Smoking Effect: ಧೂಮಪಾನದಿಂದ ನಿಮ್ಮ ಕಿಡ್ನಿಯ ಮೇಲಾಗುವ ಪರಿಣಾಮಗಳೇನು?

ಧೂಮಪಾನ ಆರೋಗ್ಯಕ್ಕೆ ಹಾನಿಕರವೆಂದು ತಿಳಿದಿದ್ದರೂ ಬಹುತೇಕ ಜನರು ಅದಕ್ಕೆ ಅಡಿಕ್ಟ್ ಆಗಿಬಿಟ್ಟಿರುತ್ತಾರೆ. ಧೂಮಪಾನದಿಂದ ಉಂಟಾಗುವ ರೋಗಗಳು ಕೆಲವೊಮ್ಮೆ ಜೀವವನ್ನೇ ಬಲಿಪಡೆಯುತ್ತವೆ. ಧೂಮಪಾನವು ಮೂತ್ರಪಿಂಡದ ಆರೋಗ್ಯದ ಮೇಲೆ ಹಾನಿಕಾರಕ ಪರಿಣಾಮವನ್ನು ಉಂಟುಮಾಡುತ್ತದೆ. ಹಾಗಾದರೆ, ಧೂಮಪಾನದಿಂದ ಕಿಡ್ನಿಯ ಮೇಲೆ ಯಾವ ರೀತಿಯ ಪರಿಣಾಮಗಳು ಉಂಟಾಗುತ್ತವೆ? ಇದು ಎಷ್ಟರ ಮಟ್ಟಿಗೆ ಅಪಾಯಕಾರಿ? ಎಂಬುದರ ಬಗ್ಗೆ ನಿಮಗೆ ಗೊತ್ತಾ?

Smoking Effect: ಧೂಮಪಾನದಿಂದ ನಿಮ್ಮ ಕಿಡ್ನಿಯ ಮೇಲಾಗುವ ಪರಿಣಾಮಗಳೇನು?
ಧೂಮಪಾನ
Follow us
|

Updated on: Apr 19, 2024 | 11:38 AM

ಧೂಮಪಾನ (Smoking) ಮೂತ್ರಪಿಂಡದ ಆರೋಗ್ಯದ ಮೇಲೆ ಹಾನಿಕಾರಕ ಪರಿಣಾಮಗಳನ್ನು ಬೀರುತ್ತದೆ. ಸಿಗರೇಟಿನಲ್ಲಿ ಕಂಡುಬರುವ ರಾಸಾಯನಿಕಗಳಾದ ನಿಕೋಟಿನ್ ಮತ್ತು ಕಾರ್ಬನ್ ಮಾನಾಕ್ಸೈಡ್, ಮೂತ್ರಪಿಂಡಗಳಿಗೆ ರಕ್ತದ ಹರಿವು ಕಡಿಮೆಯಾಗಲು ಕಾರಣವಾಗಬಹುದು. ಇದರಿಂದಾಗಿ ಮೂತ್ರಪಿಂಡದ ಕಾರ್ಯವು ಕಡಿಮೆಯಾಗುತ್ತದೆ. ಈ ಹಾನಿಯು ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯನ್ನು (Kidney Problem) ಉಂಟುಮಾಡುವ ಅಪಾಯವನ್ನು ಹೊಂದಿದೆ. ಇದು ಮೂತ್ರಪಿಂಡ ವೈಫಲ್ಯಕ್ಕೆ ಕಾರಣವಾಗುವ ದೀರ್ಘಕಾಲದ ಸಮಸ್ಯೆಯಾಗಿದೆ. ಧೂಮಪಾನವು ಮೂತ್ರಪಿಂಡದ ಕ್ಯಾನ್ಸರ್ ಅನ್ನು ಹೆಚ್ಚಿಸುವ ಅಪಾಯವನ್ನು ಹೊಂದಿದೆ. ಏಕೆಂದರೆ ಸಿಗರೆಟ್‌ನಲ್ಲಿರುವ ವಿಷ ಮೂತ್ರಪಿಂಡಗಳ ಜೀವಕೋಶಗಳು ಮತ್ತು ಡಿಎನ್‌ಎಗಳನ್ನು ಹಾನಿಗೊಳಿಸುತ್ತವೆ.

ಧೂಮಪಾನವು ಮೂತ್ರಪಿಂಡಗಳ ಮೇಲೆ ಬೀರಬಹುದಾದ ಆಳವಾದ ಪರಿಣಾಮಗಳ ಬಗ್ಗೆ ವಡೋದರದ ಭೈಲಾಲ್ ಅಮೀನ್ ಜನರಲ್ ಆಸ್ಪತ್ರೆಯ ಸಮಾಲೋಚಕ ಮೂತ್ರಶಾಸ್ತ್ರಜ್ಞ, ಆಂಡ್ರೊಲಾಜಿಸ್ಟ್ ಡಾ. ತೇಜಸ್ ಮಿಸ್ತ್ರಿ ಮಾಹಿತಿ ನೀಡಿದ್ದಾರೆ. ಧೂಮಪಾನದಿಂದ ಉಂಟಾಗುವ ಅತ್ಯಂತ ದೊಡ್ಡ ಅಪಾಯವೆಂದರೆ ಮೂತ್ರಪಿಂಡ ಮತ್ತು ಗಾಳಿಗುಳ್ಳೆಯ ಕ್ಯಾನ್ಸರ್. ತಂಬಾಕು 7000ಕ್ಕೂ ಹೆಚ್ಚು ಸಂಯುಕ್ತಗಳನ್ನು ಒಳಗೊಂಡಿದೆ. ಇವುಗಳಲ್ಲಿ ಪಾಲಿಸೈಕ್ಲಿಕ್ ಆರೊಮ್ಯಾಟಿಕ್ ಹೈಡ್ರೋಕಾರ್ಬನ್‌ಗಳು ಮತ್ತು ನೈಟ್ರೋಸಮೈನ್‌ನಂತಹ ಸಂಯುಕ್ತಗಳು ಸೂಕ್ಷ್ಮವಾದ ಅಂಗಾಂಶಗಳನ್ನು ಹಾನಿಗೊಳಿಸುತ್ತವೆ. ಇದು ಕ್ಯಾನ್ಸರ್ ರೂಪಾಂತರಕ್ಕೆ ದಾರಿ ಮಾಡಿಕೊಡುತ್ತವೆ. ಕ್ಯಾನ್ಸರ್​ನ ಆರಂಭಿಕ ಹಂತಗಳಲ್ಲಿ ಕ್ಯಾನ್ಸರ್​ನ ಭಾಗವನ್ನು ತೆಗೆದುಹಾಕುವ ಮೂಲಕ ಅಂಗವನ್ನು ಉಳಿಸಬಹುದು.

ಇದನ್ನೂ ಓದಿ: Kidney Health: ಕಿಡ್ನಿ ವೈಫಲ್ಯದ ಬಗ್ಗೆ ಜನರಲ್ಲಿರುವ 5 ತಪ್ಪುಕಲ್ಪನೆಗಳಿವು

ಧೂಮಪಾನವು ಕಿರಿದಾದ ರಕ್ತನಾಳಗಳಿಗೆ ಕಾರಣವಾಗುತ್ತದೆ ಮತ್ತು ಪ್ರಮುಖ ಅಂಗಗಳಿಗೆ ರಕ್ತದ ಹರಿವನ್ನು ಕಡಿಮೆ ಮಾಡುತ್ತದೆ. ಇದು ತ್ಯಾಜ್ಯ ಉತ್ಪನ್ನಗಳನ್ನು ಫಿಲ್ಟರ್ ಮಾಡಲು ಮತ್ತು ಸಮತೋಲನವನ್ನು ಕಾಪಾಡಿಕೊಳ್ಳಲು ಮೂತ್ರಪಿಂಡಗಳ ಸಾಮರ್ಥ್ಯವನ್ನು ದುರ್ಬಲಗೊಳಿಸುತ್ತದೆ. ಇದರ ಪರಿಣಾಮವಾಗಿ, ಧೂಮಪಾನಿಗಳು ಮೂತ್ರಪಿಂಡದ ಕಾರ್ಯವನ್ನು ಕಡಿಮೆ ಮಾಡಲು ಹೆಚ್ಚು ಒಳಗಾಗುತ್ತಾರೆ. ನಂತರ, ಅಂತಹ ರೋಗಿಗಳಿಗೆ ಮೂತ್ರಪಿಂಡ ಕಸಿ ಅಥವಾ ಆಜೀವ ಡಯಾಲಿಸಿಸ್ ಅಗತ್ಯವಿರುತ್ತದೆ.

ಇದನ್ನೂ ಓದಿ: Health: ಧೂಮಪಾನ ನಿಮ್ಮ ಲೈಂಗಿಕ ಸಾಮರ್ಥ್ಯದ ಮೇಲೂ ಪರಿಣಾಮ ಬೀರುತ್ತೆ, ಎಚ್ಚರ!

ಸುರಕ್ಷಿತ ಔಷಧಿಗಳು, ನಿಕೋಟಿನ್ ರಿಪ್ಲೇಸ್ಮೆಂಟ್ ಥೆರಪಿ ಮತ್ತು ಸ್ವಂತ ಆಸಕ್ತಿಯಿಂದ ಹಾಗೂ ಬದ್ಧತೆಯಿಂದ ಧೂಮಪಾನವನ್ನು ನಿಲ್ಲಿಸುವುದು ಸಾಧ್ಯ. ಜಾಗೃತಿ ಮೂಡಿಸುವ ಮೂಲಕ ಮತ್ತು ತಡೆಗಟ್ಟುವ ಕ್ರಮಗಳಿಗೆ ಸಲಹೆ ನೀಡುವ ಮೂಲಕ, ಕಿಡ್ನಿ ಆರೋಗ್ಯಕ್ಕೆ ಆದ್ಯತೆ ನೀಡುವ ಮತ್ತು ಧೂಮಪಾನದ ಹಾನಿಕಾರಕ ಪರಿಣಾಮಗಳಿಂದ ಪಾರಾಗಬಹುದಾಗಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ