
ಕೊಡಗು: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಹೀಗಾಗಿ, ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ಗುಡ್ಡ ಕುಸಿಯುವ ಭೀತಿ ಎದುರಾಗಿದೆ. ಹಲವೆಡೆ ಗುಡ್ಡದಿಂದ ಮಣ್ಣು ರಸ್ತೆಗೆ ಜಾರುತ್ತಿರುವ ಹಿನ್ನೆಲೆಯಲ್ಲಿ ಮಣ್ಣು ತೆರವು ಮಾಡುವವರೆಗೆ ಭಾರಿ ವಾಹನಗಳಿಗೆ ನಿಷೇಧ ಹೇರಲಾಗಿದೆ.
ಇತ್ತ ತಲಕಾವೇರಿ ವ್ಯಾಪ್ತಿಯಲ್ಲಿ ನಿರಂತರವಾಗಿ ಬೀಳುತ್ತಿದೆ ಮಳೆಯಿಂದ ಭಾಗಮಂಡಲದ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತವಾಗಿದೆ. ಜೊತೆಗೆ, ಭಗಂಡೇಶ್ವರ ದೇವಾಲಯಕ್ಕೂ ನೀರು ನುಗ್ಗುವ ಸಾಧ್ಯತೆಯಿದೆ. ಹಾಗಾಗಿ,ಅಪಾಯದ ಸ್ಥಿತಿಯಲ್ಲಿರುವ ಮನೆಗಳಿಂದ ನಿವಾಸಿಗಳನ್ನ ಸ್ಥಳಾಂತರ ಮಾಡಲಾಗುತ್ತಿದೆ.
Published On - 8:29 am, Thu, 6 August 20