ಪರೀಕ್ಷೆ ಮುನ್ನ ದಿನವೇ SSLC ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಲೀಕ್?

|

Updated on: Feb 19, 2020 | 9:43 AM

ಬಳ್ಳಾರಿ: ಪರೀಕ್ಷೆ ಮುನ್ನ ದಿನವೇ SSLC ಇಂಗ್ಲಿಷ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎನ್ನಲಾಗ್ತಿದೆ. ಇಂದು ಬೆಳಗ್ಗೆ 9.30ರಿಂದ ಇಂಗ್ಲಿಷ್ ಪರೀಕ್ಷೆ ಆರಂಭವಾಗಬೇಕಿದೆ. ಆದ್ರೆ ತಡರಾತ್ರಿಯಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪ್ರಶ್ನೆಪತ್ರಿಕೆ ಹರಿದಾಡುತ್ತಿದೆ. ಅಂತಿಮ ಪರೀಕ್ಷೆ ಮಾದರಿಯಲ್ಲಿಯೇ ಪೂರ್ವಸಿದ್ಧತೆ ಪರೀಕ್ಷೆ ನಡೆಯಲಿದೆ. ಆದ್ರೆ, ನಿನ್ನೆಯಿಂದಲೇ ಇಂಗ್ಲಿಷ್ ಪ್ರಶ್ನೆಪತ್ರಿಕೆ ವಿದ್ಯಾರ್ಥಿಗಳಿಗೆ ವಾಟ್ಸಪ್​ನಲ್ಲಿ ಲಭ್ಯವಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈಗಾಗಲೇ ಎಲ್ಲ ಶಾಲಾ ಮುಖ್ಯೋಪಾಧ್ಯಾರಿಗೆ ಪ್ರಶ್ನೆಪತ್ರಿಕೆ ತಲುಪಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪ್ರಶ್ನೆಪತ್ರಿಕೆ ಅಸಲಿಯಾ ಅಥವಾ ನಕಲಿಯಾ ಎಂದು ಇನ್ನಷ್ಟೇ ಖಚಿತವಾಗಬೇಕಿದೆ.

ಪರೀಕ್ಷೆ ಮುನ್ನ ದಿನವೇ SSLC ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಲೀಕ್?
Follow us on

ಬಳ್ಳಾರಿ: ಪರೀಕ್ಷೆ ಮುನ್ನ ದಿನವೇ SSLC ಇಂಗ್ಲಿಷ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎನ್ನಲಾಗ್ತಿದೆ. ಇಂದು ಬೆಳಗ್ಗೆ 9.30ರಿಂದ ಇಂಗ್ಲಿಷ್ ಪರೀಕ್ಷೆ ಆರಂಭವಾಗಬೇಕಿದೆ. ಆದ್ರೆ ತಡರಾತ್ರಿಯಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪ್ರಶ್ನೆಪತ್ರಿಕೆ ಹರಿದಾಡುತ್ತಿದೆ.

ಅಂತಿಮ ಪರೀಕ್ಷೆ ಮಾದರಿಯಲ್ಲಿಯೇ ಪೂರ್ವಸಿದ್ಧತೆ ಪರೀಕ್ಷೆ ನಡೆಯಲಿದೆ. ಆದ್ರೆ, ನಿನ್ನೆಯಿಂದಲೇ ಇಂಗ್ಲಿಷ್ ಪ್ರಶ್ನೆಪತ್ರಿಕೆ ವಿದ್ಯಾರ್ಥಿಗಳಿಗೆ ವಾಟ್ಸಪ್​ನಲ್ಲಿ ಲಭ್ಯವಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈಗಾಗಲೇ ಎಲ್ಲ ಶಾಲಾ ಮುಖ್ಯೋಪಾಧ್ಯಾರಿಗೆ ಪ್ರಶ್ನೆಪತ್ರಿಕೆ ತಲುಪಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪ್ರಶ್ನೆಪತ್ರಿಕೆ ಅಸಲಿಯಾ ಅಥವಾ ನಕಲಿಯಾ ಎಂದು ಇನ್ನಷ್ಟೇ ಖಚಿತವಾಗಬೇಕಿದೆ.