ರಾಜ್ಯದ ವಿದ್ಯುತ್​ ಬೇಡಿಕೆಯಲ್ಲಿ ಗಣನೀಯ ಏರಿಕೆ: ಶಕ್ತಿನಗರ, YTPSನಲ್ಲಿ ವಿದ್ಯುತ್ ಉತ್ಪಾದನೆ ಪುನರಾರಂಭ

|

Updated on: Oct 11, 2020 | 6:18 PM

ರಾಯಚೂರು: ಕಳೆದ ಮೂರು ತಿಂಗಳಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಿದ್ದರಿಂದ ಜಲವಿದ್ಯುತ್​ ಸ್ಥಾವರಗಳಿಂದ ವಿದ್ಯುತ್ ಉತ್ಪಾದನೆ ಮಾಡಲಾಗ್ತಿತ್ತು. ಈ ನಡುವೆ, ಕೊರೊನಾ ಲಾಕ್​ಡೌನ್​ ಹಿನ್ನೆಲೆಯಲ್ಲಿ ಕೈಗಾರಿಕಾ ಘಟಕಗಳಿಂದ ವಿದ್ಯುತ್ ಬೇಡಿಕೆ ಸಹ ಕುಸಿದಿತ್ತು. ಹಾಗಾಗಿ, ಕರ್ನಾಟಕ ವಿದ್ಯುತ್ ನಿಗಮ ರಾಜ್ಯದ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆಯನ್ನು ಸ್ಥಗಿತಗೊಳಿಸಿತ್ತು. ಇದೀಗ, ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದ್ದು ಜಿಲ್ಲೆಯ ಶಕ್ತಿನಗರದಲ್ಲಿರುವ ರಾಯಚೂರು ಶಾಖೋತ್ಪನ್ನ ಕೇಂದ್ರದಲ್ಲಿರುವ ಎಂಟು ಘಟಕಗಳ ಪೈಕಿ ಒಂದು ಘಟಕದಲ್ಲಿ ಇಂದಿನಿಂದ ವಿದ್ಯುತ್ ಉತ್ಪಾದನೆ ಆರಂಭಿಸಿದೆ. […]

ರಾಜ್ಯದ ವಿದ್ಯುತ್​ ಬೇಡಿಕೆಯಲ್ಲಿ ಗಣನೀಯ ಏರಿಕೆ: ಶಕ್ತಿನಗರ, YTPSನಲ್ಲಿ ವಿದ್ಯುತ್ ಉತ್ಪಾದನೆ ಪುನರಾರಂಭ
Follow us on

ರಾಯಚೂರು: ಕಳೆದ ಮೂರು ತಿಂಗಳಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಿದ್ದರಿಂದ ಜಲವಿದ್ಯುತ್​ ಸ್ಥಾವರಗಳಿಂದ ವಿದ್ಯುತ್ ಉತ್ಪಾದನೆ ಮಾಡಲಾಗ್ತಿತ್ತು. ಈ ನಡುವೆ, ಕೊರೊನಾ ಲಾಕ್​ಡೌನ್​ ಹಿನ್ನೆಲೆಯಲ್ಲಿ ಕೈಗಾರಿಕಾ ಘಟಕಗಳಿಂದ ವಿದ್ಯುತ್ ಬೇಡಿಕೆ ಸಹ ಕುಸಿದಿತ್ತು. ಹಾಗಾಗಿ, ಕರ್ನಾಟಕ ವಿದ್ಯುತ್ ನಿಗಮ ರಾಜ್ಯದ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆಯನ್ನು ಸ್ಥಗಿತಗೊಳಿಸಿತ್ತು.
ಇದೀಗ, ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದ್ದು ಜಿಲ್ಲೆಯ ಶಕ್ತಿನಗರದಲ್ಲಿರುವ ರಾಯಚೂರು ಶಾಖೋತ್ಪನ್ನ ಕೇಂದ್ರದಲ್ಲಿರುವ ಎಂಟು ಘಟಕಗಳ ಪೈಕಿ ಒಂದು ಘಟಕದಲ್ಲಿ ಇಂದಿನಿಂದ ವಿದ್ಯುತ್ ಉತ್ಪಾದನೆ ಆರಂಭಿಸಿದೆ. 210 ಮೆಗ್ಯಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೊಂದಿರುವ ಈ ಘಟಕದಲ್ಲಿ ವಿದ್ಯುತ್ ಉತ್ಪಾದನೆ ಆರಂಭಿಸಲಾಗಿದೆ.

ಇದೇ ರೀತಿ, ಜಿಲ್ಲೆಯ ಯರಮರಸ ಬಳಿ ಇರುವ YTPS ಸ್ಥಾವರದ ಎರಡು ಘಟಕಗಳ ಪೈಕಿ 810 ಮೆಗಾವ್ಯಾಟ್​ ವಿದ್ಯುತ್ ಉತ್ಪಾದನಾ ಸಾಮರ್ಥ್ಯವಿರುವ ಒಂದು ಘಟಕದಲ್ಲಿ ವಿದ್ಯುತ್ ಉತ್ಪಾದನೆಯನ್ನು ಇಂದಿನಿಂದ ಆರಂಭಿಸಲಾಗಿದೆ. -ಸಿದ್ದು ಬಿರಾದಾರ್

Published On - 6:16 pm, Sun, 11 October 20