ಕೃಷಿ ಮಾರಾಟ ಮಂಡಳಿಯ ಖಜಾಂಚಿ ಕೋಟಿಕೋಟಿಗಳಲ್ಲಿ ಹಣ ತಿಂದು ಪರಾರಿ!
ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಕ್ಕೆ ಕೋಟಿ ಕೋಟಿ ಹಣ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಇದರಿಂದ ರಾಜ್ಯದಲ್ಲಿ ಸರ್ಕಾರದ ಹಣಕ್ಕೆ ಯಾವುದೇ ಸೆಕ್ಯುರಿಟಿ ಇಲ್ಲ ಎಂಬಂತಾಗಿದೆ. ಬ್ಯಾಂಕ್ ಮ್ಯಾನೇಜರ್ ಜೊತೆ ಸೇರಿ ರಾಜ್ಯ ಕೃಷಿ ಮಾರಾಟ ಮಂಡಳಿ ಇಟ್ಟಿದ್ದ 48 ಕೋಟಿ ರೂಪಾಯಿಯನ್ನು ಎಗರಿಸಿ ಎಸ್ಕೇಪ್ ಆಗಿರುವ ಘಟನೆ ನಡೆದಿದೆ. ಸಿಂಡಿಕೇಟ್ ಬ್ಯಾಂಕ್ ಮ್ಯಾನೇಜರ್ ಪೊಲೀಸರ ವಶಕ್ಕೆ: ರಾಜ್ಯ ಕೃಷಿ ಮಾರಾಟ ಮಂಡಳಿ ಎಂಡಿ ಕರೀಗೌಡ ಎಂಬುವರು ವಂಚನೆ ಸಂಬಂಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ […]
ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಕ್ಕೆ ಕೋಟಿ ಕೋಟಿ ಹಣ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಇದರಿಂದ ರಾಜ್ಯದಲ್ಲಿ ಸರ್ಕಾರದ ಹಣಕ್ಕೆ ಯಾವುದೇ ಸೆಕ್ಯುರಿಟಿ ಇಲ್ಲ ಎಂಬಂತಾಗಿದೆ. ಬ್ಯಾಂಕ್ ಮ್ಯಾನೇಜರ್ ಜೊತೆ ಸೇರಿ ರಾಜ್ಯ ಕೃಷಿ ಮಾರಾಟ ಮಂಡಳಿ ಇಟ್ಟಿದ್ದ 48 ಕೋಟಿ ರೂಪಾಯಿಯನ್ನು ಎಗರಿಸಿ ಎಸ್ಕೇಪ್ ಆಗಿರುವ ಘಟನೆ ನಡೆದಿದೆ.
ಸಿಂಡಿಕೇಟ್ ಬ್ಯಾಂಕ್ ಮ್ಯಾನೇಜರ್ ಪೊಲೀಸರ ವಶಕ್ಕೆ: ರಾಜ್ಯ ಕೃಷಿ ಮಾರಾಟ ಮಂಡಳಿ ಎಂಡಿ ಕರೀಗೌಡ ಎಂಬುವರು ವಂಚನೆ ಸಂಬಂಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವನ್ನು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸಿಸಿಬಿಗೆ ವರ್ಗವಣೆ ಮಾಡಿದ್ದರು. ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಸಿಂಡಿಕೇಟ್ ಬ್ಯಾಂಕ್ ಮ್ಯಾನೇಜರ್ ಜಯರಾಮ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಉಳಿದ ಆರೋಪಿಗಳ ಪತ್ತೆಗಾಗಿ ಸಿಸಿಬಿ ಪೊಲೀಸರು ಚೆನ್ನೈಗೆ ಹೊರಟಿದ್ದಾರೆ.
ರಾಜ್ಯ ಕೃಷಿ ಮಾರಾಟ ಮಂಡಳಿಯು ಉತ್ತರಹಳ್ಳಿ ಬ್ರಾಂಚ್ನ ಸಿಂಡಿಕೇಟ್ ಬ್ಯಾಂಕ್ನಲ್ಲಿ 100 ಕೋಟಿ ನಿಶ್ಚಿತ ಠೇವಣಿ ಇಟ್ಟಿದ್ದರು. 100 ಕೋಟಿ ಹಣವನ್ನು ಎರಡು ನಿಶ್ಚಿತ ಠೇವಣಿ ಇಡಲಾಗಿತ್ತು. ನಕಲಿ ಬಾಂಡ್ ಸೃಷ್ಟಿ ಮಾಡಿ 48 ಕೋಟಿ 10 ಅಕೌಂಟ್ಗೆ ವರ್ಗಾವಣೆ ಮಾಡಲಾಗಿದೆ. ಹಾಗಾಗಿ ಪ್ರಕರಣದಲ್ಲಿ ಬ್ಯಾಂಕ್ ಮ್ಯಾನೇಜರ್ ಜಯರಾಮ್ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಕೃಷಿ ಮಂಡಳಿಯ ಖಜಾಂಚಿಗಾಗಿ ಶೋಧ: ಕೃಷಿ ಮಂಡಳಿಯ ಖಜಾಂಚಿ ಲಕ್ಷ್ಮಣ್ ಸಂಬಂಧಿಕರ ಅಕೌಂಟ್ಗೇ 30 ಕೋಟಿ ಹಣ ವರ್ಗಾವಣೆಯಾಗಿದೆ. ಪ್ರಕರಣ ದಾಖಲಾದ ನಂತ್ರ ಖಜಾಂಚಿ ಲಕ್ಷ್ಮಣ್ ಎಸ್ಕೇಪ್ ಆಗಿದ್ದಾರೆ. ಹೀಗಾಗಿ ಲಕ್ಷ್ಮಣ್ಗಾಗಿ ಚೆನ್ನೈನಲ್ಲಿ ಸಿಸಿಬಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಮಹಮದ್ ಅಸ್ಲಾಂ ಎಂಬಾತನ ಅಕೌಂಟ್ಗೆ 2.5 ಕೋಟಿ ಹಣ ವರ್ಗವಣೆ ಮಾಡಲಾಗಿದ್ದು, ಈ ಸಂಬಂಧ ಮಹಮದ್ ಅಸ್ಲಾಂ, ಮುಸ್ತಾಫಾ, ಭರತ್ನನ್ನು ಸಿಸಿಬಿ ತಂಡ ವಶಕ್ಕೆ ಪಡೆದಿದ್ದಾರೆ.
Published On - 12:52 pm, Fri, 7 February 20