ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿ.. ಜಮಖಂಡಿ ತಾಲೂಕಿನಲ್ಲಿ ಪ್ರವಾಹ ಭೀತಿ
ಬಾಗಲಕೋಟೆ: ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಉಂಟಾಗಿದೆ. ನದಿ ಪಾತ್ರದ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರಲ್ಲಿ ಮುಳುಗಡೆ ಭೀತಿ ಉಂಟಾಗಿದೆ. ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಬ್ಯಾರೇಜಗೆ ಸಾವಿರಾರು ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಈಗಾಗಲೇ ಹಿಪ್ಪರಗಿ ಜಲಾಶಯಕ್ಕೆ 60 ಸಾವಿರ ಕ್ಯೂಸೆಕ್ನಷ್ಟು ನೀರಿನ ಒಳಹರಿವಿದ್ದು, ಅಷ್ಟೇ ಪ್ರಮಾಣದ ನೀರನ್ನ ಹಿಪ್ಪರಗಿ ಜಲಾಶಯದಿಂದ ಹೊರಬಿಡಲಾಗುತಿದೆ. ಏಕಾಏಕಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ […]
ಬಾಗಲಕೋಟೆ: ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಉಂಟಾಗಿದೆ. ನದಿ ಪಾತ್ರದ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರಲ್ಲಿ ಮುಳುಗಡೆ ಭೀತಿ ಉಂಟಾಗಿದೆ.
ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಬ್ಯಾರೇಜಗೆ ಸಾವಿರಾರು ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಈಗಾಗಲೇ ಹಿಪ್ಪರಗಿ ಜಲಾಶಯಕ್ಕೆ 60 ಸಾವಿರ ಕ್ಯೂಸೆಕ್ನಷ್ಟು ನೀರಿನ ಒಳಹರಿವಿದ್ದು, ಅಷ್ಟೇ ಪ್ರಮಾಣದ ನೀರನ್ನ ಹಿಪ್ಪರಗಿ ಜಲಾಶಯದಿಂದ ಹೊರಬಿಡಲಾಗುತಿದೆ.
ಏಕಾಏಕಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ ಕೃಷ್ಣಾ ನದಿ ಭಾಗದ ಜನರಲ್ಲಿ ಆತಂಕ ಮನೆಮಾಡಿದ್ದು, ಪ್ರವಾಹಕ್ಕೆ ಹೆದರಿ ನಿತ್ಯವು ಭಯದಲ್ಲೇ ತಮ್ಮ ಬದುಕು ಸಾಗಿಸಬೇಕಾದ ಸ್ಥಿತಿ ಆ ಭಾಗದ ಜನರಿಗೆ ಎದುರಾಗಿದೆ.
Published On - 6:25 pm, Fri, 10 July 20