ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿ.. ಜಮಖಂಡಿ ತಾಲೂಕಿನಲ್ಲಿ ಪ್ರವಾಹ ಭೀತಿ

|

Updated on: Jul 10, 2020 | 6:32 PM

ಬಾಗಲಕೋಟೆ: ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಉಂಟಾಗಿದೆ. ನದಿ ಪಾತ್ರದ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರಲ್ಲಿ ಮುಳುಗಡೆ ಭೀತಿ ಉಂಟಾಗಿದೆ. ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಬ್ಯಾರೇಜಗೆ ಸಾವಿರಾರು ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಈಗಾಗಲೇ ಹಿಪ್ಪರಗಿ ಜಲಾಶಯಕ್ಕೆ 60 ಸಾವಿರ ಕ್ಯೂಸೆಕ್​ನಷ್ಟು ನೀರಿನ ಒಳಹರಿವಿದ್ದು, ಅಷ್ಟೇ ಪ್ರಮಾಣದ ನೀರನ್ನ ಹಿಪ್ಪರಗಿ ಜಲಾಶಯದಿಂದ ಹೊರಬಿಡಲಾಗುತಿದೆ. ಏಕಾಏಕಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ […]

ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿ.. ಜಮಖಂಡಿ ತಾಲೂಕಿನಲ್ಲಿ ಪ್ರವಾಹ ಭೀತಿ
Follow us on

ಬಾಗಲಕೋಟೆ: ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಉಂಟಾಗಿದೆ. ನದಿ ಪಾತ್ರದ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರಲ್ಲಿ ಮುಳುಗಡೆ ಭೀತಿ ಉಂಟಾಗಿದೆ.

ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಬ್ಯಾರೇಜಗೆ ಸಾವಿರಾರು ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಈಗಾಗಲೇ ಹಿಪ್ಪರಗಿ ಜಲಾಶಯಕ್ಕೆ 60 ಸಾವಿರ ಕ್ಯೂಸೆಕ್​ನಷ್ಟು ನೀರಿನ ಒಳಹರಿವಿದ್ದು, ಅಷ್ಟೇ ಪ್ರಮಾಣದ ನೀರನ್ನ ಹಿಪ್ಪರಗಿ ಜಲಾಶಯದಿಂದ ಹೊರಬಿಡಲಾಗುತಿದೆ.

ಏಕಾಏಕಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ ಕೃಷ್ಣಾ ನದಿ ಭಾಗದ ಜನರಲ್ಲಿ ಆತಂಕ ಮನೆಮಾಡಿದ್ದು, ಪ್ರವಾಹಕ್ಕೆ ಹೆದರಿ ನಿತ್ಯವು ಭಯದಲ್ಲೇ ತಮ್ಮ ಬದುಕು ಸಾಗಿಸಬೇಕಾದ ಸ್ಥಿತಿ ಆ ಭಾಗದ ಜನರಿಗೆ ಎದುರಾಗಿದೆ.

Published On - 6:25 pm, Fri, 10 July 20