ಚಿಕ್ಕಬಳ್ಳಾಪುರ: ಕೊರೊನಾ ಸೋಂಕಿನಿಂದ ಗುಣಮುಖರಾದ ಸಹೋದ್ಯೋಗಿಯನ್ನ ಸ್ವಾಗತಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಹಿಳಾ ಪೇದೆಯೊಬ್ಬರು ಕೊರೊನಾ ಶಂಕಿತೆಯಾಗಿದ್ದಾರೆ ಎಂದು ಜಿಲ್ಲಾ ಎಸ್‌ಪಿ ಕಚೇರಿ ತಿಳಿಸಿದೆ.
ಸಂಭ್ರಮಾಚರಣೆಯಲ್ಲಿ ಭಾಗಿಯಾದ ಹಿರಿಯ ಅಧಿಕಾರಿಗಳಿಗೆ ಸೋಂಕಿನ ಭೀತಿ?
ಕಳೆದ 2 ದಿನಗಳ ಹಿಂದೆ ಇದೇ ಜಿಲ್ಲೆಯ ಎಸ್‌ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ಸ್‌ಟೇಬಲ್ ಒಬ್ಬರು ಸೋಂಕಿನಿಂದ ಗುಣಮುಖರಾಗಿದ್ದರು. ಕಚೇರಿಗೆ ಹಾಜರಾಗುವ ಸಂದರ್ಭದಲ್ಲಿ ಅವರನ್ನು ಸ್ವಾಗತಿಸಲು ವಿಶೇಷ ಕಾರ್ಯಕ್ರಮ ಸಹ ಆಯೋಜಿಸಲಾಗಿತ್ತು. ಸಂಭ್ರಮಾಚರಣೆಯಲ್ಲಿ ಪೇದೆಯನ್ನು ಬರಮಾಡಿಕೊಳ್ಳಲು ಕೇಂದ್ರ ವಲಯದ IGP ಶರತ್ ಚಂದ್ರ, SP ಮಿಥುನ್ ಕುಮಾರ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳೂ ಸಹ ಉಪಸ್ಥಿತರಿದ್ದರು.
ಆದರೆ ಇದೀಗ ಕಾರ್ಯಕ್ರಮದಲ್ಲಿ ಸ್ವಾಗತ ಕೊರಲು ನಿಂತಿದ್ದ ಮಹಿಳಾ ಸಿಬ್ಬಂದಿಗೆ ಕೊರೊನಾ ಸೋಂಕು ತಗಲಿದೆ ಎಂಬ ಶಂಕೆ ವ್ಯಕ್ತವಾಗಿದೆ. ಇದರಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಹಲವು ಸಿಬ್ಬಂದಿಗೆ ಕೊರೊನಾ ಸೋಂಕಿನ ಭೀತಿ ಶುರುವಾಗಿದೆ.
Published On - 3:07 pm, Wed, 17 June 20