ಮಂಗಳೂರಿನಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ, ಗಾಳಿಯಲ್ಲಿ ಗುಂಡು ಹಾರಿಸಿದ ಪೊಲೀಸರು

|

Updated on: Dec 19, 2019 | 5:13 PM

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಪ್ರತಿಭಟನೆಯ ಕಿಚ್ಚು ಜೋರಾಗಿದೆ. ನಿಷೇಧಾಜ್ಞೆ ನಡುವೆಯೂ ಜಿಲ್ಲಾಧಿಕಾರಿ ಕಚೇರಿ ಎದುರು ಸಿಎಎ ವಿರೋಧಿಸಿ ಪ್ರತಿಭಟನೆಗೆ ಮುಂದಾಗಿದ್ರು. ಹೀಗಾಗಿ ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಳಿ ಜಮಾವಣೆಗೊಂಡಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಮಂಗಳೂರಿನ ಬಂದರು ಪೊಲೀಸ್ ಠಾಣೆ ಬಳಿ ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಅಶ್ರುವಾಯು ಪ್ರಯೋಗ: ಪೊಲೀಸರ ಲಾಠಿಚಾರ್ಜ್‌ ಬೆನ್ನಲ್ಲೇ ರಾವ್‌ ಆ್ಯಂಡ್‌ ರಾವ್‌ ಸರ್ಕಲ್‌ನಲ್ಲಿ ಪೊಲೀಸರ ಮೇಲೆಯೇ […]

ಮಂಗಳೂರಿನಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ, ಗಾಳಿಯಲ್ಲಿ ಗುಂಡು ಹಾರಿಸಿದ ಪೊಲೀಸರು
Follow us on

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಪ್ರತಿಭಟನೆಯ ಕಿಚ್ಚು ಜೋರಾಗಿದೆ. ನಿಷೇಧಾಜ್ಞೆ ನಡುವೆಯೂ ಜಿಲ್ಲಾಧಿಕಾರಿ ಕಚೇರಿ ಎದುರು ಸಿಎಎ ವಿರೋಧಿಸಿ ಪ್ರತಿಭಟನೆಗೆ ಮುಂದಾಗಿದ್ರು. ಹೀಗಾಗಿ ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಳಿ ಜಮಾವಣೆಗೊಂಡಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಮಂಗಳೂರಿನ ಬಂದರು ಪೊಲೀಸ್ ಠಾಣೆ ಬಳಿ ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಅಶ್ರುವಾಯು ಪ್ರಯೋಗ:
ಪೊಲೀಸರ ಲಾಠಿಚಾರ್ಜ್‌ ಬೆನ್ನಲ್ಲೇ ರಾವ್‌ ಆ್ಯಂಡ್‌ ರಾವ್‌ ಸರ್ಕಲ್‌ನಲ್ಲಿ ಪೊಲೀಸರ ಮೇಲೆಯೇ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದ್ದಾರೆ. ಇನ್ನು ಮಂಗಳೂರು ನಗರದಾದ್ಯಂತ ಸಂಚಾರ ಅಸ್ತವ್ಯಸ್ತವಾಗಿದ್ದು, ಜ್ಯೋತಿ ಸರ್ಕಲ್, ಸ್ಟೇಟ್ ಬ್ಯಾಂಕ್, ಕಂಕನಾಡಿ ಸೇರಿದಂತೆ ನಗರದೆಲ್ಲೆಡೆ ಟ್ರಾಫಿಕ್​ ಜಾಮ್ ಉಂಟಾಗಿದೆ.

ಮಂಗಳೂರು ನಗರದ ರಾವ್‌ ಆ್ಯಂಡ್‌ ರಾವ್‌ ಸರ್ಕಲ್‌ನಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟುಗಳ ಬಾಗಿಲು ಪೊಲೀಸರು ಮುಚ್ಚಿಸುತ್ತಿದ್ದಾರೆ. ಹೀಗಾಗಿ ಆತಂಕದಲ್ಲಿ ತೆರಳಿದ ಅಂಗಡಿ ಮಾಲೀಕರು ಮತ್ತು ಸಾರ್ವಜನಿಕರೂ ಮನೆಯತ್ತ ಹೆಜ್ಜೆ ಹಾಕಿದ್ದಾರೆ.

Published On - 3:59 pm, Thu, 19 December 19