ದುಷ್ಕರ್ಮಿಗಳಿಂದ ದನದ ಕೊಟ್ಟಿಗೆಗೆ ಬೆಂಕಿ: 3 ಹಸುಗಳು ಸಜೀವ ದಹನ

ಧಾರವಾಡ: ದನದ ಕೊಟ್ಟಿಗೆಗೆ ಬೆಂಕಿ ತಾಗಿ 3 ಹಸುಗಳ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಕಲಘಟಗಿ ತಾಲೂಕಿನ ಗುಡ್ಡದ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಅವಘಡದಲ್ಲಿ ಗ್ರಾಮದ ನೀಲಕಂಠಗೌಡ ಪಾಟೀಲ್‌ ಎಂಬುವವರಿಗೆ ಸೇರಿದ್ದ ದನದ ಕೊಟ್ಟಿಗೆ ಸಂಪೂರ್ಣ ಭಸ್ಮವಾಗಿದೆ. ಗ್ರಾಮದ ಹೊರವಲಯದಲ್ಲಿರುವ ಕೊಟ್ಟಿಗೆಗೆ ಯಾರೂ ಇಲ್ಲದ ವೇಳೆ ದುಷ್ಕರ್ಮಿಗಳು ಕೊಟ್ಟಿಗೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ರಾಸುಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸಹ ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದುಬಂದಿದೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ದುಷ್ಕರ್ಮಿಗಳಿಂದ ದನದ ಕೊಟ್ಟಿಗೆಗೆ ಬೆಂಕಿ: 3 ಹಸುಗಳು ಸಜೀವ ದಹನ
Updated By: ಸಾಧು ಶ್ರೀನಾಥ್​

Updated on: Oct 13, 2020 | 10:37 AM

ಧಾರವಾಡ: ದನದ ಕೊಟ್ಟಿಗೆಗೆ ಬೆಂಕಿ ತಾಗಿ 3 ಹಸುಗಳ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಕಲಘಟಗಿ ತಾಲೂಕಿನ ಗುಡ್ಡದ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಅವಘಡದಲ್ಲಿ ಗ್ರಾಮದ ನೀಲಕಂಠಗೌಡ ಪಾಟೀಲ್‌ ಎಂಬುವವರಿಗೆ ಸೇರಿದ್ದ ದನದ ಕೊಟ್ಟಿಗೆ ಸಂಪೂರ್ಣ ಭಸ್ಮವಾಗಿದೆ.

ಗ್ರಾಮದ ಹೊರವಲಯದಲ್ಲಿರುವ ಕೊಟ್ಟಿಗೆಗೆ ಯಾರೂ ಇಲ್ಲದ ವೇಳೆ ದುಷ್ಕರ್ಮಿಗಳು ಕೊಟ್ಟಿಗೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ರಾಸುಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸಹ ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದುಬಂದಿದೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.