Karnataka Dam Water Level: ಕೆಆರ್​ಎಸ್​ ಭರ್ತಿಗೆ 4 ಅಡಿ ಬಾಕಿ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಕಾರವಾಗಿ ಮಳೆ ಸುರಿಯುತ್ತಿದ್ದು, ಕನ್ನಂಬಾಡಿ ಅಣೆಕಟ್ಟೆಗೆ ಬಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹೀಗಾಗಿ ಹಳೆ ಮೈಸೂರು ಭಾಗದ ಜನರ ಜೀವನಾಡಿ, ಕೆಆರ್​ಎಸ್ ಜಲಾಶಯ ಭರ್ತಿ ಸನಿಹಕ್ಕೆ ಬಂದಿದೆ. ಹಾಗಿದ್ದರೆ ಕೆಆರ್​​ಎಸ್​ ಜಲಾಶಯದಲ್ಲಿ ಇಂದಿನ ನೀರಿನ ಮಟ್ಟದ ವಿವರ ಇಲ್ಲಿದೆ.

Karnataka Dam Water Level: ಕೆಆರ್​ಎಸ್​ ಭರ್ತಿಗೆ 4 ಅಡಿ ಬಾಕಿ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ಕೆಆರ್​ಎಸ್​ ಡ್ಯಾಂ
Follow us
ವಿವೇಕ ಬಿರಾದಾರ
|

Updated on: Jul 21, 2024 | 7:33 AM

ಕೃಷ್ಣರಾಜಸಾಗರ ಡ್ಯಾಂ ಭರ್ತಿಯಾಗಲು ಕೇವಲ ನಾಲ್ಕು ಅಡಿ ಮಾತ್ರ ಬಾಕಿ ಇದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಲಾಯಶದಿಂದ ಕಾವೇರಿ ನದಿಗೆ 10 ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗಿದೆ. 124.80 ಅಡಿ ಗರಿಷ್ಠ ಸಾಮರ್ಥ್ಯದ ಕೆಆರ್​ಎಸ್ ಜಲಾಶಯದಲ್ಲಿ ಇದೀಗ 120 ಅಡಿ ನೀರು ಇದೆ. ಜಲಾಶಯ ಭರ್ತಿಯಾಗಲು ಕೇವಲ ನಾಲ್ಕು ಅಡಿ ಮಾತ್ರ ಬಾಕಿ ಇದೆ. ಜಲಾಶಯಕ್ಕೆ ಪ್ರತಿದಿನ 51 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕೆಆರ್​ಎಸ್​ ಸೇರಿದಂತೆ ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ (Karnataka Dam Water Level) ವಿವರ ಹೀಗಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 97.42 25.41 84,751 55,063
ತುಂಗಭದ್ರಾ ಜಲಾಶಯ (Tungabhadra Dam) 497.71 105.79 65.11 9.99 1,18,299 391
ಮಲಪ್ರಭಾ ಜಲಾಶಯ (Malaprabha Dam) 633.80 37.73 14.48 6.81 11976 194
ಕೆ.ಆರ್.ಎಸ್ (KRS Dam) 38.04 49.45 42.33 15.65 60918 2361
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 62.88 24.04 52366 0
ಕಬಿನಿ ಜಲಾಶಯ (Kabini Dam) 696.13 19.52 17.49 11.86 37963 33625
ಭದ್ರಾ ಜಲಾಶಯ (Bhadra Dam) 657.73 71.54 45.04 27.81 40612 169
ಘಟಪ್ರಭಾ ಜಲಾಶಯ (Ghataprabha Dam) 662.91 51.00 33.65 7.33 24720 522
ಹೇಮಾವತಿ ಜಲಾಶಯ (Hemavathi Dam) 890.58 37.10 34.06 16.17 34432 250
ವರಾಹಿ ಜಲಾಶಯ (Varahi Dam) 594.36 31.10 9.44 4.78 8578 0
ಹಾರಂಗಿ ಜಲಾಶಯ (Harangi Dam)​​ 871.38 8.50 6.75 4.73 12890 10,000
ಸೂಫಾ (Supa Dam) 564.00 145.33 57.40 34.96 24142 0
ನಾರಾಯಣಪುರ ಜಲಾಶಯ (Narayanpura Dam) 492.25 33.31 30.07 13.96 70626 405
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 17.98 24.78 0 147

ಮತ್ತೊಂದು ಕಡೆ ಹಾರಂಗಿ ಹಾಗೂ ಹೇಮಾವತಿ ಜಲಾಶಯಗಳು ಇಂದು ಸಂಜೆ ವೇಳೆಗೆ ಭರ್ತಿಯಾಗುವ ಸಾಧ್ಯತೆ ಇದೆ. ಹೀಗಾಗಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಮುಂಜಾಗ್ರತ ಕ್ರಮವಾಗಿ ಜಲಾಶಯದ ಹತ್ತು ಕ್ರೆಸ್ಟ್ ಗೇಟ್​ಗಳ ಮೂಲಕ 15 ಸಾವಿರ ಕ್ಯೂಸೆಕ್ ನೀರನ್ನ ಕಾವೇರಿ ನದಿಗೆ ಬಿಟ್ಟಿದ್ದಾರೆ. ಹೀಗಾಗಿ ಕಾವೇರಿಗೆ ಮತ್ತೆ ಜೀವಕಳೆ ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್