ಎಲ್ರ ಬದುಕಲ್ಲಿ ಇಣುಕು ನೋಡ್ತಿದೀರಿ, ಒಳ್ಳೆದಲ್ಲ: ಸಂಬರಗಿಗೆ ಹೀಗೆ ತಪರಾಕಿ ಕೊಟ್ಟಿದ್ದು ಯಾರು? 

| Updated By: KUSHAL V

Updated on: Oct 06, 2020 | 12:18 PM

ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ. ರವಿ ಸಾವಿಗೆ ಕಾರಣವಾದ ಕಾಂಗ್ರೆಸ್​ ಪಕ್ಷಕ್ಕೇ, ಅವರ ಹೆಂಡತಿ ಕುಸುಮಾ ಸೇರ್ಪಡೆ ಆಗಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಪ್ರಶಾಂತ್​ ಸಂಬರಗಿ ಟ್ವೀಟ್​ ಮಾಡಿದ್ದರು. ಜೊತೆಗೆ, ಕುಸುಮಾ ಕಾಂಗ್ರೆಸ್​ಗೆ ಸೇರ್ಪಡೆಯಾದ ವೇಳೆ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಆಶೀರ್ವದಿಸುತ್ತಿರುವ ಫೋಟೋವನ್ನು ತಮ್ಮ ಟ್ವಿಟರ್​ ಖಾತೆಯಲ್ಲಿ ಪೋಸ್ಟ್​ ಮಾಡಿ ಕುಸುಮಾ ಅವರ ದುರದೃಷ್ಟ ಇದೀಗ ಡಿ.ಕೆ ರವಿಯಿಂದ ಡಿ.ಕೆ ಶಿವಕುಮಾರ್​ಗೆ ವರ್ಗಾವಣೆಗೊಳ್ಳುತ್ತಿದೆ ಎಂದು ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ಕುಸುಮಾ ತಮ್ಮ ಫೇಸ್​ಬುಕ್​ […]

ಎಲ್ರ ಬದುಕಲ್ಲಿ ಇಣುಕು ನೋಡ್ತಿದೀರಿ, ಒಳ್ಳೆದಲ್ಲ: ಸಂಬರಗಿಗೆ ಹೀಗೆ ತಪರಾಕಿ ಕೊಟ್ಟಿದ್ದು ಯಾರು? 
Follow us on

ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ. ರವಿ ಸಾವಿಗೆ ಕಾರಣವಾದ ಕಾಂಗ್ರೆಸ್​ ಪಕ್ಷಕ್ಕೇ, ಅವರ ಹೆಂಡತಿ ಕುಸುಮಾ ಸೇರ್ಪಡೆ ಆಗಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಪ್ರಶಾಂತ್​ ಸಂಬರಗಿ ಟ್ವೀಟ್​ ಮಾಡಿದ್ದರು. ಜೊತೆಗೆ, ಕುಸುಮಾ ಕಾಂಗ್ರೆಸ್​ಗೆ ಸೇರ್ಪಡೆಯಾದ ವೇಳೆ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಆಶೀರ್ವದಿಸುತ್ತಿರುವ ಫೋಟೋವನ್ನು ತಮ್ಮ ಟ್ವಿಟರ್​ ಖಾತೆಯಲ್ಲಿ ಪೋಸ್ಟ್​ ಮಾಡಿ ಕುಸುಮಾ ಅವರ ದುರದೃಷ್ಟ ಇದೀಗ ಡಿ.ಕೆ ರವಿಯಿಂದ ಡಿ.ಕೆ ಶಿವಕುಮಾರ್​ಗೆ ವರ್ಗಾವಣೆಗೊಳ್ಳುತ್ತಿದೆ ಎಂದು ಹೇಳಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಕುಸುಮಾ ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಯಾರನ್ನೋ ಮೆಚ್ಚಿಸುವ ಭರದಲ್ಲಿ ನನ್ನ ಅದೃಷ್ಟ(Luck) ವಿಷಯವನ್ನು ಪ್ರಸ್ತಾಪಿಸಿದ್ದೀರಿ. ಎಲ್ಲರ ಬದುಕಿನಲ್ಲಿ ಇಣುಕುವ ನೀವು ಹಿಂದೆ-ಮುಂದೆ ತಿಳಿಯದೇ ಇನ್ನೊಬ್ಬರ ಚಾರಿತ್ರ್ಯವಧೆಗೆ ಇಳಿಯುವುದು ನಿಮ್ಮ ಘನತೆಗೆ ಶೋಭೆ ತರುವಂತದಲ್ಲ ಎಂಬುದು ನನ್ನ ಅನಿಸಿಕೆ ಅಂತಾ ಸಂಬರಗಿಗೆ ತಿರುಗೇಟು ನೀಡಿದ್ದಾರೆ.

ಸಹೋದರ ಪ್ರಶಾಂತ್ ಸಂಬರಗಿಯವರಿಗೆ,
ವೈಯುಕ್ತಿಕವಾಗಿ ನಿಮ್ಮ ಪರಿಚಯ ನನಗಿಲ್ಲ, ಕೆಲ ತಿಂಗಳುಗಳಿಂದ ನೀವು ಡ್ರಗ್ಸ್ ಹಾಗೂ ಇನ್ನಿತರ ಸಾಮಾಜಿಕ ಪಿಡುಗುಗಳ ವಿರುದ್ದ ನಡೆಸುತ್ತಿರುವ ಹೋರಾಟ ಪ್ರಶಂಸನೀಯ. ಯುವಸಮೂಹಕ್ಕೆ ಡ್ರಗ್ಸ್ ವಿರುದ್ದವಾಗಿ ಜಾಗ್ರತೆ ಮೂಡಿಸುತ್ತಿರುವ ನಿಮಗೆ ಅಭಿನಂದನೆಗಳು.
ಯಾರನ್ನೋ ಮೆಚ್ಚಿಸುವ ಭರದಲ್ಲಿ ನನ್ನ ಅದೃಷ್ಟ(Luck) ವಿಷಯವನ್ನು ಪ್ರಸ್ತಾಪಿಸಿದ್ದೀರಿ. ಎಲ್ಲರ ಬದುಕಿನಲ್ಲಿ ಇಣುಕುವ ನೀವು ಹಿಂದೆ-ಮುಂದೆ ತಿಳಿಯದೇ ಇನ್ನೊಬ್ಬರ ಚಾರಿತ್ರ್ಯವಧೆಗೆ ಇಳಿಯುವುದು ನಿಮ್ಮ ಘನತೆಗೆ ಶೋಭೆ ತರುವಂತದಲ್ಲ ಎಂಬುದು ನನ್ನ ಅನಿಸಿಕೆ.
ಪ್ರತಿಯೊಬ್ಬರ ಬದುಕಿನಲ್ಲೂ ಏಳು-ಬೀಳುಗಳಿರುತ್ತವೆ, ಇದೇ ರೀತಿ ನಿಮ್ಮ ಮನೆಯಲ್ಲೇ ಅಕ್ಕ-ತಂಗಿ ನನ್ನ ಸ್ಥಾನದಲ್ಲಿದ್ದಿದ್ದರೆ ಹೀಗೆಯೇ ವಿಡಂಬನೆ ಮಾಡುತ್ತಿದ್ದಿರಾ?
ಹೆಣ್ಣು‌ ಎಂಬ ಮಾತ್ರಕ್ಕೆ ಇಂತಹ ವಿಡಂಬನೆ ಮತ್ತು ಅಪಪ್ರಚಾರಗಳಿಗೆ ಒಳಗಾಗಬೇಕೆ?
ಬೇರೆಯವರ ಮನೆಯ ಹೆಣ್ಣುಮಗಳ luck ಯಾವುದು ಎಂದು ಹುಡುಕುವ ಶಕ್ತಿ ಇರುವ ನಿಮಗೆ ಹತ್ರಾಸ್ ನ ಮನೀಷಾ ಅತ್ಯಾಚಾರ-ಕೊಲೆ ಪ್ರಕರಣ ಕಣ್ಣಿಗೆ ಕಾಣುತ್ತಿಲ್ಲವೇಕೆ?
ಸಹೋದರ ಪ್ರಶಾಂತ್ ಸಂಬರಗಿ ಅವರೇ, ಇದರಿಂದ ಹೆಣ್ಣುಮಕ್ಕಳ ಕುರಿತ ನಿಮ್ಮ ಬುದ್ದಿಮಟ್ಟ ತಿಳಿಯುತ್ತದೆ. ಈ ಆಲೋಚನೆಗಳನ್ನು ಮುಂದುವರಿಸಿ.
ದೇವರು ನಿಮಗೆ ಒಳ್ಳೆಯದು ಮಾಡಲಿ.

 

Published On - 11:20 am, Tue, 6 October 20