ಎಲ್ರ ಬದುಕಲ್ಲಿ ಇಣುಕು ನೋಡ್ತಿದೀರಿ, ಒಳ್ಳೆದಲ್ಲ: ಸಂಬರಗಿಗೆ ಹೀಗೆ ತಪರಾಕಿ ಕೊಟ್ಟಿದ್ದು ಯಾರು?
ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ. ರವಿ ಸಾವಿಗೆ ಕಾರಣವಾದ ಕಾಂಗ್ರೆಸ್ ಪಕ್ಷಕ್ಕೇ, ಅವರ ಹೆಂಡತಿ ಕುಸುಮಾ ಸೇರ್ಪಡೆ ಆಗಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಟ್ವೀಟ್ ಮಾಡಿದ್ದರು. ಜೊತೆಗೆ, ಕುಸುಮಾ ಕಾಂಗ್ರೆಸ್ಗೆ ಸೇರ್ಪಡೆಯಾದ ವೇಳೆ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಶೀರ್ವದಿಸುತ್ತಿರುವ ಫೋಟೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿ ಕುಸುಮಾ ಅವರ ದುರದೃಷ್ಟ ಇದೀಗ ಡಿ.ಕೆ ರವಿಯಿಂದ ಡಿ.ಕೆ ಶಿವಕುಮಾರ್ಗೆ ವರ್ಗಾವಣೆಗೊಳ್ಳುತ್ತಿದೆ ಎಂದು ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ಕುಸುಮಾ ತಮ್ಮ ಫೇಸ್ಬುಕ್ […]

ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ. ರವಿ ಸಾವಿಗೆ ಕಾರಣವಾದ ಕಾಂಗ್ರೆಸ್ ಪಕ್ಷಕ್ಕೇ, ಅವರ ಹೆಂಡತಿ ಕುಸುಮಾ ಸೇರ್ಪಡೆ ಆಗಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಟ್ವೀಟ್ ಮಾಡಿದ್ದರು. ಜೊತೆಗೆ, ಕುಸುಮಾ ಕಾಂಗ್ರೆಸ್ಗೆ ಸೇರ್ಪಡೆಯಾದ ವೇಳೆ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಶೀರ್ವದಿಸುತ್ತಿರುವ ಫೋಟೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿ ಕುಸುಮಾ ಅವರ ದುರದೃಷ್ಟ ಇದೀಗ ಡಿ.ಕೆ ರವಿಯಿಂದ ಡಿ.ಕೆ ಶಿವಕುಮಾರ್ಗೆ ವರ್ಗಾವಣೆಗೊಳ್ಳುತ್ತಿದೆ ಎಂದು ಹೇಳಿದ್ದರು.
ಇದಕ್ಕೆ ತಿರುಗೇಟು ನೀಡಿರುವ ಕುಸುಮಾ ತಮ್ಮ ಫೇಸ್ಬುಕ್ ಖಾತೆಯಲ್ಲಿ ಯಾರನ್ನೋ ಮೆಚ್ಚಿಸುವ ಭರದಲ್ಲಿ ನನ್ನ ಅದೃಷ್ಟ(Luck) ವಿಷಯವನ್ನು ಪ್ರಸ್ತಾಪಿಸಿದ್ದೀರಿ. ಎಲ್ಲರ ಬದುಕಿನಲ್ಲಿ ಇಣುಕುವ ನೀವು ಹಿಂದೆ-ಮುಂದೆ ತಿಳಿಯದೇ ಇನ್ನೊಬ್ಬರ ಚಾರಿತ್ರ್ಯವಧೆಗೆ ಇಳಿಯುವುದು ನಿಮ್ಮ ಘನತೆಗೆ ಶೋಭೆ ತರುವಂತದಲ್ಲ ಎಂಬುದು ನನ್ನ ಅನಿಸಿಕೆ ಅಂತಾ ಸಂಬರಗಿಗೆ ತಿರುಗೇಟು ನೀಡಿದ್ದಾರೆ.

Published On - 11:20 am, Tue, 6 October 20