ನೆಲಮಂಗಲ: ನೆಲಮಂಗಲ ತಾಲೂಕಿನ ರಾಯರಪಾಳ್ಯದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕೆಎಸ್ಆರ್ಟಿಸಿ ಬಸ್, ಕ್ಯಾಂಟರ್, ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಅವರಿಗೆ ಸೇರಿದ ಕಾರು ಜಖಂ ಆಗಿದೆ.
KSRTC ಬಸ್ನ ಅತಿವೇಗದಿಂದಲೇ ಸರಣಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Published On - 11:22 am, Sat, 11 January 20