AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀರ ಯೋಧನ ಅಂತಿಮ ಆಸೆಗೂ ಬೆಂಕಿ ಇಟ್ಟ ಕ್ರೂರಿ ಕೊರೊನಾ

ಕೊಡಗು: ವಿಶ್ವವನ್ನೇ ಆವರಿಸಿರುವ ಕೊರೊನಾ ಮಹಾಮಾರಿ ಸೋಂಕಿತರನ್ನು ಬಲಿ ಪಡೆಯುತ್ತಿರುವುದರ ಜೊತೆಗೆ ಬದುಕಿರುವ ಹಲವರ ಜೀವನವನ್ನು ತೀವ್ರ ಸಂಕಷ್ಟಕ್ಕೆ ದೂಡಿದೆ. ಕೊರೊನಾ ಅಟ್ಟಹಾಸಕ್ಕೆ ಜನರು ತಮ್ಮ ಬದುಕಿನ ಆಸೆಯನ್ನೇ ಕಳೆದುಕೊಂಡಿದ್ದಾರೆ. ಬದುಕಿದ್ದಾಗ ನೆಮ್ಮದಿಯಿಂದ ಇರಲು ಬಿಡದ ಕೊರೊನಾ ಇದೀಗ ಸತ್ತ ಮೇಲೂ ಜನರನ್ನ ಕಾಡಲು ಶುರು ಮಾಡಿದೆ. ಚೀನಾ, ಪಾಕ್​ ಯುದ್ಧದಲ್ಲಿ ಭಾಗಿಯಾಗಿದ್ದರು: ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಒಂಟಿಯಂಗಡಿ ಗ್ರಾಮದ ನಿವಾಸಿ ಸೋಮೆಯಂಡ ಕಾರಿಯಪ್ಪನವರು 1962ರ ಚೀನಾ ಹಾಗೂ 1965ರ ಪಾಕಿಸ್ತಾನ ವಿರುದ್ಧದ ಯುದ್ಧದಲ್ಲಿ ಭಾಗಿಯಾಗಿದ್ದರು. […]

ವೀರ ಯೋಧನ ಅಂತಿಮ ಆಸೆಗೂ ಬೆಂಕಿ ಇಟ್ಟ ಕ್ರೂರಿ ಕೊರೊನಾ
ಸಾಧು ಶ್ರೀನಾಥ್​
| Updated By: |

Updated on: Jun 26, 2020 | 4:52 PM

Share

ಕೊಡಗು: ವಿಶ್ವವನ್ನೇ ಆವರಿಸಿರುವ ಕೊರೊನಾ ಮಹಾಮಾರಿ ಸೋಂಕಿತರನ್ನು ಬಲಿ ಪಡೆಯುತ್ತಿರುವುದರ ಜೊತೆಗೆ ಬದುಕಿರುವ ಹಲವರ ಜೀವನವನ್ನು ತೀವ್ರ ಸಂಕಷ್ಟಕ್ಕೆ ದೂಡಿದೆ. ಕೊರೊನಾ ಅಟ್ಟಹಾಸಕ್ಕೆ ಜನರು ತಮ್ಮ ಬದುಕಿನ ಆಸೆಯನ್ನೇ ಕಳೆದುಕೊಂಡಿದ್ದಾರೆ. ಬದುಕಿದ್ದಾಗ ನೆಮ್ಮದಿಯಿಂದ ಇರಲು ಬಿಡದ ಕೊರೊನಾ ಇದೀಗ ಸತ್ತ ಮೇಲೂ ಜನರನ್ನ ಕಾಡಲು ಶುರು ಮಾಡಿದೆ.

ಚೀನಾ, ಪಾಕ್​ ಯುದ್ಧದಲ್ಲಿ ಭಾಗಿಯಾಗಿದ್ದರು: ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಒಂಟಿಯಂಗಡಿ ಗ್ರಾಮದ ನಿವಾಸಿ ಸೋಮೆಯಂಡ ಕಾರಿಯಪ್ಪನವರು 1962ರ ಚೀನಾ ಹಾಗೂ 1965ರ ಪಾಕಿಸ್ತಾನ ವಿರುದ್ಧದ ಯುದ್ಧದಲ್ಲಿ ಭಾಗಿಯಾಗಿದ್ದರು. ಸೇನೆಯಿಂದ ನಿವೃತ್ತಿ ಹೊಂದಿದ ಬಳಿಕ ಕೆಲ ವರ್ಷ ಮಹಾರಾಷ್ಟ್ರದ ಪುಣೆಯ ಟೆಲ್ಕೋ ಸಂಸ್ಥೆಯಲ್ಲಿ ಸೆಕ್ಯುರಿಟಿ ಇಂಚಾರ್ಜ್ ಆಗಿ ಕಾರ್ಯ ನಿರ್ವಹಿಸಿದರು. ನಂತರ ಅವರು ತಮ್ಮ ಪತ್ನಿಯೊಂದಿಗೆ ಸ್ವಗ್ರಾಮವಾದ ಒಂಟಿಯಂಗಡಿಯಲ್ಲಿ ನೆಲಸಿದ್ದರು.

ದೇಹವನ್ನು ದಾನ ಮಾಡಲು ಬಯಸಿದ್ದರು: ಕೆಲ ವರ್ಷಗಳ ಹಿಂದೆ ತಮ್ಮ ಪತ್ನಿಯನ್ನು ಕಳೆದುಕೊಂಡರು. ಸರಳ ವ್ಯಕ್ತಿತ್ವದ ಕಾರಿಯಪ್ಪನವರು ತಮ್ಮ ಮರಣದ ನಂತರ ಅವರ ದೇಹವನ್ನು ಸುಟ್ಟು ಬೂದಿ ಮಾಡುವ ಬದಲು ವೈದ್ಯಕೀಯ ವಿದ್ಯಾರ್ಥಿಗಳ ಸಂಶೋಧನೆಗೆ ಬಳಸಿಕೊಳ್ಳಲು ಇಚ್ಛಿಸಿದ್ದರು. ಅದರಂತೆ ಕಾರಿಯಪ್ಪನವರು ಮರಣದ ನಂತರ ತಮ್ಮ ದೇಹವನ್ನು ಮೈಸೂರಿನ ಖಾಸಗಿ ವೈದ್ಯಕೀಯ ಕಾಲೇಜಿಗೆ ದಾನ ಮಾಡಲು ಬಯಸಿದ್ದರು. ಸುಮಾರು 15 ವರ್ಷಗಳ ಹಿಂದೆಯೇ ತಮ್ಮ ಸ್ವ-ಇಚ್ಛೆಯಿಂದ ಕಾಲೇಜಿಗೆ ಒಪ್ಪಿಗೆ ಪತ್ರ ಬರೆದುಕೊಟ್ಟು ಸಾರ್ಥಕತೆ ಮೆರೆದಿದ್ದರು.

ಆದರೆ, ಕೇವಲ 15 ದಿನಗಳ ಹಿಂದೆ ಮೈಸೂರಿನ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಕಾರಿಯಪ್ಪನವರಿಗೆ ದೂರವಾಣಿ ಕರೆ ಮಾಡಿದ್ದರು. ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಬೆಡ್​ ಕೊರತೆ ಇದೆ. ಮತ್ತು ಕೊರೊನಾ ಹರಡುವ ಭೀತಿಯಿಂದ ಮರಣದ ಬಳಿಕ ತಮ್ಮ ದೇಹವನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು. ಜೊತೆಗೆ, ತಮ್ಮ ಮರಣದ ನಂತರ ದೇಹದ ಅಂತ್ಯಕ್ರಿಯೆಯನ್ನು ನೆರವೇರಿಸಲು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಕೂಡ ಸೂಚಿಸಿದರು.

ಕೊಡವ ಸಂಪ್ರದಾಯದಂತೆ ಅಂತ್ಯಕ್ರಿಯೆ: ದುರಾದೃಷ್ಟವಶಾತ್ 90ವರ್ಷದ ಕಾರಿಯಪ್ಪನವರು ಜೂನ್ 24ರ ಮುಂಜಾನೆ ವಯೋಸಹಜ ಕಾಯಿಲೆಯಿಂದ ಮರಣ ಹೊಂದಿದರು. ಮೃತರ ಅಂತ್ಯಕ್ರಿಯೆನ್ನು ಕುಟುಂಬದವರು ಕೊಡವ ಸಂಪ್ರದಾಯದಂತೆ ಚಿತೆಗೆ ಬೆಂಕಿ ಹಚ್ಚುವ ಮೂಲಕ ತಮ್ಮ ತೋಟದಲ್ಲಿಯೇ ನೆರವೇರಿಸಿದರು. ಜೀವಿತಾವಧಿಯಲ್ಲಿ ಏನನ್ನೂ ಬಯಸದ ಹಿರಿಯ ಸೇನಾನಿಯ ಕೊನೆಯ ಆಸೆಯೂ ಈಡೇರಲಿಲ್ಲ. ಒಟ್ಟಿನಲ್ಲಿ, ಮರಣದ ಬಳಿಕ ತಮ್ಮ ದೇಹವನ್ನು ಉನ್ನತ ಕಾರ್ಯಕ್ಕೆ ಬಳಸಿಕೊಳ್ಳಬೇಕು ಎನ್ನುವ ಕೊನೆಯ ಆಸೆಯನ್ನು ಕೂಡಾ ಕೊರೊನಾ ಕಿತ್ತುಕೊಂಡಿದೆ ಎನ್ನುವುದೇ ದುಃಖದ ಸಂಗತಿ. -ಸುರೇಶ್ ಬಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!