ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಿಂದಾಗಿ, ರೈಲ್ವೆ ನಿಲ್ದಾಣದ ಬಳಿ ಭೂಕುಸಿತ ಉಂಟಾಗಿದೆ. ಇದರಿಂದಾಗಿ ಜರುಗಬೇಕಾಗಿದ್ದ ಬಾರಿ ಅವಘಡವೊಂದು ಕೂದಲೆಳೆ ಅಂತರದಲ್ಲಿ ತಪ್ಪಿ ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಶಿವಥಾಣ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದ್ದು, ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವುದರಿಂದ ಪಾಂಡ್ರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಇದರಿಂದಾಗಿ ಪಾಂಡ್ರಿ ನದಿ ಪಾತ್ರದಲ್ಲಿಯೇ ಇರುವ ರೈಲ್ವೆ ನಿಲ್ದಾಣದಲ್ಲಿ, ನದಿ ನೀರಿನ ಸೆಳೆತಕ್ಕೆ ರೈಲ್ವೆ ಹಳಿ ಪಕ್ಕದಲ್ಲಿರುವ ಭೂಮಿ ಕುಸಿದಿದೆ. ಇದರಿಂದಾಗಿ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ, ರೈಲು ಪಾಸಾದ ಕೆಲವೇ ಗಂಟೆಗಳಲ್ಲಿ ಭೂಮಿ ಕುಸಿದಿರುವುದರಿಂದ, ಜರುಗಬಹುದಾಗಿದ್ದ ಭಾರಿ ಅವಘಡವೊಂದು ತಪ್ಪಿದಂತಾಗಿದೆ.
Published On - 12:43 pm, Mon, 17 August 20