ಆಸ್ಪತ್ರೆಗೆ ಕರೆದೊಯ್ಯುವಾಗ.. ಕೊರೊನಾಗೆ ಹೆದರಿ ಪೇದೆ ಆತ್ಮಹತ್ಯೆ, ಎಲ್ಲಿ?
ಬೆಂಗಳೂರು: ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಾನ್ಸ್‌ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೊರೊನಾಗೆ ಹೆದರಿ 50 ವರ್ಷದ KSRP ಹೆಡ್ ಕಾನ್ಸ್‌ಟೇಬಲ್ ನೇಣಿಗೆ ಶರಣಾಗಿದ್ದಾರೆ. ನಿನ್ನೆ ಕೊರೊನಾ ಪಾಸಿಟಿವ್ ದೃಢವಾದ ಹಿನ್ನೆಲೆಯಲ್ಲಿ ರಾತ್ರಿ ಹೆಡ್ ಕಾನ್ಸ್ಟೇಬಲ್ನನ್ನು ಬಸ್ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಮಾರ್ಗಮಧ್ಯೆ ಬಸ್ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 4 ನೇ ಬೆಟಾಲಿಯನ್ KSRP ಸಿಬ್ಬಂದಿ, ಸೋಂಕಿತ ಸಿಬ್ಬಂದಿ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಕ್ವಾರಂಟೈನ್ ಮಾಡಲಾಗಿತ್ತು. ಆತ್ಮಹತ್ಯೆ […]
ಬೆಂಗಳೂರು: ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಾನ್ಸ್‌ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೊರೊನಾಗೆ ಹೆದರಿ 50 ವರ್ಷದ KSRP ಹೆಡ್ ಕಾನ್ಸ್‌ಟೇಬಲ್ ನೇಣಿಗೆ ಶರಣಾಗಿದ್ದಾರೆ.
ನಿನ್ನೆ ಕೊರೊನಾ ಪಾಸಿಟಿವ್ ದೃಢವಾದ ಹಿನ್ನೆಲೆಯಲ್ಲಿ ರಾತ್ರಿ ಹೆಡ್ ಕಾನ್ಸ್ಟೇಬಲ್ನನ್ನು ಬಸ್ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಮಾರ್ಗಮಧ್ಯೆ ಬಸ್ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
4 ನೇ ಬೆಟಾಲಿಯನ್ KSRP ಸಿಬ್ಬಂದಿ, ಸೋಂಕಿತ ಸಿಬ್ಬಂದಿ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಕ್ವಾರಂಟೈನ್ ಮಾಡಲಾಗಿತ್ತು. ಆತ್ಮಹತ್ಯೆ ಮಾಡಿಕೊಂಡ ಹೆಡ್ ಕಾನ್ಸ್ಟೇಬಲ್ಗೆ ಜೂನ್ 20 ರಂದು ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. ನಿನ್ನೆ ರಿಪೋರ್ಟ್ ಪಾಸಿಟಿವ್ ಬಂದ ಬಳಿಕ ಸಿವಿ ರಾಮನ್ ಆಸ್ಪತ್ರೆಗೆ ಶಿಫ್ಟ್ ಮಾಡುವ ವೇಳೆ ಘಟನೆ ನಡೆದಿದೆ.
Published On - 8:19 am, Tue, 23 June 20