ಪ್ರಿಯಾಂಕಾ ಗಾಂಧಿ ವಾಡ್ರಾ ಸಮ್ಮುಖದಲ್ಲಿ ಗೃಹಲಕ್ಷ್ಮಿ ಯೋಜನೆ ಘೋಷಣೆ ಮಾಡಿದ ಡಿಕೆ ಶಿವಕುಮಾರ
ಒಂದು ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಕುಟುಂಬ ನಿರ್ವಹಣೆಯ ಜವಾಬ್ದಾರಿಯನ್ನು ಹೊತ್ತುಕೊಂಡಿರುವ ಪ್ರತಿ ಮಹಿಳೆಗೆ ಮಾಸಿಕ 2,000 ಧನಸಹಾಯ ನೀಡುವ ಬಗ್ಗೆ ಶಿವಕುಮಾರ್ ಘೋಷಣೆ ಮಾಡಿದರು.
ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿಯವರು (Priyanka Gandhi Vadra) ಕರ್ನಾಟಕ ಕಾಂಗ್ರೆಸ್ ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ಶಕ್ತಿ ತುಂಬಲು ಬಂದಿದ್ದಾರೆ ಅಂತ ಕಾಂಗ್ರೆಸ್ ನಾಯಕರು ಹೇಳಿದ್ದು ನಿಜ ಅನಿಸುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ (DK Shivakumar) ಪೂರ್ತಿ ಬೆಂಗಳೂರು ನಗರಕ್ಕೆ ಕೇಳಿಸುವಂತೆ, ಗೃಹಲಕ್ಷ್ಮಿ ಯೋಜನೆ (Grihalakshmi Scheme) ಘೋಷಣೆ ಮಾಡಿದ್ದೇ ಇದಕ್ಕೆ ಸಾಕ್ಷಿ. ಒಂದು ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಕುಟುಂಬ ನಿರ್ವಹಣೆಯ ಜವಾಬ್ದಾರಿಯನ್ನು ಹೊತ್ತುಕೊಂಡಿರುವ ಪ್ರತಿ ಮಹಿಳೆಗೆ ಮಾಸಿಕ 2,000 ಧನಸಹಾಯ ನೀಡುವ ಬಗ್ಗೆ ಪ್ರಿಯಾಂಕಾ ಅವರೆದುರು ಪ್ರಮಾಣಮಾಡುತ್ತೇವೆ ಅಂತ ಶಿವಕುಮಾರ ಎದೆಸೆಟೆಸಿ, ಕೈ ಕುಟ್ಟಿ, ಕೈ ಎತ್ತಿ ಹೇಳಿದಾಗಲೇ ಪಕ್ಷಕ್ಕೆ ಪ್ರಿಯಾಂಕಾ ಶಕ್ತಿ ತುಂಬಿದ್ದು ಸ್ಪಷ್ಟವಾಗಿತ್ತು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Latest Videos