AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1999ರಲ್ಲಿ ಎಸ್​.ಎಂ.ಕೃಷ್ಣ ಕುರುಡುಮಲೆಯಿಂದ ಪಾಂಚಜನ್ಯ ಮೊಳಗಿಸಿದ್ದರು, ನಾವೂ ಮತ್ತೆ ಇಲ್ಲಿಂದಲೇ ಪಾಂಚಜನ್ಯ ಮೊಳಗಿಸ್ತೇವೆ -ಡಿ.ಕೆ.ಶಿವಕುಮಾರ್

ಡಿಕೆ ಶಿವಕುಮಾರ್ ಕೋಲಾರಕ್ಕೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ ರಾಮಸಂದ್ರದ ಬಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರನ್ನು ಅದ್ಧೂರಿಯಾಗಿ ಸ್ವಾಗತ ಮಾಡಲಾಗಿದೆ. ಬೃಹತ್ ಹಾರ ಹಾಕಿ, ಬೆಳ್ಳಿ ಗದೆ ನೀಡಿ ಕಾರ್ಯಕರ್ತರು ಸ್ವಾಗತ ಕೋರಿದ್ದಾರೆ.

1999ರಲ್ಲಿ ಎಸ್​.ಎಂ.ಕೃಷ್ಣ ಕುರುಡುಮಲೆಯಿಂದ ಪಾಂಚಜನ್ಯ ಮೊಳಗಿಸಿದ್ದರು, ನಾವೂ ಮತ್ತೆ ಇಲ್ಲಿಂದಲೇ ಪಾಂಚಜನ್ಯ ಮೊಳಗಿಸ್ತೇವೆ -ಡಿ.ಕೆ.ಶಿವಕುಮಾರ್
ಮುಳಬಾಗಿಲಿನ ದರ್ಗಾಗೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಆಯೇಷಾ ಬಾನು
| Edited By: |

Updated on:Mar 01, 2021 | 2:34 PM

Share

ಕೋಲಾರ: ಪಕ್ಷ ಸಂಘಟನೆ ನಿಟ್ಟಿನಲ್ಲಿ ಇಂದು ಡಿಕೆ ಶಿವಕುಮಾರ್ ಕೋಲಾರಕ್ಕೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ ರಾಮಸಂದ್ರದ ಬಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರನ್ನು ಅದ್ಧೂರಿಯಾಗಿ ಸ್ವಾಗತ ಮಾಡಲಾಗಿದೆ. ಬೃಹತ್ ಹಾರ ಹಾಕಿ, ಬೆಳ್ಳಿ ಗದೆ ನೀಡಿ ಕಾರ್ಯಕರ್ತರು ಸ್ವಾಗತ ಕೋರಿದ್ದಾರೆ. ಬಳಿಕ ತೆರೆದ ವಾಹನದಲ್ಲಿ ಕೋಲಾರದವರೆಗೆ ಡಿಕೆಶಿ ಱಲಿ ಮಾಡಿದ್ದಾರೆ. ಈ ವೇಳೆ ಡಿಕೆಶಿಗೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಸಾಥ್ ನೀಡಿದ್ದಾರೆ. 1999ರಲ್ಲಿ ಎಸ್​.ಎಂ.ಕೃಷ್ಣ ಇದೇ ಕೋಲಾರ ಜಿಲ್ಲೆಯಿಂದ ಪಾಂಚಜನ್ಯ ಕಾಂಗ್ರೆಸ್​ ಯಾತ್ರೆ ಆರಂಭಿಸಿದ್ರು. ಇದೀಗ ನಾವು ಇಲ್ಲಿಂದಲೇ ಆರಂಭಿಸುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕುರುಡುಮಲೆ ಗಣೇಶನಿಗೆ ಡಿಕೆಶಿ ಪೂಜೆ ಇನ್ನು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುರುಡುಮಲೆಗೆ ತೆರಳಿದ ಡಿ.ಕೆ.ಶಿವಕುಮಾರ್, ಕುರುಡುಮಲೆ ಗಣೇಶ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ. ಬಳಿಕ ಕೋಲಾರದಲ್ಲಿ ಜನಧ್ವನಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಪಕ್ಷ ಸಂಘಟನೆ ಮಾಡುವ ನಿಟ್ಟಿನಲ್ಲಿ ಇಂದು ಕುರುಡುಮಲೆಗೆ ಭೇಟಿ ನೀಡಿ ವಿನಾಯಕನಿಗೆ ಪೂಜೆ ಸಲ್ಲಿಸಲಾಗಿದೆ. 1999ರಲ್ಲಿ ಎಸ್.ಎಂ.ಕೃಷ್ಣ ಕುರುಡುಮಲೆಯಿಂದ ಪಾಂಚಜನ್ಯ ಯಾತ್ರೆ ಆರಂಭಿಸಿ ಪಕ್ಷ ಅಧಿಕಾರಕ್ಕೆ ತಂದಿದ್ದರು. ಈಗ ಅದೇ ರೀತಿ ನಾನು ಪಾಂಚಜನ್ಯ ಮೊಳಗಿಸಲಿದ್ದೇನೆ. ತನ್ವೀರ್ ಸೇಠ್​ರನ್ನ ಭೇಟಿ ಮಾಡಿ ಚರ್ಚೆ ಮಾಡುವೆ ಎಂದು ರಾಮಸಂದ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಇನ್ನು ಡಿಕೆಶಿಗೆ ರಾಮಲಿಂಗಾರೆಡ್ಡಿ, ಕೆ.ಆರ್.ರಮೇಶ್ ಕುಮಾರ್, ಕೆ.ಹೆಚ್.ಮುನಿಯಪ್ಪ, ಬಿ.ಕೆ.ಹರಿಪ್ರಸಾದ್ ಸಾಥ್ ನೀಡಿದ್ರು.

DK Shivakumar

ಬೃಹತ್ ಹಾರ ಹಾಕಿ, ಬೆಳ್ಳಿ ಗದೆ ನೀಡಿ ಡಿಕೆಶಿಯನ್ನು ಸ್ವಾಗತಿಸಿದ ಕಾರ್ಯಕರ್ತರು

ಮೈಸೂರು ಪಾಲಿಕೆ ಮೇಯರ್ ಚುನಾವಣೆ ಗೊಂದಲ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಡಿಕೆಶಿ ಇದೊಂದು ಸಣ್ಣ ವಿಚಾರ, ನಾವು ಇದನ್ನ ಬಗೆಹರಿಸಿಕೊಳ್ತೇವೆ ಎಂದು ಹೇಳಿದ್ದಾರೆ. ನಾನು JDS ಶಾಸಕ ಸಾ.ರಾ.ಮಹೇಶ್‌ಗೆ ಕರೆ ಮಾಡಿದ್ದು ನಿಜ. ಮೇಯರ್ ಸ್ಥಾನ ನೀಡುವ ಸಂಬಂಧ ಮಾತು ಕೊಟ್ಟಿದ್ದರು. ಅದರಂತೆ ಈ ಬಾರಿ ನಮಗೆ ಮೇಯರ್ ಸ್ಥಾನ ನೀಡಬೇಕಿತ್ತು. ಆದರೆ ಈ ಬಾರಿ ಮೇಯರ್ ಸ್ಥಾನವನ್ನು ನಮಗೆ ನೀಡಿಲ್ಲ. ಈ ಗೊಂದಲ ಬಗ್ಗೆ ಚರ್ಚಿಸಲು ತನ್ವೀರ್ ಸೇಠ್‌ ಕರೆದಿದ್ದೆ. ಇದೊಂದು ಸಣ್ಣ ವಿಚಾರ, ನಾವು ಬಗೆಹರಿಸಿಕೊಳ್ಳುತ್ತೇವೆ. ಸ್ಥಳೀಯ ರಾಜಕೀಯದಲ್ಲಿ ಈ ರೀತಿ ಇದ್ದೆ ಇರುತ್ತೆ. ಮದುವೆಗಾಗಿ ಸಿದ್ದರಾಮಯ್ಯ ನವದೆಹಲಿಗೆ ಹೋಗಿದ್ದಾರೆ. ನಮ್ಮ ಮನೆ ಕಾರ್ಯಕ್ರಮ ಹಿನ್ನೆಲೆ ನಾನು ಹೋಗಿಲ್ಲ ಎಂದರು.

ದರ್ಗಾಗೆ ಡಿಕೆಶಿ ಭೇಟಿ ಮುಳಬಾಗಿಲು ಪಟ್ಟಣದಲ್ಲಿರುವ ಪುರಾತನ ಇತಿಹಾಸ ಹೋದಿರುವ ಹೈದರ್ ಸಾಬ್ ದರ್ಗಾಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಡಿಕೆಶಿ ಜೊತೆ ಸ್ಥಳೀಯ ಮುಖಂಡರು ಹಾಗೂ ರಾಜ್ಯ ನಾಯಕರು ಭಾಗಿಯಾಗಿದ್ದರು.

DK Shivakumar

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಅದ್ಧೂರಿ ಸ್ವಾಗತ

ಇದನ್ನೂ ಓದಿ: ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬೆಳ್ಳಿಯ ಹೆಲಿಕ್ಯಾಪ್ಟರ್ ಕಾಣಿಕೆ ಅರ್ಪಿಸಿದ ಡಿಕೆ ಶಿವಕುಮಾರ್

Published On - 2:04 pm, Mon, 1 March 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್