ಮದ್ಯಪ್ರಿಯರಿಗೆ ಕಹಿ ಸುದ್ದಿ: ಸಿಲಿಕಾನ್​ ಸಿಟಿಯಲ್ಲಿ ಇಂದಿನಿಂದ ಎರಡು ದಿನ ಎಣ್ಣೆ ಸಿಗಲ್ಲ, ಯಾಕೆ?

ಬೆಂಗಳೂರು: ಅಕ್ಟೋಬರ್​ 28ರಂದು ನಡೆಯಲಿರುವ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಇಂದಿನಿಂದ 2 ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಈ ಕುರಿತು ನಗರ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ಆದೇಶ ಹೊರಡಿಸಿದ್ದಾರೆ. ಇಂದು ಸಂಜೆ 6ರಿಂದ ಅ.28ರ ಸಂಜೆ 6ರವರೆಗೆ ಮದ್ಯ ಮಾರಾಟ ನಿಷೇಧವಾಗಿದೆ. ಹಾಗಾಗಿ, ಬೆಂಗಳೂರು ನಗರ ಹಾಗೂ ಗ್ರಾಮಾಂತರದ ಬಾರ್ ಅಂಡ್ ರೆಸ್ಟೋರೆಂಟ್, ವೈನ್ ಶಾಪ್, MSIL ಮಳಿಗೆಗಳಲ್ಲಿ 48 ಗಂಟೆಗಳ ಕಾಲ ಮದ್ಯ ದೊರೆಯುವುದಿಲ್ಲ.

ಮದ್ಯಪ್ರಿಯರಿಗೆ ಕಹಿ ಸುದ್ದಿ: ಸಿಲಿಕಾನ್​ ಸಿಟಿಯಲ್ಲಿ ಇಂದಿನಿಂದ ಎರಡು ದಿನ ಎಣ್ಣೆ ಸಿಗಲ್ಲ, ಯಾಕೆ?
ಪ್ರಾತಿನಿಧಿಕ ಚಿತ್ರ

Updated on: Oct 26, 2020 | 5:26 PM

ಬೆಂಗಳೂರು: ಅಕ್ಟೋಬರ್​ 28ರಂದು ನಡೆಯಲಿರುವ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಇಂದಿನಿಂದ 2 ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಈ ಕುರಿತು ನಗರ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ಆದೇಶ ಹೊರಡಿಸಿದ್ದಾರೆ.

ಇಂದು ಸಂಜೆ 6ರಿಂದ ಅ.28ರ ಸಂಜೆ 6ರವರೆಗೆ ಮದ್ಯ ಮಾರಾಟ ನಿಷೇಧವಾಗಿದೆ. ಹಾಗಾಗಿ, ಬೆಂಗಳೂರು ನಗರ ಹಾಗೂ ಗ್ರಾಮಾಂತರದ ಬಾರ್ ಅಂಡ್ ರೆಸ್ಟೋರೆಂಟ್, ವೈನ್ ಶಾಪ್, MSIL ಮಳಿಗೆಗಳಲ್ಲಿ 48 ಗಂಟೆಗಳ ಕಾಲ ಮದ್ಯ ದೊರೆಯುವುದಿಲ್ಲ.