ಕೊರೊನಾ ಇನ್ನೂ ಹೆಚ್ಚಾಗಲಿದೆ: ಕೋಲಾರದಲ್ಲಿ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ ಡಾ. ಶಿವಾನಂದ ಶಿವಯೋಗಿ

ಕೊರೊನಾ ಇನ್ನೂ ಹೆಚ್ಚಾಗಲಿದೆ. ಆದಾಗ್ಯೂ ದೈವ ಕೃಪೆಯಿಂದ ಒಳ್ಳೆಯ ದಿನಗಳು ಬರಲಿವೆ ಎಂದು ಕೋಡಿ ಮಠದ ಶ್ರೀ ಶಿವಾನಂದ ಶ್ರೀಗಳು ಭವಿಷ್ಯ ಹೇಳಿದ್ದಾರೆ.

ಕೊರೊನಾ ಇನ್ನೂ ಹೆಚ್ಚಾಗಲಿದೆ: ಕೋಲಾರದಲ್ಲಿ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ ಡಾ. ಶಿವಾನಂದ ಶಿವಯೋಗಿ
ಕೊರೊನಾ ಇನ್ನೂ ಹೆಚ್ಚಾಗಲಿದೆ: ಕೋಲಾರದಲ್ಲಿ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ ಡಾ. ಶಿವಾನಂದ ಶಿವಯೋಗಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 30, 2021 | 3:10 PM

ಕೋಲಾರ: ಅರಸೀಕೆರೆ ಹಾರನಹಳ್ಳಿ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ಸ್ವಾಮೀಜಿ ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ. ಮುಂದಿನ ಕಾರ್ತಿಕ ಮಾಸದವರೆಗೆ ಜಲಗಂಡಾತರ ಇದೆ. ಕೊರೊನಾ ಇನ್ನೂ ಹೆಚ್ಚಾಗಲಿದೆ. ಆದಾಗ್ಯೂ ದೈವ ಕೃಪೆಯಿಂದ ಒಳ್ಳೆಯ ದಿನಗಳು ಬರಲಿವೆ ಎಂದು ಕೋಡಿ ಮಠದ ಶ್ರೀ ಶಿವಾನಂದ ಶ್ರೀಗಳು ಭವಿಷ್ಯ ಹೇಳಿದ್ದಾರೆ.

ಅಶುಭ ನುಡಿಗಳು ಈಗ ಬೇಡ. ಕುಂಭದಲ್ಲಿ ಗುರುಗ್ರಹ ಅಂದ್ರೆ ತುಂಬುವವು ಕೆರೆ ಕಟ್ಟೆ. ಜಲಗಂಡಾಂತರ ಇನ್ನೂ ಇದೆ. ನೂತನ‌ ಸಿಎಂ ಬಗ್ಗೆ ಈಗಲೇ ಏನನ್ನು ಹೇಳಬಾರದು. ಏನನ್ನು ಅಶುಭ ನುಡಿಯಬಾರದು. ಕಾರ್ತಿಕ ಮಾಸ ಕಳೆದ ನಂತರ ಹೇಳುತ್ತೇನೆ ಎಂದು ಕೋಲಾರ ತಾಲ್ಲೂಕು ಲಕ್ಷ್ಮೀಸಾಗರ ಗ್ರಾಮದಲ್ಲಿ ಕೋಡಿ ಮಠದ ಶ್ರೀ ಶಿವಾನಂದ ಶ್ರೀಗಳು ಮಾರ್ಮಿಕವಾಗಿ ಹೇಳಿದ್ದಾರೆ.

ಕರ್ನಾಟಕ ರಾಜಕೀಯ ವಿಪ್ಲವದ ಬಗ್ಗೆ ಕೋಡಿಮಠದ ಶ್ರೀ ಕಾರವಾರದಲ್ಲಿ ಈ ಹಿಂದೆ ನುಡಿದಿದ್ದ ಭವಿಷ್ಯ ಹೀಗಿತ್ತು: ರಾಜ್ಯದಲ್ಲಿ ಸದ್ಯ ಎದ್ದಿರುವ ರಾಜಕೀಯ ವಿಪ್ಲವ ಸುಖಾಂತ್ಯ ಕಾಣಲಿದೆ ಎಂದು ಕರ್ನಾಟಕ ರಾಜಕೀಯ (Karnataka Politics) ಕುರಿತು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದರು.  ಬೇಟೆಗಾರನೊಬ್ಬನಿಂದ ತಪ್ಪಿಸಿಕೊಂಡ ಜಿಂಕೆ ಓಡಿಹೋಗಿತ್ತು. ಸನ್ಯಾಸಿಯೊಬ್ಬನ ಎದುರು ಹಾದು ಜಿಂಕೆ ಓಡಿಹೋಗಿತ್ತು. ಜಿಂಕೆಯ ಬಗ್ಗೆ ಸನ್ಯಾಸಿಯಲ್ಲಿ ಬೇಟೆಗಾರ ಕೇಳಿದಾಗ ದ್ವಂದ್ವ ಉಂಟಾಯಿತು. ಜಿಂಕೆ ಓಡಿಹೋದ ದಿಕ್ಕು ಹೇಳಿದರೆ ಅದರ ಸಾವಿಗೆ ಕಾರಣ ಆಗುತ್ತದೆ. ಹೇಳದಿದ್ದರೆ ಸುಳ್ಳು ನುಡಿದಂತಾಗುತ್ತದೆ ಎಂಬ ಸಂಕಟ ಉಂಟಾಯಿತು. ಇದೇ ವಿಚಾರ ರಾಜಕೀಯದ ಬಗ್ಗೆ ಹೇಳಲು ತೊಡಕಾಗುತ್ತದೆ. ಆದರೆ ಸದ್ಯವೇ ಈ ಸ್ಥಿತಿ ಸುಖಾಂತ್ಯ ಕಾಣಲಿದೆ ಎಂದು ಶ್ರೀಗಳು ಹೇಳಿದ್ದರು.

ಸಂಕ್ರಾಂತಿಯ ಒಳಗೆ ಬಹುದೊಡ್ಡ ಅವಘಡ ಆಗಲಿದೆ. ಜಗತ್ತನ್ನು ತಲ್ಲಣಿಸುವ ಅವಘಡ ಆಗಲಿದೆ. ಆಗಸ್ಟ್ 3ನೇ ವಾರದಿಂದ ರೋಗ ರುಜಿನಗಳು ಹೆಚ್ಚಾಗಲಿವೆ. ಜನವರಿವರೆಗೂ ರೋಗ ರುಜಿನಗಳು ಹೀಗೆಯೇ ಇರಲಿವೆ. ಜನ ಭೀತಿಯಿಂದ ಸಾಯ್ತಿದ್ದಾರೆ ಹೊರತು ಕಾಯಿಲೆಯಿಂದಲ್ಲ ಎಂದೂ ಸಹ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಆಗ ಭವಿಷ್ಯ ಹೇಳಿದ್ದರು. ನವೆಂಬರ್‌ನಿಂದ ಸಂಕ್ರಾಂತಿ ನಡುವೆ ದೇಶ ಮಟ್ಟದಲ್ಲಿ ದೊಡ್ಡ ರಾಜಕೀಯ ಅವಘಡ ಸಂಭವಿಸಲಿದೆ. ಅದು ಜಾಗತಿಕವಾಗಿ ತಲ್ಲಣ ಸೃಷ್ಟಿಸುತ್ತದೆ ಎಂದೂ ಅವರು ನುಡಿದಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ವಿಚಾರ: ಕರ್ನಾಟಕ ರಾಜಕೀಯ ವಿಪ್ಲವದ ಬಗ್ಗೆ ಕೋಡಿಮಠದ ಶ್ರೀ ಭವಿಷ್ಯ

(kodi mutt Seer sri shivananda Shivayogi Rajendra swamiji prediction in kolar coronavirus will increase)

Published On - 3:01 pm, Fri, 30 July 21

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್