ಮಂತ್ರಿ ಮಾಡಬೇಕು ಅಂತ ನಿರ್ಧಾರ ಕೈಗೊಂಡರೆ ಅವರು ಒಪ್ಪಿಕೊಳ್ಳಬೇಕು- ಯತ್ನಾಳ್ ಹೇಳಿಕೆಗೆ ಈಶ್ವರಪ್ಪ ತಿರುಗೇಟು

ಯತ್ನಾಳ್ ಅವರನ್ನು ಮಂತ್ರಿ ಮಾಡುವುದು ಬಿಡುವುದು ಸಿಎಂಗೆ ಬಿಟ್ಟ ವಿಚಾರ - BSY ಸಂಪುಟದಲ್ಲಿ ಮಂತ್ರಿಯಾಗಲ್ಲವೆಂಬ ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಗ್ರಾಮೀಣಾಭಿವೃದ್ಧಿ ಸಚಿವ K.S.ಈಶ್ವರಪ್ಪ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಮಂತ್ರಿ ಮಾಡಬೇಕು ಅಂತ ನಿರ್ಧಾರ ಕೈಗೊಂಡರೆ ಅವರು ಒಪ್ಪಿಕೊಳ್ಳಬೇಕು- ಯತ್ನಾಳ್ ಹೇಳಿಕೆಗೆ ಈಶ್ವರಪ್ಪ ತಿರುಗೇಟು
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Jan 11, 2021 | 11:08 AM

ಮೈಸೂರು: ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ದಲ್ಲಿ ಮಂತ್ರಿಯಾಗಲ್ಲವೆಂಬ ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಗ್ರಾಮೀಣಾಭಿವೃದ್ಧಿ ಸಚಿವ K.S. ಈಶ್ವರಪ್ಪ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಯತ್ನಾಳ್ ಅವರನ್ನು ಮಂತ್ರಿ ಮಾಡುವುದು ಬಿಡುವುದು ಸಿಎಂಗೆ ಬಿಟ್ಟ ವಿಚಾರ ಎಂದಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಒಂದು ವೇಳೆ ಕೇಂದ್ರ ನಾಯಕರು ಹಾಗೂ ಮುಂಖ್ಯಮಂತ್ರಿ ಯಡಿಯೂರಪ್ಪ ಅವರು  ಸಚಿವರಾಗಿ ಎಂದು ಸೂಚಿಸಿದರೆ ಬಿಜೆಪಿ ಶಾಸಕ ಯತ್ನಾಳ್ ಅದನ್ನು ಒಪ್ಪಿಕೊಳ್ಳಬೇಕು. ಯತ್ನಾಳ್ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ. ಕೆಲವು ಬಾರಿ ಅವರು ಬಹಿರಂಗವಾಗಿ ಏನೇನೋ ಟೀಕಿಸುತ್ತಾರೆ. ಇದು ತಪ್ಪು. ಇದರ ಬಗ್ಗೆ ನಾವು ಹೇಳಿದ್ದೇವೆ. ಆದ್ರೆ ಮಂತ್ರಿ ಮಾಡಬೇಕು ಅಂತ ನಿರ್ಧಾರ ಕೈಗೊಂಡರೆ ಅವರು ಒಪ್ಪಿಕೊಳ್ಳಬೇಕು. ಅವರನ್ನ ಮಂತ್ರಿ ಮಾಡ್ತಾರಾ, ಇಲ್ಲವಾ? ಎಂಬುದು ನನಗೆ ಗೊತ್ತಿಲ್ಲ ಎಂದು ಮೈಸೂರಿನಲ್ಲಿ ಸಚಿವ ಈಶ್ವರಪ್ಪ ಹೇಳಿದ್ರು.

ಸಿಎಂ ಬದಲಾವಣೆಯ ಬಗ್ಗೆ ಸುಮ್ಮನೆ ಮಾತನಾಡುತ್ತಾರೆ: ಇನ್ನು ಇದೇ ವೇಳೆ ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಅಂತ ಸಿದ್ದು ಸುಮ್ಮನೆ ಮಾತನಾಡ್ತಾರೆ. ಇದು ಕೇವಲ ಸೃಷ್ಟಿ ಮಾಡಿರುವುದು ಅಷ್ಟೇ. ಕೇಂದ್ರ ನಾಯಕರು, ಶಾಸಕರು ಯಾರೂ ಇದನ್ನ ಹೇಳಿಲ್ಲ. ಇದನ್ನ ಹೇಳುತ್ತಿರುವುದು ಸಿದ್ದರಾಮಯ್ಯನವರು ಒಬ್ಬರೇ.

ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ನಂತರ ಅವರಿಗೆ ಅದರ ಮೇಲೆ ಕಣ್ಣು‌. ಹಾಗಾಗಿ ಸ್ಥಾನ ಕಳೆದುಕೊಳ್ಳುತ್ತಾರೆ ಅಂತ ಹೇಳಿ ಅಭ್ಯಾಸ ಆಗಿದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಹತ್ತು ಬಾರಿ ಹೇಳಿದರೆ ಜನ ನಂಬುತ್ತಾರೆ ಅಂತ ಸಿದ್ದರಾಮಯ್ಯ ಹೇಳ್ತಿದ್ದಾರೆ. ಆದರೆ ಇದು ಸುಳ್ಳು ಕೇವಲ ಮಾಧ್ಯಮಗಳಲ್ಲಿ ಮಾತ್ರ ಬರುತ್ತಿರುವ ಸುದ್ದಿ ಅಷ್ಟೇ ಎಂದು ಸಿದ್ದು ವಿರುದ್ಧ ಹರಿಹಾಯ್ದಿದ್ದಾರೆ.

ಸಚಿವ ಸ್ಥಾನ ಸಿಗದೇ ಇದ್ದರೂ ಪರವಾಗಿಲ್ಲ, ರಾಜ್ಯದ ಅಭಿವೃದ್ಧಿಯೇ ನನ್ನ ಕನಸು ಎಂದ ಯತ್ನಾಳ್

Published On - 11:06 am, Mon, 11 January 21

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM