‘ಕೆಜಿಎಫ್ 2’ ರಿಲೀಸ್ ದಿನವೇ ಅಭಿಮಾನಿಗಳಿಗೆ ಸಿಕ್ತು ಎರಡೆರಡು ಸರ್​ಪ್ರೈಸ್

‘ಮೆಹಬೂಬಾ..’ ಹಾಡು ರಾಕಿ ಹಾಗೂ ರೀನಾ ಪಾತ್ರಗಳ ಮಧ್ಯೆ ಬರುವ ಲವ್ ಸಾಂಗ್. ಈ ಹಾಡಿಗೆ ಥಿಯೇಟರ್​ನಲ್ಲಿ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿತ್ತು. ಸಿನಿಮಾ ರಿಲೀಸ್ ದಿನವೇ ಈ ಹಾಡು ರಿಲೀಸ್ ಆಗಿದೆ.

‘ಕೆಜಿಎಫ್ 2’ ರಿಲೀಸ್ ದಿನವೇ ಅಭಿಮಾನಿಗಳಿಗೆ ಸಿಕ್ತು ಎರಡೆರಡು ಸರ್​ಪ್ರೈಸ್
ಸಲಾರ್-ಕೆಜಿಎಫ್ 2
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 14, 2022 | 6:59 PM

‘ಕೆಜಿಎಫ್ ಚಾಪ್ಟರ್ 2’ (KGF Chapter 2) ಸಿನಿಮಾ ತೆರೆಗೆ ಬಂದಿದೆ. ಚಿತ್ರದ ಅಬ್ಬರ ಜೋರಾಗಿದೆ. ಮೊದಲ ದಿನ ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಎಷ್ಟು ಕಲೆಕ್ಷನ್ ಮಾಡಲಿದೆ ಎಂಬ ಲೆಕ್ಕಾಚಾರವೂ ಜೋರಾಗಿದೆ. ಈ ಮಧ್ಯೆ, ‘ಕೆಜಿಎಫ್ 2’ ನಿರ್ಮಾಣ ಸಂಸ್ಥೆ ಹೊಂಬಾಳೆ ಕಡೆಯಿಂದ ಸರ್​ಪ್ರೈಸ್ ಒಂದು ಸಿಕ್ಕಿದೆ. ಈ ಚಿತ್ರದ ‘ಮೆಹಬೂಬಾ..’ ಹಾಡಿನ (Mehabooba Song) ಆಡಿಯೋ ಟ್ರ್ಯಾಕ್​ಅನ್ನು ಯೂಟ್ಯೂಬ್​ನಲ್ಲಿ ಬಿಡುಗಡೆ ಮಾಡಲಾಗಿದೆ. ಇದರ ಜತೆಗೆ ‘ಸಲಾರ್’ ಸಿನಿಮಾದ (Salar Movie) ಕುರಿತು ಹೊಸ ಅಪ್​ಡೇಟ್ ಒಂದು ಸಿಕ್ಕಿದೆ.

‘ಮೆಹಬೂಬಾ..’ ಹಾಡು ರಾಕಿ ಹಾಗೂ ರೀನಾ ಪಾತ್ರಗಳ ಮಧ್ಯೆ ಬರುವ ಲವ್ ಸಾಂಗ್. ಈ ಹಾಡಿಗೆ ಥಿಯೇಟರ್​ನಲ್ಲಿ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿತ್ತು. ಸಿನಿಮಾ ರಿಲೀಸ್ ದಿನವೇ ಈ ಹಾಡು ರಿಲೀಸ್ ಆಗಿದೆ. ಸಂಜೆ ವೇಳೆಗೆ ಚಿತ್ರದ ಆಡಿಯೋ ಟ್ರ್ಯಾಕ್ ರಿಲೀಸ್ ಆಗಿದ್ದು, ಅಭಿಮಾನಿಗಳು ಫುಲ್​ ಖುಷ್ ಆಗಿದ್ದಾರೆ. ‘ಕೆಜಿಎಫ್ 2’ ಟೀಂನಿಂದ ಬಿಡುಗಡೆ ಆಗುತ್ತಿರುವ ನಾಲ್ಕನೇ ಹಾಡು ಇದಾಗಿದೆ. ‘ತೂಫಾನ್​..’,‘ಗಗನ ನೀ..’, ‘ಸುಲ್ತಾನ್​..’ ಹಾಡುಗಳು ಈ ಮೊದಲು ಬಿಡುಗಡೆ ಆಗಿ ಧೂಳೆಬ್ಬಿಸಿದ್ದವು.

‘ಸಲಾರ್​’ ಸಿನಿಮಾದಲ್ಲಿ ಪ್ರಭಾಸ್ ನಟಿಸುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್​ ನಿರ್ಮಾಣದ ಈ ಸಿನಿಮಾಗೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. ಈವರೆಗೆ ಚಿತ್ರದ ಪೋಸ್ಟರ್​ಗಳು ಮಾತ್ರ ರಿಲೀಸ್ ಆಗಿದ್ದವು. ಈಗ ಸಿನಿಮಾದ ಟೀಸರ್ ರಿಲೀಸ್ ಬಗ್ಗೆ ಅಪ್​​ಡೇಟ್​ ನೀಡಿದ್ದಾರೆ ಬಾಲಿವುಡ್ ಟ್ರೇಡ್ ಅನಾಲಿಸ್ಟ್ ತರಣ್ ಆದರ್ಶ್. ಮೇ ಕೊನೆಯ ವಾರದಲ್ಲಿ ‘ಸಲಾರ್’ ಸಿನಿಮಾದ ಟೀಸರ್ ರಿಲೀಸ್ ಆಗುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: KGF Chapter 2 Review: ಕೆಜಿಎಫ್​ ಚಾಪ್ಟರ್​ 2 ವಿಮರ್ಶೆ; ಪ್ರಶಾಂತ್ ನೀಲ್ ಕೈಚಳಕ, ಯಶ್ ಫ್ಯಾನ್ಸ್​ಗೆ ಧಮಾಕ

ಐಎಂಡಿಬಿ, ಬುಕ್​ ಮೈ ಶೋ ರೇಟಿಂಗ್​ನಲ್ಲಿ ‘ಕೆಜಿಎಫ್​ 2’ನದ್ದೇ ಪಾರುಪತ್ಯ; ಈ ಚಿತ್ರವನ್ನು ತಡೆಯೋರೆ ಇಲ್ಲ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ