ಖಾನಾಪುರದಲ್ಲಿ ಸಿಡಿಲು ಬಡಿದು ಇಬ್ಬರು ಸ್ಥಳದಲ್ಲೇ ಸಾವು

ರಾಯಚೂರು: ಸಿಡಿಲು ಬಡಿದು ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಖಾನಾಪುರದಲ್ಲಿ ನಡೆದಿದೆ. ಭಾರಿ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಮರದಡಿ ಆಶ್ರಯ ಪಡೆದಿದ್ದಾಗ ಸಿಡಿಲು ಬಡಿದು ಈ ಅವಘಡ ಸಂಭವಿಸಿದೆ. ಸಿಡಿಲು ಬಡಿದ ಪರಿಣಾಮ ಮರದ ಕೆಳಗೆ ನಿಂತಿದ್ದ 40 ವರ್ಷದ ನಾಗಪ್ಪ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಖಾನಾಪುರದಲ್ಲಿ ಸಿಡಿಲು ಬಡಿದು ಇಬ್ಬರು ಸ್ಥಳದಲ್ಲೇ ಸಾವು
Edited By:

Updated on: Sep 07, 2020 | 6:59 PM

ರಾಯಚೂರು: ಸಿಡಿಲು ಬಡಿದು ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಖಾನಾಪುರದಲ್ಲಿ ನಡೆದಿದೆ. ಭಾರಿ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಮರದಡಿ ಆಶ್ರಯ ಪಡೆದಿದ್ದಾಗ ಸಿಡಿಲು ಬಡಿದು ಈ ಅವಘಡ ಸಂಭವಿಸಿದೆ.

ಸಿಡಿಲು ಬಡಿದ ಪರಿಣಾಮ ಮರದ ಕೆಳಗೆ ನಿಂತಿದ್ದ 40 ವರ್ಷದ ನಾಗಪ್ಪ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.