ಚಿಕ್ಕಮಗಳೂರು: ಅಪ್ರಾಪ್ತೆ ಮೇಲೆ ನಡೆದ ಸರಣಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಅತ್ಯಾಚಾರಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ನೇತೃತ್ವದಲ್ಲಿ ಶೃಂಗೇರಿಯಲ್ಲಿ ಪ್ರತಿಭಟನೆ ನಡೆಯಿತು.
ಕೂಲಿ ಕೆಲಸ ಮಾಡುತ್ತಿದ್ದ ಚಿಕ್ಕಮ್ಮನೊಂದಿಗೆ ವಾಸವಾಗಿದ್ದ ಬಾಲಕಿಯ ಮೇಲೆ ಸುಮಾರು ನಾಲ್ಕು ತಿಂಗಳಿನಿಂದ ನಿರಂತರ ಅತ್ಯಾಚಾರ ನಡೆಯುತ್ತಿದ್ದು, ಚಿಕ್ಕಮ್ಮ ಸೇರಿ ಸುಮಾರು 17 ಜನರ ಮೇಲೆ ದೂರು ದಾಖಲಾಗಿದೆ. ಸದ್ಯ 8 ಜನರನ್ನು ಬಂಧಿಸಲಾಗಿದೆ. ಜಿಲ್ಲಾ ಪೊಲೀಸರು ಆರೋಪಿಗಳನ್ನು ಬಂಧಿಸಲು ವಿಳಂಬ ಮಾಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಇನ್ನುಳಿದ 9 ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಎಐಸಿಸಿ ಕಾರ್ಯದರ್ಶಿ ಸಂದೀಪ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಅಂಶುಮಂತ್ ಸೇರಿದಂತೆ ನೂರಾರು ಮಂದಿ ಭಾಗಿಯಾಗಿದ್ದರು.