AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಶಾಸಕರನ್ನು ಬಿಜೆಪಿಗೆ ಕಳಿಸಿದ್ದು ಯಾರು?: ಹೆಚ್ ಡಿ ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಹೆಚ್ ಡಿ ಕುಮಾರಸ್ವಾಮಿ ನಡುವೆ ಕೋಳಿ ಜಗಳ ಮುಂದುವರಿದಿದೆ. ಇಂದು ತುಮಕೂರಿನಲ್ಲಿ ಸಿದ್ದಾರಮಯ್ಯನವರು ಕುಮಾರಸ್ವಾಮಿಯನ್ನು ಪೆದ್ದ ಅಂತ ಹೀಯಾಳಿಸಿದ ನಂತರ ರೊಚ್ಚಿಗೆದ್ದಿರುವ ಜೆಡಿಎಸ್ ನಾಯಕ ಸರಣಿ ಟ್ವೀಟ್​ಗಳ ಮೂಲಕ ತಿರುಗೇಟು ನೀಡಿದ್ದಾರೆ. ‘‘ಅಧಿಕಾರದಲ್ಲಿದ್ದಾಗಲೇ ಮತ್ತೆ ಅಧಿಕಾರ ನೀಡದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನತೆ ಅರ್ಧಚಂದ್ರ ಪ್ರಯೋಗ ಮಾಡಿದರು. ಈಗ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಕೇವಲ ಭ್ರಮೆ,’’ ಎಂದು ಕುಮಾರಸ್ವಾಮಿ ಮೊದಲ ಟ್ವೀಟ್​ನಲ್ಲಿ […]

ಕಾಂಗ್ರೆಸ್ ಶಾಸಕರನ್ನು ಬಿಜೆಪಿಗೆ ಕಳಿಸಿದ್ದು ಯಾರು?: ಹೆಚ್ ಡಿ ಕುಮಾರಸ್ವಾಮಿ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Oct 07, 2020 | 10:10 PM

Share

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಹೆಚ್ ಡಿ ಕುಮಾರಸ್ವಾಮಿ ನಡುವೆ ಕೋಳಿ ಜಗಳ ಮುಂದುವರಿದಿದೆ. ಇಂದು ತುಮಕೂರಿನಲ್ಲಿ ಸಿದ್ದಾರಮಯ್ಯನವರು ಕುಮಾರಸ್ವಾಮಿಯನ್ನು ಪೆದ್ದ ಅಂತ ಹೀಯಾಳಿಸಿದ ನಂತರ ರೊಚ್ಚಿಗೆದ್ದಿರುವ ಜೆಡಿಎಸ್ ನಾಯಕ ಸರಣಿ ಟ್ವೀಟ್​ಗಳ ಮೂಲಕ ತಿರುಗೇಟು ನೀಡಿದ್ದಾರೆ.

‘‘ಅಧಿಕಾರದಲ್ಲಿದ್ದಾಗಲೇ ಮತ್ತೆ ಅಧಿಕಾರ ನೀಡದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನತೆ ಅರ್ಧಚಂದ್ರ ಪ್ರಯೋಗ ಮಾಡಿದರು. ಈಗ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಕೇವಲ ಭ್ರಮೆ,’’ ಎಂದು ಕುಮಾರಸ್ವಾಮಿ ಮೊದಲ ಟ್ವೀಟ್​ನಲ್ಲಿ ಹೇಳಿದ್ದಾರೆ.

ಸಿದ್ದರಾಮಯ್ಯ ಕೇವಲ ಅಗ್ಗದ ಯೋಜನೆಗಳ ಮೂಲಕ ಜನಪ್ರಿಯರಾಗಿದ್ದರು ಆದರೆ, ಜನರನ್ನು ಹಾಗೆ ಮರಳು ಮಾಡುವುದು ಸಾಧ್ಯವಿಲ್ಲ, ಕಳೆದ ಚುನಾವಣೆಯಲ್ಲಿ ಜನ ಅವರಿಗೆ ತಕ್ಕ ಪಾಠ ಕಲಿಸಿದರು ಎಂದು ಕುಮಾರಸ್ವಾಮಿ ಎರಡನೇ ಟ್ವೀಟ್​ನಲ್ಲಿ ಹೇಳಿದ್ದಾರೆ.

‘‘ಜನ ಕಲ್ಯಾಣಕ್ಕೆ ದೂರದೃಷ್ಟಿಯ ಕಾರ್ಯಸಾಧ್ಯವಾದ ಯೋಜನೆಗಳನ್ನು ರೂಪಿಸುವಲ್ಲಿ ಎಡವಿದ್ದ ಸಿದ್ದರಾಮಯ್ಯ ಅಗ್ಗದ ಯೋಜನೆಗಳ ಮೂಲಕ ಜನರ ತುಟಿಗೆ ತುಪ್ಪ ಸವರುವ ಆಡಳಿತಕ್ಕೆ ಕಳೆದ ಬಾರಿ ತಕ್ಕ ಶಾಸ್ತಿ ಮಾಡಿದ್ದರು. ಇವರ ದುರಾಡಳಿತವನ್ನು ಜನತೆ ಇನ್ನೂ ಮರೆತಿಲ್ಲ. ಉಪಚುನಾವಣೆಯಲ್ಲೂ ಕಾಂಗ್ರೆಸ್​ಗೆ ಪಾಠ ಕಲಿಸಲಿದ್ದಾರೆ@hd_kumaraswamy’’

ಜೆಡಿಎಸ್ ಶಾಸಕರು ಪಕ್ಷ ಬಿಟ್ಟು ಹೋಗಲು ಕಾಂಗ್ರೆಸ್ ಕೂಡ ಕಾರಣ ಎಂದು ಕುಮಾರಸ್ವಾಮಿ ಆಪಾದಿಸಿದ್ದಾರೆ.

‘‘ಯಾರನ್ನು ಯಾರು ಎಲ್ಲಿಗೆ ಕಳುಹಿಸಿದರು? ಸ್ವಾರ್ಥ ರಾಜಕಾರಣಕ್ಕಾಗಿ ಮೂಲ ಕಾಂಗ್ರೆಸ್ಸಿಗರ ಮೇಲೆ ಯಾರು ಸವಾರಿ ಮಾಡುತ್ತಿದ್ದಾರೆ? ಎಂಬುದನ್ನು ತಿಳಿಯದಷ್ಟು ಜನ ಪೆದ್ದರಲ್ಲ. ನಮ್ಮ ಮೂವರು ಶಾಸಕರು ಪಕ್ಷದಿಂದ ಹೊರಹೋಗಲು ನಡೆದ ಸಂಚಿನಲ್ಲಿ ಹಣ ಅಧಿಕಾರದ ಆಮಿಷ ಮಾತ್ರವಲ್ಲ. ಕೆಲವರ ಕೈವಾಡ ಕೂಡ ಕಾರಣ, @hd_kumaraswamy’’

ರಾಮ ಭಕ್ತ ಹನುಮನಂತಿದ್ದ ತಮ್ಮಅನುಯಾಯಿಗಳನ್ನು ಖುದ್ದು ಸಿದ್ದರಾಮಯ್ಯನವರೇ ಬಿಜೆಪಿಗೆ ರವಾನಿಸಿದರು ಅಂತಲೂ ಕುಮಾರಸ್ವಾಮಿ ತಮ್ಮ ಟ್ವೀಟ್​ನಲ್ಲಿ ಹೇಳಿದ್ದಾರೆ.

‘‘ಕಾಂಗ್ರೆಸ್ ಪಕ್ಷದ ಹತ್ತಾರು ಮಂದಿ ಪೈಕಿ ಎದೆ ಸೀಳಿದರೆ ಸಿದ್ದು ಕಾಣುತ್ತಾರೆಎಂಬ ಅನುಯಾಯಿಗಳು ಬಿಜೆಪಿಗೆ ಹಾರಲು ಮಸಲತ್ತು ನಡೆಸಿದವರು ಯಾರೆಂಬುದು ಸಿದ್ಧವನದಲ್ಲಿ ಕುಳಿತಿದ್ದ ರಾಮನಿಗೂ ಗೊತ್ತಿತ್ತು@hd_kumaraswamy’’

ಸಮ್ಮಿಶ್ರ ಸರ್ಕಾರ ಉರುಳಲು ಸಿದ್ದರಾಮಯ್ಯನರೇ ಕಾರಣ ಎಂದು ಆರೋಪಿಸಿರುವ ಜೆಡಿಎಸ್ ನಾಯಕ, ತಾವು ಮುಖ್ಯಮಂತ್ರಿಯಾಗಿದ್ದಾಗ ಅನುಭವಿಸಿದ ಅಸಹಾಯಕತೆಯನ್ನು ತಮ್ಮ ಕೊನೆಯ ಟ್ವೀಟ್ ಮೂಲಕ ಹೊರಹಾಕಿದ್ದಾರೆ.

‘‘ಮೈತ್ರಿ ಸರ್ಕಾರ ತೆಗೆಯಲು ಅಳಲೇಕಾಯಿ ಪಂಡಿತನಂತೆ ಔಷಧ ಅರೆದ ವ್ಯಕ್ತಿಗೆ ನಮ್ಮ ಮೂವರು ಶಾಸಕರು ಕದ್ದು ಓಡಿ ಹೋದರೋ? ನಾವೇ ಕತ್ತು ಹಿಡಿದು ನೂಕಿದವೋ? ಎಂದು ಗೊತ್ತಿಲ್ಲದ ಜಾಣ ಪೆದ್ದನಾಗಿದ್ದು ವಿಪರ್ಯಾಸ@hd_kumaraswamy”

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ