AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ | ಮಕರ ರಾಶಿಯವರಿಗೆ ಉದಾಸೀನತೆಯಿಂದ ಕಾರ್ಯಹಾನಿ ಸಂಭವ

Today Horoscope ಫೆಬ್ರವರಿ 12, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

ದಿನ ಭವಿಷ್ಯ | ಮಕರ ರಾಶಿಯವರಿಗೆ ಉದಾಸೀನತೆಯಿಂದ ಕಾರ್ಯಹಾನಿ ಸಂಭವ
ದಿನ ಭವಿಷ್ಯ
ರಾಜೇಶ್ ದುಗ್ಗುಮನೆ
| Edited By: |

Updated on:Feb 13, 2021 | 6:35 PM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘಮಾಸ, ಶಿಶಿರ ಋತು , ಶುಕ್ಲಪಕ್ಷ, ಪಾಡ್ಯ ತಿಥಿ, ಶುಕ್ರವರ, ಫೆಬ್ರವರಿ 12, 2021. ಧನಿಷ್ಥೆ ನಕ್ಷತ್ರ, ರಾಹುಕಾಲ: ಇಂದು ಬೆಳಗ್ಗೆ 11.33 ರಿಂದ ಮಧ್ಯಾಹ್ನ 12:29ವರೆಗೆ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.44. ಸೂರ್ಯಾಸ್ತ: ಸಂಜೆ 6.16.

ತಾ.12-02-2021 ರ ಶುಕ್ರವಾರದ ರಾಶಿಭವಿಷ್ಯ

ಮೇಷ: ಗುರಿಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವವು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವದು. ಶುಭ ಸಂಖ್ಯೆ:6

ವೃಷಭ: ಉದರಬೇನೆ ಬರುವ ಸಾಧ್ಯತೆ ಇದೆ ಆರೋಗ್ಯದ ಕಾಳಜಿವಹಿಸಿ. ಬಂಧುಮಿತ್ರರ ಭೇಟಿ, ಮನೆಯಲ್ಲಿ ಮಂಗಲಕಾರ್ಯ ಜರುಗುವ ಯೋಗವಿದೆ. ಕೋರ್ಟನಲ್ಲಿರುವ ವ್ಯಾಜ್ಯಗಳು ಕೊನೆಗೊಳ್ಳುವವು. ಶುಭ ಸಂಖ್ಯೆ: 1

ಮಿಥುನ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವದು. ಶುಭ ಸಂಖ್ಯೆ: 3

ಕರ್ಕ: ಮಾತಿನಂತೆಯೇ ಎಲ್ಲವೂ ನಡೆಯುವದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವದು.ಲಾಭದಾಯಕ ಹುದ್ದೆ ದೊರೆಯುವದು. ಶುಭ ಸಂಖ್ಯೆ: 9

ಸಿಂಹ: ವಿವಿಧ ಮೂಲಗಳಿಂದ ಸಹಾಯ ದೊರೆಯುವದು. ಉದ್ಯೋಗದಲ್ಲಿ ಅಭಿವೃದ್ಧಿ ಇರುವದು. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಲೆಕ್ಕಾಚಾರ ತಪ್ಪದಂತೆ ಎಚ್ಚರವಹಿಸಿರಿ.ಮನೆಯಲ್ಲಿ ಮಂಗಲಕಾರ್ಯ ಜರುಗುವದು. ಶುಭ ಸಂಖ್ಯೆ: 4

ಕನ್ಯಾ: ವ್ಯವಹಾರಿಕ ಸಂಪರ್ಕಗಳು ಹೆಚ್ಚುವವು ಅದರಂತೆ ಧನದ ಮೂಲಗಳೂ ಹೆಚ್ಚುವವು. ಸಾಲ ಮರುಪಾವತಿಯಾಗುವದು. ಮನೆಯಲ್ಲಿ ನೆಮ್ಮದಿ ಇರುವದು. ಅವಿವಾಹಿತರಿಗೆ ಕಂಕಣಬಲ ಕೂಡಿಬರುವದು. ಶುಭ ಸಂಖ್ಯೆ: 7

ತುಲಾ: ಪೂರ್ವತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವದು. ಮೇಲಧಿಕಾರಿಗಳ ಒತ್ತಡ ಬೇಸರ ತರುವದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವದು. ಶ್ರಮಕ್ಕೆ ತಕ್ಕ ಲಾಭ ದೊರೆಯುವದು. ಶುಭ ಸಂಖ್ಯೆ: 2

ವೃಶ್ಚಿಕ: ಅಭದ್ರತೆ ಕಾಡುವ ಸಂಭವವಿದೆ.ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ.ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವದು. ಶುಭ ಸಂಖ್ಯೆ: 8

ಧನು: ಭವಿಷ್ಯತ್ತಿನ ಉಪೇಕ್ಷೆ ಮಾಡದೇ ಉಳಿತಾಯಕ್ಕೆ ಗಮನಹರಿಸಿರಿ. ಆಪತ್ತುಗಳ ಪರಿಹಾರಕ್ಕಾಗಿ ವ್ಯಥಾ ತಿರುಗಾಟದ ಸಂಭವವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ: 3

ಮಕರ: ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ. ಶುಭ ಸಂಖ್ಯೆ: 5

ಕುಂಭ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 9

ಮೀನ: ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವವು. ಈ ಸಮಯದಲ್ಲಿ ಉತ್ತಮ ಧÀನಾರ್ಜನೆ ಯಾಗುವುದು ವಿದೇಶಪ್ರಯಾಣ, ಪ್ರೇಮಸಂಭಾಷಣೆ, ದೇವ ಬ್ರ್ರಾಹ್ಮಣ,ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು. ಶುಭ ಸಂಖ್ಯೆ: 1

basavaraj guruji

ಬಸವರಾಜ ಗುರೂಜಿ

(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)

Published On - 6:31 am, Fri, 12 February 21

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​