AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Bandh | ವಾಟಾಳ್ ನಾಗರಾಜ್ ಬಂಧನದ ಬಳಿಕವೂ ಮುಂದುವರಿದ ಪ್ರತಿಭಟನೆ

ವಾಟಾಳ್ ನಾಗರಾಜ್​ ಪೊಲೀಸರ ವಶವಾದ ಬಳಿಕವೂ ಕನ್ನಡಪರ ಹೋರಾಟಗಾರರ ಪ್ರತಿಭಟನೆ ಮುಂದುವರಿದಿದೆ. ಬೆಂಗಳೂರು ನಗರ ಮತ್ತು ರಾಜ್ಯದ ಹಲವೆಡೆಗಳಲ್ಲಿ ಪ್ರತಿಭಟನಾಕಾರರು ಧರಣಿ ನಡೆಸುತ್ತಿದ್ದಾರೆ.

Karnataka Bandh | ವಾಟಾಳ್ ನಾಗರಾಜ್ ಬಂಧನದ ಬಳಿಕವೂ ಮುಂದುವರಿದ ಪ್ರತಿಭಟನೆ
ಕನ್ನಡಪರ ಹೋರಟಗಾರ ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ
TV9 Web
| Edited By: |

Updated on:Apr 07, 2022 | 5:39 PM

Share

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್​ಗೆ ಕರೆ ನೀಡಿದ್ದವು. ಕರ್ನಾಟಕ ರಕ್ಷಣಾ ವೇದಿಕೆ ಮತ್ತಿತರ ಕನ್ನಡಪರ ಸಂಘಟನೆಗಳು ನಡೆಸಿದ ಬಂದ್ ಮಧ್ಯಾಹ್ನದ ವೇಳೆಗೆ ಒಂದು ಹಂತ ತಲುಪಿದೆ.

ಬೆಂಗಳೂರಿನ ಹಲವೆಡೆ ಕನ್ನಡ ಪರ ಹೋರಾಟಗಾರರು ಬಂದ್ ನಡೆಸಿದರೂ ಜನಜೀವನದಲ್ಲಿ ಅಷ್ಟೇನೂ ವ್ಯತ್ಯಾಸವಾಗಿಲ್ಲ. ಹಲವೆಡೆ ಅಂಗಡಿಮುಂಗಟ್ಟುಗಳು ತೆರೆದುಕೊಂಡಿದ್ದು, ಬಸ್, ವಾಹನ ಸಂಚಾರವೂ ಸಹಜ ಸ್ಥಿತಿಯಲ್ಲಿದೆ.

ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ ತಮ್ಮ ಸಹ ಹೋರಾಟಗಾರರ ಜೊತೆ ಟೌನ್​ಹಾಲ್​​ನತ್ತ ಹೊರಟ ವಾಟಾಳ್ ನಾಗರಾಜ್, ಕಾರ್ಪೊರೇಷನ್ ಮುಂಭಾಗದ ರಸ್ತೆಯಲ್ಲಿ ಸಾಗಿದರು. ಈ ಸಂದರ್ಭದಲ್ಲಿ ವಾಟಾಳ್ ನಾಗರಾಜ್ ಮತ್ತು ಪೊಲೀಸರ ಮಧ್ಯೆ ವಾಗ್ವಾದ ನಡೆಯಿತು. ಆಗ, ವಾಟಾಳ್ ಹಾಗೂ ಇತರ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಕಾರ್ಪೊರೇಷನ್ ಸರ್ಕಲ್ ಬಳಿ ಟ್ರಾಫಿಕ್ ಜಾಮ್ ಸಹ ಉಂಟಾಯಿತು.

ಮುಂದುವರಿದ ಪ್ರತಿಭಟನೆ ವಾಟಾಳ್ ನಾಗರಾಜ್​ ಪೊಲೀಸರ ವಶವಾದ ಬಳಿಕವೂ ಕನ್ನಡಪರ ಹೋರಾಟಗಾರರ ಪ್ರತಿಭಟನೆ ಮುಂದುವರಿದಿದೆ. ಬೆಂಗಳೂರು ನಗರ ಮತ್ತು ರಾಜ್ಯದ ಹಲವೆಡೆಗಳಲ್ಲಿ ಪ್ರತಿಭಟನಾಕಾರರು ಧರಣಿ ನಡೆಸುತ್ತಿದ್ದಾರೆ.

ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ಬಂದ್ ನಿಂದ ಆಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆ ಎಂದು ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ಹೈಕೋರ್ಟ್ ಎಚ್ಚರಿಕೆ ನೀಡಿತ್ತು.ಬಂದ್, ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಮಾಸ್ಕ್ ಧರಿಸದ ಮತ್ತು ಅಂತರ ಕಾ‍ಪಾಡದವರಿಗೆ ದಂಡ ವಿಧಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿತ್ತು.

Published On - 1:18 pm, Sat, 5 December 20

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?