡ ಚಲನಚಿತ್ರೋದ್ಯಮ, ಭಾಷೆ ಮತ್ತು ಸಂಸ್ಕೃತಿಗೆ ಅವರು ನೀಡಿದ ಕೊಡುಗೆಯನ್ನು ಗುರುತಿಸಿ ಅವರಿಗೆ ನವೆಂಬರ್ 1 ರಂದು ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ನೀಡಲಾಗುವುದು. ತಮ್ಮ ಸಾಧನೆಗಳ ಮೂಲಕ ಜನರ ಹೃದಯವನ್ನು ಆಳಿದ ಪುನೀತ್ ರಾಜ್‌ಕುಮಾರ್ ಅವರು ನಿಜವಾದ ಕರ್ನಾಟಕ ರತ್ನ. ಅವರು ಯುವಕರಿಗೆ ಸ್ಫೂರ್ತಿಯ ಚಿಲುಮೆ ಎಂದು ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಹೆಳಿದ್ದಾರೆ. ‘ಕರ್ನಾಟಕ ರತ್ನ’ ಕರ್ನಾಟಕ ಸರ್ಕಾರದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. ಇದುವರೆಗೆ ಎಂಟು ಮಂದಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಆದರೆ, 2009 ರಿಂದ ಯಾರೂ ಈ ಪ್ರಶಸ್ತಿಯನ್ನು ಸ್ವೀಕರಿಸಿಲ್ಲ.

ರಾಜ್ಯೋತ್ಸವ ಪ್ರಶಸ್ತಿ ಸಭೆ:

ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಆಯ್ಕೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಚಿವರಾದ ಸುನಿಲ್ ಕುಮಾರ್, ಆರ್. ಅಶೋಕ್, ಶಿವರಾಂ ಹೆಬ್ಬಾರ್ ಹಾಗೂ ಸಮಿತಿ ಸದಸ್ಯರು ಭಾಗಿಯಾಗಿದ್ದಾರೆ.

Published On - 1:15 pm, Fri, 28 October 22