ಕೊಪ್ಪಳ: ಶಾಸಕ ರಾಘವೇಂದ್ರ ಹಿಟ್ನಾಳ್ಗೆ ಕೊರೊನಾ ದೃಢವಾಗಿರುವ ಬಗ್ಗೆ ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಮಾಹಿತಿ ನೀಡಿದ್ದಾರೆ.
ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕಳೆದ ಐದು ದಿನದ ಹಿಂದೆ ಶಾಸಕ ರಾಘವೇಂದ್ರ ಹಿಟ್ನಾಳ್ಗೆ ಕ್ವಾರಂಟೈನ್ ಮಾಡಲಾಗಿತ್ತು. ಆದರೆ ಕ್ವಾರಂಟೈನ್ ಮುಗಿಸಿದ 3 ದಿನಗಳ ಬಳಿಕ ಅವರಿಗೆ ಕೊರೊನಾ ಇರುವುದು ದೃಢವಾಗಿದೆ.
ಕೋವಿಡ್ ನಿಯಂತ್ರಣ ಸಭೆಯಲ್ಲಿ ಇಬ್ಬರು ಶಾಸಕರು ಅಕ್ಕ ಪಕ್ಕ ಕೂತಿದ್ದರು. ಹೀಗಾಗಿ ಕೊರೊನಾ ಹರಡಿದೆ ಎನ್ನಲಾಗುತ್ತಿದೆ. ಅಲ್ಲದೆ ಶಾಸಕ ರಾಘವೇಂದ್ರ ಹಿಟ್ನಾಳ್ ಒಂದು ವಾರದ ಹಿಂದೆ ಕೊಪ್ಪಳ ತಾಲೂಕಿನ ಕಾಟ್ರಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಹೀಗಾಗಿ ಈಗ ಆ ಕಾರ್ಯಕ್ರಮದಲ್ಲಿ ಭಾಗಿಯಾದ ಮಂದಿಗೆ ಕೊರೊನಾ ಆತಂಕ ಶುರುವಾಗಿದೆ.