ಬೆಂಗಳೂರು: ಬೇಗೂರಿನಲ್ಲಿ ಅಪಾರ್ಟ್ಮೆಂಟ್ವೊಂದರಲ್ಲಿ ಕಾಣಿಸಿಕೊಂಡ ಚಿರತೆಯನ್ನು ಹಿಡಿಯಲು ಒಂದು ಕಡೆ ಅರಣ್ಯ ಇಲಾಖೆ ಕಾರ್ಯಚರಣೆ ನಡೆಸುತ್ತಿದ್ದರೆ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ಅಲ್ಲಿನ ಜನರು ಬೆಚ್ಚಿ ಬಿದ್ದಿದ್ದಾರೆ.
ರಾತ್ರಿ ಹೊತ್ತು ಚಿರತೆ ಕಾಣಿಸಿಕೊಳ್ಳುತ್ತಿದ್ದು, ರಾತ್ರಿ ಹೊತ್ತು ಓಡಾಡದಂತೆ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸೂಚನೆಯನ್ನು ನೀಡಲಾಗಿದೆ. ಈ ಮಧ್ಯೆ ಚಿರತೆ ನಾಲ್ಕು ಜನರ ಮೇಲೆ ದಾಳಿ ಮಾಡಿದೆ ಎಂಬ ಕೆಲ ಫೋಟೋಗಳೊಂದಿಗೆ ಸುಳ್ಳು ಸುದ್ದಿ ಹಬ್ಬಿದ್ದು, ಇದರಿಂದ ಸ್ಥಳೀಯರು ಆತಂಕೊಳಗಾಗಿದ್ದಾರೆ.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಮರಿ ಚಿರತೆ